ಕನ್ನಡಪ್ರಭ ವಾರ್ತೆ ಮಧುಗಿರಿ
ಭಾನುವಾರ ತಾಲೂಕಿನ ದೊಡ್ಡೇರಿ ಹೋಬಳಿ ಕವಣದಾಲ ಗ್ರಾಮದಲ್ಲಿ ನಿರ್ಮಿಸಿರುವ ಗ್ರಾಪಂ ಕಟ್ಟಡ ನವೀಕರಣ, ಗುಬಲಗುಟ್ಟೆ ಶ್ರೀ ಆಂಜನೇಯಸ್ವಾಮಿ ದೇಗುಲದ ಸಮೀಪ ನೂತನ ರಸ್ತೆ ಲೋಕಾರ್ಪಣೆ ಹಾಗೂ ವಿಶೇಷ ಚೇತನರಿಗೆ ಹಲವು ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಗನವಾಡಿಗಳಲ್ಲಿ ಎಲ್ಲ ಜನಾಂಗದ ಮಕ್ಕಳು ಕಲಿಯುತ್ತಿದ್ದು, ಇವರಿಗೆ ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ಸಮವಸ್ತ್ರ, ಒಂದು ಜೊತೆ ಶೂ ಅಥವಾ ಚಪ್ಪಲಿ ವಿತರಿಸುವಂತೆ ಸರ್ಕಾರವನ್ನು ಒತ್ತಾಯಿಸುತ್ತೇನೆ. ಒಂದು ವೇಳೆ ಸರ್ಕಾರ ಈ ಹೊಸ ಯೋಜನೆ ಮುಂದೂಡಿದರೆ ಮುಂಬರುವ ದಿನಗಳಲ್ಲಿ ನಮ್ಮ ತಾಲೂಕಿನ ಅಂಗನವಾಡಿ ಮಕ್ಕಳಿಗೆ ವಿತರಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಹಳ್ಳಿಗರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸದೃಢವಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ. ಹಳ್ಳಿಗಳು ಭಾರತದ ಬೆನ್ನೆಲುಬು, ಶ್ರಮ ಜೀವನ ನಡೆಸುವ ನಿಟ್ಟಿನಲ್ಲಿ , ಬೆವರು ಸುರಿಸಿ ಬದುಕು ಕಟ್ಟಿಕೊಳ್ಳುವ ಮೂಲಕ ಆರ್ಥಿಕವಾಗಿ ಸದೃಢರಾಗಿ ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸತ್ಪ್ರಜೆಗಳನ್ನಾಗಿಸಿ ಸ್ವಾಭಿಮಾನದ ಬದುಕು ನಡೆಸಬೇಕಿದೆ ಎಂದು ಕರೆ ನೀಡಿದರು. ರಾಜಕಾರಣದಲ್ಲಿ ಅಧಿಕಾರ ಯಾರಿಗೂ ಶಾಶ್ವತವಲ್ಲ, ಅಧಿಕಾರ ಸಿಕ್ಕಾಗ ಶ್ರೀಸಾಮಾನ್ಯರಿಗೆ ಅಗತ್ಯವಾದ ಮೂಲ ಸೌಲಭ್ಯ ಕಲ್ಪಿಸಿ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸ ಗಳಿಸಿ ಸೈ ಎನಿಸಿಕೊಳ್ಳಬೇಕು. ಬೇಸಿಗೆ ಸಮೀಸುತ್ತಿದ್ದು, ಅಧಿಕಾರಿಗಳು ಎಲ್ಲಿಯೂ ಕುಡಿವ ನೀರು ಮತ್ತು ವಿದ್ಯುತ್ ಕೊರತೆ ಆಗದಂತೆ ಕ್ರಮ ಕೈಗೊಳ್ಳಬೇಕು. ಈ ವ್ಯಾಪ್ತಿಯಲ್ಲಿ 8 .30 ಕೋಟಿ ರು.ಗಳನ್ನು ಪಕ್ಷಾತೀತವಾಗಿ ಸಾಲ ವಿತರಿಸಲಾಗಿದೆ. ರೈತರು ತಮ್ಮ ಬೇಸಾಯದ ಜೊತೆಗೆ ಉಪ ಕಸುಬು ಅಳವಡಿಕೊಳ್ಳಬೇಕು ಎಂದರು.
ಎಸಿ ಗೋಟೂರು ಶಿವಪ್ಪ ಮಾತನಾಡಿ, ವ್ಯವಸಾಯದ ಜೊತೆಗೆ ಉಪ ಕಸುಬು ಮಾಡುತ್ತಾ, ಹಳ್ಳಿಗಳ ಏಳಿಗೆಗೆ ಶ್ರಮಿಸಬೇಕು. ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ದೇಶದ ಪ್ರಗತಿಗೆ ಪೂರಕ ಎಂದರು.