ಈರುಳ್ಳಿ ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಲಿ: ವೀರಬಸಪ್ಪ ಹೂಗಾರ

KannadaprabhaNewsNetwork |  
Published : Oct 22, 2025, 01:03 AM IST
(20ಎನ್.ಆರ್.ಡಿ.1 ಮಹದಾಯಿ ಹೋರಾಟ ವೇದಿಕೆಯಲ್ಲಿ ರೈತ ಮುಖಂಡ ವೀರಭಸಪ್ಪ ಹೂಗಾರ ಮಾತನಾಡುತ್ತಿದ್ದಾರೆ.)  | Kannada Prabha

ಸಾರಾಂಶ

ಸರ್ಕಾರ ರೈತರ ಕಷ್ಟವನ್ನು ಅರಿತು ಬೆಳೆಹಾನಿಯಾದ ರೈತರ ಕೃಷಿ ಸಾಲಮನ್ನಾ ಮಾಡಬೇಕು. ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು.

ನರಗುಂದ: ಈರುಳ್ಳಿ ಬೆಳೆಗೆ ಯೋಗ್ಯ ಬೆಲೆ ಸಿಗದೆ ರೈತರು ತೊಂದರೆಯಲ್ಲಿದ್ದಾರೆ. ಸರ್ಕಾರ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ ಆಗ್ರಹಿಸಿದರು.

3646ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ನಿರಂತರ ಹೋರಾಟ ವೇದಿಕೆಯಲ್ಲಿ ಮಾತನಾಡಿ, ಉತ್ತರ ಕರ್ನಾಟಕ ಭಾಗದಲ್ಲಿಯೇ ಗದಗ ಜಿಲ್ಲೆ ಈರುಳ್ಳಿ ಬೆಳೆಯಲು ಹೆಸರುವಾಸಿ. ಜಿಲ್ಲೆಯ ನರಗುಂದ, ರೋಣ, ಲಕ್ಷ್ಮೇಶ್ವರ, ಶಿರಹಟ್ಟಿ, ಮುಂಡರಗಿ, ಗಜೇಂದ್ರಗಡ, ತಾಲೂಕುಗಳಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ರೈತರು ಈರುಳ್ಳಿ ಬಿತ್ತಿ ಪ್ರತಿ ಎಕರೆಗೆ ₹40ರಿಂದ ₹50 ಸಾವಿರ ಖರ್ಚು ಮಾಡಿದ್ದರು.

ಆದರೆ ವಿಪರೀತ ಮಳೆ ಸುರಿದು ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಉಳಿದ ಅಲ್ಪಸ್ವಲ್ಪ ಬೆಳೆಯನ್ನು ರೈತರು ಕಟಾವು ಮಾಡಿ ಈರುಳ್ಳಿ ಮಾರಾಟ ಮಾಡಲು ಮಾರುಕಟ್ಟೆಗೆ ಹೋದರೆ ಪ್ರತಿ 1 ಕ್ವಿಂಟಲ್‌ಗೆ ₹200 ಬೆಲೆ ಇದ್ದುದರಿಂದ ರೈತರಿಗೆ ದಿಕ್ಕು ತೋಚದಾಗಿದೆ.

ಸರ್ಕಾರ ರೈತರ ಕಷ್ಟವನ್ನು ಅರಿತು ಬೆಳೆಹಾನಿಯಾದ ರೈತರ ಕೃಷಿ ಸಾಲಮನ್ನಾ ಮಾಡಬೇಕು. ಬೆಳೆಹಾನಿ ಪರಿಹಾರ ಬಿಡುಗಡೆಗೊಳಿಸಬೇಕು. ಜಿಲ್ಲೆಗೆ ವಿಶೇಷ ಪ್ಯಾಕೇಜ್ ನೀಡಿ ಕಷ್ಟದಲ್ಲಿರುವ ರೈತರಿಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು. ಒಂದು ವೇಳೆ ಸರ್ಕಾರ ಕಷ್ಟದಲ್ಲಿರುವ ರೈತರ ಸಹಾಯಕ್ಕೆ ಬರದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಅನಿವಾರ್ಯ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪರಶುರಾಮ ಜಂಬಗಿ, ಎಸ್.ಬಿ. ಜೋಗಣ್ಣವರ, ಸಿ.ಎಸ್. ಪಾಟೀಲ, ಸುಭಾಸ ಗಿರಿಯಣ್ಣವರ, ಹನುಮಂತ ಸರನಾಯ್ಕರ, ಶಂಕ್ರಪ್ಪ ಜಾಧವ, ಯಲ್ಲಪ್ಪ ಚಲವಣ್ಣವರ, ಅರ್ಜುನ ಮಾನೆ, ಶಿವಪ್ಪ ಸಾತಣ್ಣವರ, ಪರಮೇಶ ಅಣ್ಣಿಗೇರಿ, ಸೋಮಲಿಂಗಪ್ಪ ಆಯಿಟ್ಟಿ, ಫಕೀರಪ್ಪ ಅಣ್ಣಿಗೇರಿ, ಅನಸವ್ವ ಶಿಂದೆ, ನಾಗರತ್ನ ಸವಳಭಾವಿ, ವಾಸು ಚವಾಣ, ವಿಜಯಕುಮಾರ ಹೂಗಾರ ಇದ್ದರು. ನಾಳೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅ. 23ರಂದು ಬೆಳಗ್ಗೆ 11ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಘನ ಉಪಸ್ಥಿತಿ ವಹಿಸುವರು.ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಮುಖ್ಯ ಸಚೇತಕ, ವಿಧಾನಪರಿಷತ್‌ ಸದಸ್ಯ ಸಲೀಂ ಅಹ್ಮದ್, ರೋಣ ಶಾಸಕ ಜಿ.ಎಸ್. ಪಾಟೀಲ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಸಂಸದ ಪಿ.ಸಿ. ಗದ್ದಿಗೌಡರ, ವಿಧಾನಪರಿಷತ್‌ ಸದಸ್ಯ ಎಸ್.ವಿ. ಸಂಕನೂರ ಇತರರು ತಿಳಿಸಿದ್ದಾರೆ.

PREV

Recommended Stories

ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಹೊಸೂರಿಗೆ ಮೆಟ್ರೋ ವಿಸ್ತರಣೆ ಅಸಾಧ್ಯ : ರಾಜ್ಯ ಸರ್ಕಾರಕ್ಕೆ ಬಿಎಂಆರ್‌ಸಿಎಲ್‌ ವರದಿ