ಜನವಿರೋಧಿ ಆದೇಶ ಸರ್ಕಾರ ಹಿಂಪಡೆಯಲಿ: ಸುನೀಲ ನಾಯ್ಕ

KannadaprabhaNewsNetwork |  
Published : Oct 07, 2026, 02:30 AM IST
ಪೊಟೋ ಪೈಲ್ : 6ಬಿಕೆಲ್2 | Kannada Prabha

ಸಾರಾಂಶ

ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಸರ್ಕಾರಿ ಭೂಮಿಯಲ್ಲಿ ಇರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಟ್ಟರೆ ಜನತೆಗೆ ತೊಂದರೆ ಆಗಲಿದೆ. ಕೂಡಲೇ ಸರ್ಕಾರ ಈ ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಭಟ್ಕಳ: ಬಿಜೆಪಿಯಿಂದ ನಮ್ಮ ಮನೆ- ನಮ್ಮ ಹಕ್ಕು ಘೋಷವಾಕ್ಯದೊಂದಿಗೆ ಸರ್ಕಾರಿ ಭೂಮಿಯಲ್ಲಿ ಇರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಮಾರುಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನಾಂದೋಲನ ಕಾರ್ಯಕ್ರಮ ನಡೆಸಲಾಯಿತು.

ಮಾಜಿ ಶಾಸಕ ಸುನೀಲ ನಾಯ್ಕ ಮಾತನಾಡಿ, ಸರ್ಕಾರಿ ಭೂಮಿಯಲ್ಲಿ ಇರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ತೆರಿಗೆ ವ್ಯಾಪ್ತಿಯಿಂದ ಕೈಬಿಟ್ಟರೆ ಜನತೆಗೆ ತೊಂದರೆ ಆಗಲಿದೆ. ಕೂಡಲೇ ಸರ್ಕಾರ ಈ ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಂಡಲ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ರಾಜ್ಯಹಿಂದುಳಿದ ಮೋರ್ಚಾ ಉಪಾಧ್ಯಕ್ಷ ಈಶ್ವರ್ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ, ಸುಬ್ರಾಯ ದೇವಾಡಿಗ, ಬಿಎಲ್‌ಎ 1 ಪ್ರಮೋದ್ ಜೋಶಿ, ಎಂ.ಡಿ. ನಾಯ್ಕ, ನಾರಾಯಣ ಭಟ್, ಗಣಪಯ್ಯ ಗೊಂಡ, ರವಿ ನಾಯ್ಕ, ನಾರಾಯಣ ಗೊಂಡ, ಸಂತೋಷ ನಾಯ್ಕ ಶರಣೇಶ್ ಶೆಟ್ಟಿ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಸ್ತರದ ಪಕ್ಷದ ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸರ್ಕಾರಿ ಭೂಮಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ಕುಟುಂಬಗಳ ಮನೆ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದಂತೆ ಉಂಟಾಗಿರುವ ಆತಂಕದ ಹಿನ್ನೆಲೆ, ಸರ್ಕಾರದ ಆದೇಶವನ್ನು ಹಿಂಪಡೆಯಬೇಕು ಮತ್ತು ಜನರ ಮನೆ- ನಿವೇಶನಗಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಸೇರಿದ ಜನರು ಸರ್ಕಾರವನ್ನು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿದ್ಯುತ್‌ ತಾರತಮ್ಯ ಆರೋಪ, ರೈತರ ಪ್ರತಿಭಟನೆ
ಪಕ್ಷದ ಸಂಘಟನೆ ತಳಮಟ್ಟದಿಂದ ಬಲಪಡಿಸಿ: ಜಿ.ಟಿ. ನಾಯ್ಕ