2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಪೂರೈಕೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ತಮ್ಮ ಕಚೇರಿಯಲ್ಲಿ ಕಿಟ್ ಗಳನ್ನು ವಿತರಿಸಿದರು.
ಉಡುಪಿ: 2025–26ನೇ ಸಾಲಿನ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಪೂರೈಕೆ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ತಮ್ಮ ಕಚೇರಿಯಲ್ಲಿ ಕಿಟ್ ಗಳನ್ನು ವಿತರಿಸಿದರು. ಟೈಲರಿಂಗ್ ಮಿಷನ್, ಮರಗೆಲಸ, ಗಾರೆ ಕೆಲಸ, ಎಲೆಕ್ಟ್ರಿಷಿಯನ್, ಬ್ಯೂಟಿ ಪಾರ್ಲರ್ ಮುಂತಾದ 55 ಮಂದಿ ಫಲಾನುಭವಿಗಳು ಕಿಟ್ ಗಳನ್ನು ಪಡೆದುಕೊಂಡರು.
ನಂತರ ಮಾತನಾಡಿದ ಶಾಸಕರು, ಈ ಯೋಜನೆಗಳ ಮೂಲಕ ಆಯಾ ವೃತ್ತಿಯಲ್ಲಿ ತೊಡಗಿರುವವರಿಗೆ ಅಗತ್ಯವಾದ ಕಿಟ್ ಗಳನ್ನು ನೀಡಲಾಗಿದ್ದು, ಇದರಿಂದ ಜನರ ಉದ್ಯೋಗದಲ್ಲಿ ಸ್ಥಿರತೆ ಹಾಗೂ ಆದಾಯ ಹೆಚ್ಚಳಕ್ಕೆ ಸಹಾಯವಾಗಲಿದೆ. ಹಲವರು ತಮ್ಮ ಜೀವನೋಪಾಯವನ್ನು ಸುಧಾರಿಸಿಕೊಳ್ಳಲು ಈ ಯೋಜನೆಗಳ ನೆರವು ಪ್ರಮುಖವಾಗಲಿದೆ. ಸ್ವಯಂ ಉದ್ಯೋಗಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದ್ದು, ಜನರು ಈ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು ಎಂದರು. ಇದೇ ಸಂದರ್ಭ, ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮೂಲಕ ಕೃಷ್ಣ ಪೂಜಾರಿ ಅವರಿಗೆ ಕೃತಕ ಕಾಲು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮಾಂತರ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕ ಜಿ. ವಾಮನ ನಾಯಕ್, ಹಂದಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಶೋಭಾ, ನಿವೃತ್ತ ಶಿಕ್ಷಕಿ ಲಲಿತಾ ಬಾಯಿ ನಿವೃತ್ತ ಶಿಕ್ಷಕರು, ಕೆಂಜೂರು ಶಾಲೆಯ ಮುಖ್ಯ ಶಿಕ್ಷಕ ಕೆ. ಶಾಂತಾರಾಮ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.