ದುರಸ್ತಿಗೆ ಕಾಯುತ್ತಿರುವ ಸರ್ಕಾರಿ ಉರ್ದು ಶಾಲೆ

KannadaprabhaNewsNetwork |  
Published : Oct 12, 2026, 01:45 AM IST
11ಎಚ್ಎಸ್ಎನ್9 : ಕಿತ್ತುಬಂದಿರುವ ಕಿಟಕಿಯನ್ನು ತೋರಿಸುತ್ತಿರುವ ಕೆಆರ್‌ಎಸ್‌ ಕಾರ್ಯಕರ್ತ. | Kannada Prabha

ಸಾರಾಂಶ

ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಕಟ್ಟಡವನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು. ಶಾಲೆಯ ಸಮೀಪದಲ್ಲೇ ವಿದ್ಯುತ್ ಪರಿವರ್ತಕ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆಯ ಬಳಿಯಿರುವ ವಿದ್ಯುತ್ ಪರಿವರ್ತಕವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರುತಾಲೂಕಿನ ಅರೇಹಳ್ಳಿ ಸರ್ಕಾರಿ ಉರ್ದು ಶಾಲೆಯ ಶಿಥಿಲವಾಗಿರುವುದರ ಜೊತೆಗೆ ಮೂಲ ಸೌಲಭ್ಯದಿಂದವ ವಂಚಿತವಾಗಿದೆ ಎಂದು ಕೆಆರ್‌ಎಸ್ ಪಕ್ಷದ ಕಾರ‍್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ತಾಲೂಕು ಅರೇಹಳ್ಳಿ ಗ್ರಾಪಂ ವ್ಯಾಪ್ತಿಗೊಳಪಡುವ ಸರಕಾರಿ ಉರ್ದು ಶಾಲೆಯಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಶಾಲೆಗೆ ಭೇಟಿ ನೀಡಿದ ಕೆಆರ್‌ಎಸ್ ಪಕ್ಷದ ಹೋಬಳಿ ಘಟಕದ ಅಧ್ಯಕ್ಷ ಕುಮಾರ್ ಮಾತನಾಡಿ, ಉರ್ದು ಶಾಲೆಯಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿನಿತ್ಯ ಶಾಲೆಗೆ ಆಗಮಿಸುವ ಮಕ್ಕಳಿಗೆ ಅಗತ್ಯ ಪ್ರಮಾಣದ ಕುಡಿಯುವ ನೀರು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದ್ದು ಶೌಚಾಲಯದಲ್ಲೂ ನೀರಿನ ಅಭಾವ ಕಂಡುಬಂದಿದೆ . ಶಾಲೆಗೆ ಅಳವಡಿಸಿರುವ ಕಿಟಕಿಗಳು ಮುಟ್ಟಿದರೆ ಕೈಗೆ ಬರುತ್ತಿದ್ದು ಮಳೆ ಬಂದಾಗ ನೀರು ಒಳಗೆ ಬರುತ್ತಿದೆ ಎಂದರು.ಅನಾರೋಗ್ಯ ಪರಿಸರದಿಂದ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಕಲಿಕೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಇದರ ಜೊತೆಗೆ ಶಾಲೆಯ ಹಳೆಯ ಕಟ್ಟಡದಲ್ಲೇ ಪಾಠ ಪ್ರವಚನ ಮುಂದುವರಿದಿದ್ದು, ಕಟ್ಟಡದ ಸ್ಥಿತಿಗತಿ ಕುರಿತು ಪೋಷಕರು ಹಾಗೂ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಶಾಲಾ ಕಟ್ಟಡವನ್ನು ಪರಿಶೀಲಿಸಿ ಅಗತ್ಯ ದುರಸ್ತಿ ಹಾಗೂ ಮೂಲಸೌಕರ್ಯ ಕಲ್ಪಿಸಬೇಕು. ಶಾಲೆಯ ಸಮೀಪದಲ್ಲೇ ವಿದ್ಯುತ್ ಪರಿವರ್ತಕ ಇರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಮಕ್ಕಳ ಹಿತದೃಷ್ಟಿಯಿಂದ ಶಾಲೆಯ ಬಳಿಯಿರುವ ವಿದ್ಯುತ್ ಪರಿವರ್ತಕವನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದರು. ಶಾಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ತಕ್ಷಣ ಕಲ್ಪಿಸಬೇಕು. ಹಳೆಯ ಕಟ್ಟಡದ ಸಮಸ್ಯೆಯನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಸುರಕ್ಷಿತ ಕಲಿಕಾ ವಾತಾವರಣ ನಿರ್ಮಿಸಬೇಕು. ಅಲ್ಲದೆ, ಶಾಲೆಯ ಬಳಿಯಿರುವ ವಿದ್ಯುತ್ ಪರಿವರ್ತಕವನ್ನು ಸ್ಥಳಾಂತರಿಸುವ ಮೂಲಕ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಶಾಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಕೆಆರ್‌ಎಸ್ ಪಕ್ಷದ ಕರ‍್ಯಕರ್ತರು ಒತ್ತಾಯಿಸಿದರು.ಈ ವೇಳೆ ಬೇಲೂರು ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಸೀಫ್, ಇತರ ಸದಸ್ಯರಾದ ಜುಬೇರ್ ಅಹಮದ್, ಪೂರ್ಣೇಶ್, ಆಟೋ ರಫೀಕ್, ಮಂಜು ಹಾಗೂ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಯಾನ್ಸಿರಾಂ ತತ್ವಾದರ್ಶಗಳ ಆದರ್ಶಗಳ ಪಾಲಿಸಿ: ಅಂದಾನಪ್ಪ
ಚಂದ್ರಶೇಖರ್ ನಿಸ್ವಾರ್ಥ ರಾಜಕಾರಣಿ,ಪಟೇಲರು ಶ್ರೇಷ್ಠರು: ಬಿಎಲ್‌ ಶಂಕರ್‌