ಬಜೆಟ್ ನಲ್ಲಿ ಶಿಕ್ಷಣದ ಪ್ರಮುಖ ಸಮಸ್ಯೆ ನಿವಾರಣೆಗೆ ಸರ್ಕಾರ ಗಮನಹರಿಸಿ: ಚಂದ್ರಕಲಾ

KannadaprabhaNewsNetwork |  
Published : Feb 14, 2024, 02:17 AM IST
34 | Kannada Prabha

ಸಾರಾಂಶ

ಕಳೆದ ಸರ್ಕಾರ ಅಪ್ರಜಾತಾಂತ್ರಿಕವಾಗಿ ರಾಜ್ಯದಲ್ಲಿ ಹೇರಿದ ಎನ್ಇಪಿ- 2020ರ ಎಲ್ಲಾ ಶಿಫಾರಸುಗಳನ್ನು ಹಿಂಪಡೆಯಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಹಿಂದಿನ ಮೊತ್ತವನ್ನೇ ಮುಂದುವರೆಸಬೇಕು. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ (ಡಿಬಿಟಿ) ಪದ್ಧತಿಯನ್ನು ಹಿಂಪಡೆಯಿರಿ. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರವನ್ನು ಅದರಲ್ಲೂ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ನಿವಾರಣೆಯ ಕಡೆಗೆ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಗಮನ ಹರಿಸಬೇಕು ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದು, ಅವರ ವ್ಯಾಸಂಗದ ಏಳಿಗೆಯನ್ನು ಆದ್ಯತೆ ಎಂದು ಭಾವಿಸಿ ಪ್ರಸ್ತುತ ಬಜೆಟ್ ನಲ್ಲಿ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬೇಡಿಕೆಗಳು

ಕಳೆದ ಸರ್ಕಾರ ಅಪ್ರಜಾತಾಂತ್ರಿಕವಾಗಿ ರಾಜ್ಯದಲ್ಲಿ ಹೇರಿದ ಎನ್ಇಪಿ- 2020ರ ಎಲ್ಲಾ ಶಿಫಾರಸುಗಳನ್ನು ಹಿಂಪಡೆಯಬೇಕು. ಕಟ್ಟಡ ಕಾರ್ಮಿಕರ ಮಕ್ಕಳ ಶಿಷ್ಯವೇತನದ ಹಿಂದಿನ ಮೊತ್ತವನ್ನೇ ಮುಂದುವರೆಸಬೇಕು. ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನದ ಹಣವನ್ನು ಅವರ ಬ್ಯಾಂಕ್ ಖಾತೆಗೆ ಹಾಕುವ (ಡಿಬಿಟಿ) ಪದ್ಧತಿಯನ್ನು ಹಿಂಪಡೆಯಿರಿ. ರಾಜ್ಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸಂಖ್ಯೆಯನ್ನು ಹೆಚ್ಚಿಸಬೇಕು.

ವಿವಿಗಳಲ್ಲಿ ಹಾಗೂ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧಕ ಹಾಗೂ ಭೋದಕೇತರ ಸಿಬ್ಬಂದಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ. ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕ ಹುದ್ದೆಗಳನ್ನು ಭರ್ತಿ ಮಾಡಿ. ಸರ್ಕಾರಿ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಿ. ಅಂಗನವಾಡಿಗಳ ನಿರ್ವಹಣೆಗೆ ಅನುದಾನ ಹೆಚ್ಚಿಸಿ. ಈ ಬಾರಿಯ ಬಜೆಟ್ ನಲ್ಲಿ ಯಾವುದೇ ನೂತನ ಸ್ವ- ಹಣಕಾಸು ಶಿಕ್ಷಣ ಸಂಸ್ಥೆಗಳನ್ನು ಘೋಷಿಸಬೇಡಿ ಎಂದು ಅವರು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ