ಗ್ರಾಮ ಮಟ್ಟದಲ್ಲೂ ಕ್ರೀಡಾಂಗಣ ಸರ್ಕಾರದ ಉದ್ದೇಶ: ಸಚಿವ ದರ್ಶನಾಪುರ

KannadaprabhaNewsNetwork |  
Published : Oct 19, 2025, 01:00 AM IST
ಕಲಬುರಗಿ ವಿಭಾಗ ಮಟ್ಟದ 14 ಮತ್ತು 17 ರ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಖೋಖೋ ಕ್ರೀಡಾಕೂಟದ ಜ್ಯೋತಿಯನ್ನು ಸಚಿವರು, ಶಾಸಕರು ಬೆಳಗಿಸಿದರು. | Kannada Prabha

ಸಾರಾಂಶ

ಪಾಠದ ಜತೆ ಕ್ರೀಡೆಗಳು ಮುಖ್ಯವಾಗಿವೆ. ತಾಲೂಕು ಕೇಂದ್ರದಲ್ಲಿ ಇರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕ್ರೀಡಾಂಗಣಗಳನ್ನು ನಿರ್ಮಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದರು.

ಕನ್ನಡಪ್ರಭ ವಾರ್ತೆ ಸುರಪುರ

ಪಾಠದ ಜತೆ ಕ್ರೀಡೆಗಳು ಮುಖ್ಯವಾಗಿವೆ. ತಾಲೂಕು ಕೇಂದ್ರದಲ್ಲಿ ಇರುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಕ್ರೀಡಾಂಗಣಗಳನ್ನು ನಿರ್ಮಿಸುವ ಉದ್ದೇಶ ಸರಕಾರ ಹೊಂದಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದರು.

ನಗರದ ತಾಲೂಕು ಕ್ರೀಡಾಂಗಣದಲ್ಲಿ 2025-26ನೇ ಸಾಲಿನ ಕಲಬುರಗಿ ವಿಭಾಗ ಮಟ್ಟದ 14 ಮತ್ತು 17ರ ವಯೋಮಿತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಖೋಖೋ ಕ್ರೀಡಾಕೂಟದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೇದಿಕೆಯಲ್ಲಿ ಜರುಗಿದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆಗಳು ಎಲ್ಲ ಜಿಲ್ಲೆಗಳಲ್ಲಿ ಸಮನ್ವಯ ಬೆರೆಸಲಿದೆ. ಎಲ್ಲ ಕ್ರೀಡಾಪಟಗಳು ಕ್ರೀಡಾ ಮನೋಭಾವದಿಂದ ಆಡಬೇಕು. ಸೋಲು ಗೆಲುವು ಕ್ರೀಡೆಯಲ್ಲಿ ಮುಖ್ಯವಲ್ಲ. ತೀರ್ಪುಗಾರರು ತಾರತಮ್ಯ ಮಾಡದೆ ತೀರ್ಪು ನೀಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ರಾಜಾ ವೇಣುಗೋಪಾಲ ನಾಯಕ ಮಾತನಾಡಿ, ಆಟದಲ್ಲಿ ಸೋಲು ಗೆಲುವು ಎನ್ನುವುದು ಸಾಮಾನ್ಯವಾಗಿದೆ. ಭಾಗವಹಿಸಿರುವ ಎಲ್ಲ ಕ್ರೀಡಾ ವಿದ್ಯಾರ್ಥಿಗಳು ಕ್ರೀಡಾ ಮನೋಭಾವನೆ ಯೊಂದಿಗೆ ಆಟವಾಡಬೇಕು ಎಂದು ಕಿವಿಮಾತು ಹೇಳಿದರು. ನಮ್ಮ ಸಚಿವರಾಗಲಿ ಮತ್ತು ಮುಖ್ಯಮಂತ್ರಿ ಉಪಮುಖ್ಯಮಂತ್ರಿಗಳಾಗಲಿ ನಮ್ಮ ಸರಕಾರ ಕ್ರೀಡೆಗೆ ಹೆಚ್ಚು ಹೊತ್ತು ನೀಡುತ್ತಿದ್ದು ಇನ್ನೂ ಹೆಚ್ಚಿನ ಸಹಕಾರವನ್ನು ಕ್ರೀಡೆಗೆ ನೀಡಲಾಗುವುದು ಎಂದು ಭರವಸೆಯನ್ನು ನೀಡಿದರು.

ಉದ್ಘಾಟನೆ ಆರಂಭದಲ್ಲಿ ಕ್ರೀಡಾ ಧ್ವಜಾರೋಹಣ ಹಾಗೂ ಕ್ರೀಡಾಪಟುಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ ನಂತರ ಎಲ್ಲ ಕ್ರೀಡಾಪಟುಗಳಿಗೆ ಹಾಗೂ ವೇದಿಕೆಯ ಮೇಲಿನ ಗಣ್ಯರಿಗೆ ಕ್ರೀಡಾ ಪ್ರತಿಜ್ಞೆಯನ್ನು ಬೋಧಿಸಲಾಯಿತು. ಕ್ರೀಡಾಕೂಟದಲ್ಲಿ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಿಂದ ಪ್ರತಿ ಜಿಲ್ಲೆಯಿಂದ ನಾಲ್ಕು ತಂಡಗಳಂತೆ ಕ್ರೀಡಾಪಟುಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ಕ್ರೀಡಾಂಗಣದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ನಾಣ್ಯ ಚಿಮ್ಮುವ ಮೂಲಕ ಖೋಖೋ ಪಂದ್ಯಕ್ಕೆ ಚಾಲನೆ ನೀಡಿದರು.

ನಗರಸಭೆ ಅಧ್ಯಕ್ಷ ಹೀನಾ ಕೌಸರ್, ಉಪಾಧ್ಯಕ್ಷ ರಾಜಾ ಪಿಡ್ಡ ನಾಯಕ ತಾತಾ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಚೆನ್ನಬಸಪ್ಪ ಮುಧೋಳ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಠ್ಠಲ್ ಯಾದವ್, ಜಿ.ಪಂ ಮಾಜಿ ಅಧ್ಯಕ್ಷ ರಾಜಶೇಖರ ವಜ್ಜಲ್,ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಾಜಾ ಕುಮಾರ ನಾಯಕ, ತಹಸಿಲ್ದಾರ್ ಹುಸೇನ್ ಸಾಬ್ ಸರಕಾವಸ್, ನಯೋಪ್ರಾ ಮಾಜಿ ಅಧ್ಯಕ್ಷ ರಾಜಾ ವಾಸುದೇವ ನಾಯಕ,ಸೂಗುರೇಶ ವಾರದ,ಮುಖಂಡರಾದ ರಾಜಾ ಸಂತೋಷ ನಾಯಕ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗಣ್ಣ ಬಾಚಿಮಟ್ಟಿ,ರಾಜಾ ಸುಶಾಂತ ನಾಯಕ,ದೊಡ್ಡ ದೇಸಾಯಿ,ನಗರಸಭೆ ಕಮಿಷನರ್ ಬಸವರಾಜ ಟಣಕೆದಾರ,ಬಿಇಓ ಯಲ್ಲಪ್ಪ ಕಾಡ್ಲೂರ, ದೈಹಿಕ ಶಿಕ್ಷಣಾಧಿಕಾರಿ ಮಲ್ಲಣ್ಣ ದೊಡ್ಡಮನಿ ಸೇರಿದಂತೆ ಇತರರು ಇದ್ದರು.

PREV

Recommended Stories

ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ