ಕನ್ನಡಪ್ರಭ ವಾರ್ತೆ ಶಿವಮೊಗ್ಗ
ರಾಜ್ಯದಲ್ಲಿ ಆಶಾ ಕಾರ್ಯಕರ್ತೆಯರು ಚಳಿಯಲ್ಲೇ ಬೀದಿಯಲ್ಲಿ ಧರಣಿ ನಡೆಸುತ್ತಿದ್ದಾರೆ. ಅವರಿಗೆ ಸೂಕ್ತ ಸ್ಥಳ, ಕುಡಿವ ನೀರು ಹಾಗೂ ಊಟದ ವ್ಯವಸ್ಥೆಯೂ ಇಲ್ಲದ ಪರಿಸ್ಥಿತಿ ಇದೆ. ಅನೇಕರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಇಂತಹ ಪರಿಸ್ಥಿತಿ ಕಂಡಾಗ ನೋವಾಗುತ್ತದೆ ಎಂದು ಅವರು ಹೇಳಿದರು.
ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ ₹5,000 ರು. ಗೌರವಧನವನ್ನು ₹10,000 ರು.ಗಳಿಗೆ ಹೆಚ್ಚಿಸುವುದಾಗಿ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಆದರೆ, ಆ ಭರವಸೆ ಈಡೇರಿಲ್ಲ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈಗಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರಣಿ ಹಿಂಪಡೆಯುವಂತೆ ಮನವಿ ಮಾಡುತ್ತಿದ್ದಾರೆ. ಆದರೆ, ಯಾವುದೇ ಭರವಸೆಯಿಲ್ಲದೆ ಅವರು ಧರಣಿ ಹಿಂಪಡೆಯುವುದು ಹೇಗೆ ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿಗಳು ಮೊದಲು ಧರಣಿ ನಿರತ ಮಹಿಳೆಯರನ್ನು ಸ್ಥಳದಿಂದ ಎಬ್ಬಿಸುವ ಅಂದರೆ ಅವರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳಬೇಕು. ಅವರಿಗೆ ಸಮಾಧಾನವಾಗುವಂತಹ ನಿರ್ಧಾರ ಪ್ರಕಟಿಸಬೇಕು. ಕೇವಲ ಅಕ್ಕತಂಗಿಯರು ಎಂದು ಮಾತಿನಲ್ಲಿ ಹೇಳುವುದರಿಂದ ಪ್ರಯೋಜನವಿಲ್ಲ. ಅವರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.