ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಪುರಸಭಾ ವತಿಯಿಂದ ಎಸ್.ಎಫ್.ಸಿ ಮತ್ತು ೧೫ನೇ ಹಣಕಾಸು ಯೋಜನೆಯಲ್ಲಿ ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜನರ ಸಮಸ್ಯೆಗಳನ್ನು ಅರಿತು ಕೆಲಸ ಮಾಡುತ್ತಿದೆ, ಆದರೆ ಈ ಹಿಂದಿನ ಸರ್ಕಾರ ಅದಕ್ಕೆ ವಿರುದ್ದವಾಗಿ ನಡೆದುಕೊಂಡಿದ್ದರಿಂದ ಅದನ್ನು ಮನೆಗೆ ಕಳುಹಿಸಿದರು ಎಂದು ಲೇವಡಿ ಮಾಡಿದರು.
ವಿದ್ಯಾರ್ಥಿಗಳಿಗೆ ಕೈಪಿಡಿ ವಿತರಣೆಪುರಸಭಾ ವತಿಯಿಂದ ೨೫೨ ವಿದ್ಯಾರ್ಥಿಗಳಿಗೆ ೨.೫೬ ಲಕ್ಷ ರೂಗಳ ವೆಚ್ಚದಲ್ಲಿ ೨೫೨ ಕೈಪಿಡಿಗಳನ್ನು ವಿತರಿಸಿದರು. ಇದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ. ಅದೇ ರೀತಿ ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳನ್ನು ಸಹ ವಿತರಿಸಲಾಗುತ್ತಿದೆ. ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆಗಾಗಿ ಪರಿಹಾರ ಧನದ ಚೆಕ್ ವಿತರಿಸಿದರು.ಪುರಸಭಾ ವ್ಯಾಪ್ತಿಯಲ್ಲಿ ಗುಡಿಸಲು ಮುಕ್ತ ಪಟ್ಟಣವನ್ನಾಗಿ ರೂಪಿಸಲು ಸರ್ಕಾರ ಸಂಕಲ್ಪ ಮಾಡಿದ್ದು ಅದರಂತೆ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣಕ್ಕಾಗಿ ಹಣವನ್ನು ನೀಡಲಾಗುವುದು. ನಿವೇಶನ ಇಲ್ಲದವರಿಗೆ ನಿವೇಶನ ಕೊಡಲಾಗುವುದು. ನಿವೇಶನ ಇಲ್ಲದವರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಆಸ್ತಿ ತೆರಿಗೆ ಹಣ ಕಟ್ಟದೇ ಇರುವವರು ತಕ್ಷಣ ತೆರಿಗೆ ಕಟ್ಟಿ ಅಭಿವೃದ್ದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಪಟ್ಟಣದಲ್ಲಿ ಹಾಗೂ ತಾಲೂಕಿನಾದ್ಯಂತ ಖಾತೆ ಆಂದೋಲನ ಮಾಡುತ್ತಿದ್ದು ಎಲ್ಲರೂ ತ್ವರಿತಗತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿಕೊಳ್ಳಿ ಎಂದರು.