ಭಾರತೀಯ ಸನಾತನ ಧರ್ಮ, ತತ್ತ್ವಶಾಸ್ತ್ರ, ಆಧ್ಯಾತ್ಮಿಕತೆ ಹಾಗೂ ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಅಪಾರ ಕೊಡುಗೆ ನೀಡಿರುವ ಕನ್ನಡ ನಾಡಿನ ಆಚಾರ್ಯ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್, ಸತ್ಯಾತ್ಮ ಸೇನೆಯ ಪ್ರಮುಖರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದರು.
ಕನ್ನಡಪ್ರಭ ವಾರ್ತೆ ಕಲಬುರಗಿ
ಭಾರತೀಯ ಸನಾತನ ಧರ್ಮ, ತತ್ತ್ವಶಾಸ್ತ್ರ, ಆಧ್ಯಾತ್ಮಿಕತೆ ಹಾಗೂ ಕರ್ನಾಟಕದ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಗೆ ಅಪಾರ ಕೊಡುಗೆ ನೀಡಿರುವ ಕನ್ನಡ ನಾಡಿನ ಆಚಾರ್ಯ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವಂತೆ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್, ಸತ್ಯಾತ್ಮ ಸೇನೆಯ ಪ್ರಮುಖರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದರು.ಶ್ರೀ ಮಧ್ವಾಚಾರ್ಯರ ತತ್ತ್ವ, ವಿಚಾರಧಾರೆ ಮತ್ತು ಆದರ್ಶಗಳನ್ನು ಮಧ್ವ ಪರಂಪರೆಯ ಆಚಾರ್ಯರು, ಮಠಾಧೀಶರು ಹಾಗೂ ಭಕ್ತರು ಇಂದಿಗೂ ನಿರಂತರವಾಗಿ ಸಮಾಜದಲ್ಲಿ ಪ್ರಚಾರಪಡಿಸುತ್ತಿದ್ದಾರೆ. ಅವರು ಪ್ರತಿಪಾದಿಸಿದ ದ್ವೈತ ಸಿದ್ಧಾಂತವು ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಧಾರ್ಮಿಕ ಹಾಗೂ ತತ್ತ್ವಶಾಸ್ತ್ರೀಯ ಕ್ಷೇತ್ರದಲ್ಲಿ ಮಹತ್ವದ ಸ್ಥಾನವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ, ಪ್ರತಿವರ್ಷ ವಿಜಯದಶಮಿ ದಿನ ಬರುವ ಶ್ರೀ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಕರ್ನಾಟಕ ಸರ್ಕಾರದ ವತಿಯಿಂದ ಜಿಲ್ಲೆ, ರಾಜ್ಯಮಟ್ಟದಲ್ಲಿ ಅಧಿಕೃತವಾಗಿ ಆಚರಿಸಬೇಕು. ಶ್ರೀ ಮಧ್ವಾಚಾರ್ಯರ ಜೀವನ, ತತ್ತ್ವಶಾಸ್ತ್ರ ಹಾಗೂ ಕೊಡುಗೆಗಳ ಕುರಿತು ವಿಚಾರ ಸಂಕಿರಣ, ಉಪನ್ಯಾಸ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು, ಜತೆಗೆ ಅವರ ಮಹಾನ್ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸಂಬಂಧಿಸಿದ ಇಲಾಖೆಗೆ ಅಗತ್ಯ ನಿರ್ದೇಶನ ನೀಡಿ, ಶ್ರೀ ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ಕರ್ನಾಟಕ ಸರ್ಕಾರದ ವತಿಯಿಂದ ಅಧಿಕೃತವಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಒತ್ತಾಯಿಸಲಾಯಿತು.ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಅಲ್ಲಂಪ್ರಭು ಪಾಟೀಲ್, ಉತ್ತರಾದಿ ಮಠಾಧಿಕಾರಿಗಳಾದ ರಾಮಾಚಾರ್ಯ ಘಂಟಿ, ಸಂಸ್ಕೃತ ವಿದ್ವಾಂಸರಾದ ನವಲಿ ಗುರುಮಧ್ವಾಚಾರ್ಯರು, ಬ್ರಾಹ್ಮಣ ಸಮಾಜದ ಅಧ್ಯಕ್ಷ ಪಾಂಡುರಂಗ ದೇಶಮುಖ, ಪತ್ರಕರ್ತ ಶೇಷಮೂರ್ತಿ ಅವಧಾನಿ, ಚಂದ್ರಕಾಂತ ದೇಶಮುಖ, ವಿಎಂಎಂಪಿ ಅಧ್ಯಕ್ಷ ಡಿಕೆ ಕುಲಕರ್ಣಿ, ಆನಂದ ತೀರ್ಥ ಜೋಶಿ, ಲಕ್ಷ್ಮಣಾಚಾರ್ಯ ಗಂಗಾವತಿ, ವಿನುತ ಕುಲಕರ್ಣಿ, ಭರತ ಕುಲಕರ್ಣಿ ಚಿತ್ತಾಪುರ, ರಘುತ್ತಮ್ ಘಂಟಿ, ಜಯತಿರ್ಥ ಜೋಶಿ, ಅಮಿತ ಕುಲಕರ್ಣಿ, ನಾರಾಯಣ ಪೂಜಾರ್, ಪ್ರಶಾಂತ್ ಕೊರಳ್ಳಿ, ಶ್ರೀನಿವಾಸ್ ದೇಸಾಯಿ ಉಪಸ್ಥಿತರಿದ್ದರು.
-----ಫೋಟೊ-----
ಫೋಟೋ- ಡೆಲಿಗೇಷನ್ 1 ಮತ್ತು ಡೆಲಿಗೇಷನ್ 2
ಕಲಬುರಗಿಯಲ್ಲಿ ಜಿಲ್ಲಾ ಬ್ರಾಹ್ಮಣ ಸಂಘ, ವಿಶ್ವ ಮಧ್ವ ಮಹಾ ಪರಿಷತ್, ಸತ್ಯಾತ್ಮ ಸೇನೆಯ ಪದಾಧಿಕಾರಿಗಳು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಮನವಿ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಡಾ. ಶರಣಪ್ರಕಾಶ ಪಾಟೀಲ್, ಶಾಸಕ ಅಲ್ಲಂಪ್ರಭು ಪಾಟೀಲ್, ಪ್ರಮುಖರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.