ಕನ್ನಡಪ್ರಭ ವಾರ್ತೆ ಸೊರಬ
ಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಹಿರಿಮೆಗಳಾಗಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಿಂದ ಅನೇಕ ಸಾಧಕರು ಸಮಾಜದ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ಎವೈ. ರಾಘವೇಂದ್ರ ಹೇಳಿದರು.ಶನಿವಾರ ತಾಲೂಕಿನ ಹರೀಶಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಉನ್ನತೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಪಡೆದು ಉತ್ತಮ ಸತ್ಪ್ರಜೆಗಳಾಗಿ ಹೊರಹೊಮ್ಮಬೇಕು. ವಿದ್ಯಾರ್ಥಿಗಳ ಶಿಕ್ಷಣದ ವಿಷಯದಲ್ಲಿ ರಾಜಕೀಯ ಸಲ್ಲದು. ಮಕ್ಕಳಿಗೆ ಶಿಕ್ಷಣಕ್ಕೆ ಬೇಕಾದ ಪೂರಕ ವಾತಾವರಣವನ್ನು ನಿರ್ಮಿಸಿಕೊಡುವ ಜವಾಬ್ದಾರಿ ಜನಪ್ರತಿನಿಧಿಗಳ ಮೇಲಿದೆ. ತಾವು ಹರೀಶಿ ಶಾಲೆಯ ಅಭಿವೃದ್ಧಿಗೆ ₹10 ಲಕ್ಷ ಅನುದಾನ ನೀಡುವುದಾಗಿ ಘೋಷಣೆ ಮಾಡಿದರು.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ತರುವಾಯ ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಜರುಗಿದೆ. ವೈದ್ಯಕೀಯ ಶಿಕ್ಷಣ ಉನ್ನತೀಕರಿಸಲಾಗಿದೆ. ಕೃಷಿ ವಿವಿ ಸ್ಥಾಪನೆ ಮಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲಾಗುತ್ತಿದೆ. ಜಿಲ್ಲಾ ಕೇಂದ್ರದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಯಿಂದ ಅನೇಕ ಕೈಗಾರಿಕೆಗಳ ಉಗಮಕ್ಕೆ ನಾಂದಿಯಾಗಲಿದೆ. ಈ ಮೂಲಕ ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆ ಆಗಲಿದೆ ಎಂಬ ಅಭಿಲಾಷೆ ಹೊಂದಲಾಗಿದೆ ಎಂದರು.ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ ಜಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಅಧ್ಯಕ್ಷೆ ಅನುಸೂಯ ಗಣಪತಿ ನಾಯ್ಕ, ಉಪಾಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷೆ ಕವಿತಾ ಬಾಪಟ್, ಅಮೃತ ಮಹೋತ್ಸವ ಆಚರಣಾ ಸಮಿತಿ ಕಾರ್ಯಾಧ್ಯಕ್ಷ ಸುನಿಲ್‌ಗೌಡ, ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ, ಗ್ರಾಪಂ ಮಾಜಿ ಅಧ್ಯಕ್ಷ ಪರಮೇಶ್ವರ ನಾಯ್ಕ ಮಣ್ಣತ್ತಿ, ರಾಜು ಕೆಂಚಿಕೊಪ್ಪ, ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯ ಸುಧಾಕರ ಪಿ. ನಾಯ್ಕ ನೆಲ್ಲೂರು, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಕಡಸೂರು, ಪ್ರಮುಖರಾದ ಪ್ರಶಾಂತ ಎಂ. ನಾಯ್ಕ, ಈಶ್ವರಪ್ಪ ಚನ್ನಪಟ್ಟಣ, ರಾಜು ಎಂ. ತಲ್ಲೂರು, ಮುಖ್ಯಶಿಕ್ಷಕರು, ಸಿಆರ್‌ಪಿ, ಬಿಆರ್‌ಪಿ, ಶಿಕ್ಷಕರ ಸಂಘ ಪದಾಧಿಕಾರಿಗಳು ಹಾಜರಿದ್ದರು.
- - -ಕೋಟ್ ಸೊರಬ ತಾಲೂಕಿನಲ್ಲಿ ಅನೇಕ ಐತಿಹಾಸಿಕ ಹಾಗೂ ಪ್ರವಾಸಿ ತಾಣಗಳಿವೆ. ಚಂದ್ರಗುತ್ತಿಯ ಐತಿಹಾಸಿಕ ಶ್ರೀ ರೇಣುಕಾಂಬ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುವ ಹಿನ್ನೆಲೆ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಗೊಳಿಸಲಾಗುವುದು. ಜೊತೆಗೆ ಗುಡವಿ ಪಕ್ಷಿಧಾಮ ಸೇರಿದಂತೆ ಅನೇಕ ಕ್ಷೇತ್ರಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ಕೈಗೆತ್ತಿಕೊಂಡು ಅಭಿವೃದ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು
- ಬಿ.ವೈ.ರಾಘವೇಂದ್ರ, ಸಂಸದ- - -
-20ಕೆಪಿಸೊರಬ05:ಸೊರಬ ತಾಲೂಕಿನ ಹರೀಶಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿದರು.