ಜನರಿಕ್ ಔಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದ ನಗರದ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಾಮರಾಜನಗರ: ಬಡ ಜನರಿಗೆ ಅನುಕೂಲವಾಗುವ ಜನರಿಕ್ ಔಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಎದುರು ಜಮಾಯಿಸಿದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತ ಕೆಲಕಾಲ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಕೇಂದ್ರ ಸರ್ಕಾರದ ಮಹತ್ವಾಂಕಾಕ್ಷಿಯ ಬಡವವರಿಗಾಗಿ ಜಾರಿಗೆ ತಂದಿರುವ ಜನೆರಿಕ್ ಔಷಧಿ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಿಗಳನ್ನು ಒದಗಿಸುತ್ತಿದೆ. ಇದರಿಂದ ಲಕ್ಷಾಂತರ ಜನರು ಪ್ರಯೋಜನ ಪಡೆಯುತ್ತಿದ್ದಾರೆ ಎಂದರು. ಜನರಿಗೆ ಹೆಚ್ಚು ಅನುಕೂಲವಾಗಿರುವ ಇಂತಹ ಕೇಂದ್ರಗಳನ್ನು ಯಾವುದೋ ದ್ವೇಷಕ್ಕಾಗಿ ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದರು.
ಜನರಿಗೆ ಉಪಯೋಗವಾಗಿರುವ ಜನರಿಕ್ ಕೇಂದ್ರಗಳನ್ನು ಮುಚ್ಚುವ ಹಂತಕ್ಕೆ ಸರ್ಕಾರ ಬಂದಿದೆ. ಬಡವರ ಶಾಪ ಸರ್ಕಾರಕ್ಕೆ ತಟ್ಟಲಿದೆ. ಇದಕ್ಕೆ ತಕ್ಕ ಪ್ರತಿಫಲವನ್ನು ನೀವು ಅನುಭವಿಸಲಿದ್ದೀರಿ, ತಕ್ಷಣ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ನಿಜಧ್ವನಿಗೋವಿಂದ, ಹಾಲಿನ ನಾಗರಾಜು,ಮಹೇಶ್ ಗೌಡ, ಪಣ್ಯದಹುಂಡಿ ರಾಜು, ಅಜಯ್, ಡಾ.ಪರಮೇಶ್ವರಪ್ಪ, ಸುರೇಶ್ ಗೌಡ, ಅರುಣ್ ಕುಮಾರ್ ಗೌಡ, ತಾಂಡವಮೂರ್ತಿ, ವೀರಭದ್ರ, ರಾಚಪ್ಪ, ಲಿಂಗರಾಜು, ಸಿದ್ದಪ್ಪ, ಸುರೇಶ್, ನಂಜುಂಡ, ಶಿವು, ಸುಬ್ಬಣ್ಣ ಇತರರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.