ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವು ಅಗತ್ಯ

KannadaprabhaNewsNetwork |  
Published : Jun 10, 2025, 08:43 AM ISTUpdated : Jun 10, 2025, 12:57 PM IST
೯ಕೆಎಲ್‌ಆರ್೭ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಶಾಹಿ ಎಕ್ಸ್‌ಪೋರ್ಟ್ಸ್ ಸಂಸ್ಥೆ ನಿವೃತ್ತ ಜನರಲ್ ಮ್ಯಾನೇಜರ್  ಎಲ್.ರಘುರಾಜ್ ಇಡೀ ವರ್ಷಕ್ಕಾಗುವಷ್ಟು ನೋಟ್ ಪುಸ್ತಕ ಜಾಮಿಟ್ರಿ ಬಾಕ್ಸ್ ಕೊಡುಗೆಯಾಗಿ ನೀಡಿದರು. | Kannada Prabha

ಸಾರಾಂಶ

ಗುಣಾತ್ಮಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಸಮಾಜ, ಸಂಸ್ಥೆಗಳು ಕೈಜೋಡಿಸಬೇಕು ಎಂದು ಶಾಹಿ ಎಕ್ಸ್‌ಪೋರ್ಟ್ಸ್‌ನ ನಿವೃತ್ತ ಜನರಲ್ ಮ್ಯಾನೇಜರ್ ಎಲ್.ರಘುರಾಜ್ ಕರೆ ನೀಡಿದರು.

  ಕೋಲಾರ  : ಗುಣಾತ್ಮಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಸಮಾಜ, ಸಂಸ್ಥೆಗಳು ಕೈಜೋಡಿಸಬೇಕು ಎಂದು ಶಾಹಿ ಎಕ್ಸ್‌ಪೋರ್ಟ್ಸ್‌ನ ನಿವೃತ್ತ ಜನರಲ್ ಮ್ಯಾನೇಜರ್ ಎಲ್.ರಘುರಾಜ್ ಕರೆ ನೀಡಿದರು. 

ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಮಕ್ಕಳ ಕಲಿಕೆಗೆ ಕೊರತೆಯಾಗದ ರೀತಿ ನೋಟ್ ಪುಸ್ತಕ, ಗಣಿತ ಕಲಿಕೆಗೆ ಅನುಕೂಲವಾಗಲು ಜಾಮಿಟ್ರಿ ಬಾಕ್ಸ್, ಗ್ರಾಫ್ ಪುಸ್ತಕ ಉಚಿತವಾಗಿ ವಿತರಿಸಿ ಮಾತನಾಡಿದರು.ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸುವ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳ ನೆರವು ಅಗತ್ಯವಿದ್ದು, ಅರಾಭಿಕೊತ್ತನೂರು ಸರ್ಕಾರಿ ಶಾಲೆಯ ಬೆಟ್ಟದ ತಪ್ಪಲಿನ ಸುಂದರ ಪರಿಸರ ಮಕ್ಕಳ ಕಲಿಕೆಗೆ ಪೂರಕವಾಗಿದೆ ಎಂದು ಅಭಿಪ್ರಾಯಪಟ್ಟರು. 

ಖಾಸಗಿ ಪೈಪೋಟಿ ಇಂದು ಕಾಡುತ್ತಿದೆ, ಇಂತಹ ಸಂದರ್ಭದಲ್ಲಿ ಈ ಶಾಲೆಗಳ ಬಡ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಸ್ಪರ್ಧಾತ್ಮಕ ಪೈಪೋಟಿಗೆ ಎದುರಾಗಿ ನಿಲ್ಲುವ ಶಕ್ತಿ ತುಂಬಿ ಬೆಳೆಸುವ ಅಗತ್ಯವಿದೆ ಎಂದರು.ಶಿಕ್ಷಣದ ಜತೆಗೆ ಸಂಸ್ಕಾರವನ್ನು ಕಲಿಸುವ ಅಗತ್ಯವಿದೆ, ಓದಿನ ಜತೆ ಶಿಸ್ತುಬದ್ದ ಜೀವನದ ಪಾಠ ಮಕ್ಕಳಿಗೆ ನೀಡುತ್ತಿರುವ ಈ ಶಾಲೆ ಆವರಣದಲ್ಲಿ ಧನಾತ್ಮಕ ಶಕ್ತಿಯ ಸಂಚಲನವಾಗುತ್ತಿದೆ, ಇಲ್ಲಿನ ಪರಿಸರ, ಬೆಟ್ಟದ ತಪ್ಪಲಿನ ಸುಂದರ ಪ್ರಕೃತಿಯ ಮಡಿಲು ಕಲಿಕೆಗೆ ಹೇಳಿ ಮಾಡಿಸಿದಂತಿದೆ, ಈ ವಾತಾವರಣದಲ್ಲಿ ಮಕ್ಕಳು ಕಲಿತರೆ ಸಾಧಕರಾಗುವುದರಲ್ಲಿ ಸಂಶಯವಿಲ್ಲ ಎಂದರು.

ದೇಶ ಕಂಡ ಸಾಧಕರೆಲ್ಲಾ ಸರ್ಕಾರಿ ಶಾಲೆಯಲ್ಲೇ ಓದಿದವರು, ಕೀಳರಿಮೆ ತೊರೆದು ಮಕ್ಕಳನ್ನು ಇಲ್ಲಿ ದಾಖಲಿಸುವ ಮೂಲಕ ಸಮಾನ ಶಿಕ್ಷಣಕ್ಕೆ ಹಾನಿಯಾಗುವುದನ್ನು ತಪ್ಪಿಸುವ ಹೊಣೆ ಪೋಷಕರು,ಸರ್ಕಾರ ಮತ್ತು ಸಮಾಜದ ಮೇಲಿದೆ ಎಂದು ಅಭಿಪ್ರಾಯಪಟ್ಟರು.

ಶಾಲೆಗೆ ಬರುವ ಮಕ್ಕಳು ಶಿಸ್ತು ರೂಢಿಸಿಕೊಳ್ಳಿ, ಪರಸ್ಪರ ದ್ವೇಷ, ಅಸೂಯೆ ತೊರೆದು ಎಲ್ಲರೂ ಸ್ನೇಹಿತರಂತೆ ಇರಬೇಕು, ಜಾತಿ, ಧರ್ಮದ ಎಲ್ಲೆ ಮೀರಿ ನಾವೆಲ್ಲಾ ಒಂದೇ ಎಂಬ ಪವಿತ್ರ ಭಾವನೆಯೊಂದಿಗೆ ಉತ್ತಮ ಸ್ನೇಹಿತರಾಗಿ ಕಲಿಕೆಯ ಧ್ಯೇಯ, ಗುರಿ ಸಾಧನೆಗೆ ಮುನ್ನಡಿ ಬರೆಯಬೇಕು, ಮೊಬೈಲ್, ಟಿವಿ ಅಗತ್ಯಕ್ಕಿಂತ ಹೆಚ್ಚು ಬಳಸದಿರಿ, ಅವುಗಳ ದಾಸರಾಗದಿರಿ ಎಂದು ಕಿವಿಮಾತು ಹೇಳಿದರು.ಈ ಮಕ್ಕಳು, ಇಲ್ಲಿನ ಕಲಿಕೆಗೆ ಪೂರಕವಾದ ಪರಿಸರ, ಸೌಲಭ್ಯಗಳ ಸದ್ಬಳಕೆ ಕಂಡಾಗ ನೀಡುತ್ತಿರುವ ಸಹಾಯ ಸಾರ್ಥಕವೆನಿಸುತ್ತಿದೆ, ಇಂತಹ ಶಾಲೆಗೆ ಇನ್ನಷ್ಟು ನೆರವು ಒದಗಿಸುವ ಮೂಲಕ ನಿಮ್ಮೊಂದಿಗೆ ಸದಾ ಇರುವುದಾಗಿ ತಿಳಿಸಿದರು.

ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಸಿದ್ದೇಶ್ವರಿ, ಶಿಕ್ಷಕರಾದ ಸುಗುಣಾ, ಶ್ವೇತಾ, ಕೆ.ಲೀಲಾ, ವೆಂಕಟರೆಡ್ಡಿ, ರಮಾದೇವಿ, ಡಿ.ಚಂದ್ರಶೇಖರ್ ಇದ್ದರು.

PREV
Read more Articles on

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ