ಮಳೆ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಲಿದೆ ಸರ್ಕಾರ: ಸದಾಶಿವ ಭರವಸೆ

KannadaprabhaNewsNetwork |  
Published : Jul 22, 2024, 01:19 AM IST
ನರಸಿಂಹರಾಜಪುರ ತಾಲೂಕಿನ ಕಡಹಿನಬೈಲು ಗ್ರಾಮ ಪಂಚಾಯಿತಿಯ ಭದ್ರಾ ಕಾಲೋನಿಯ ಬದ್ರುದ್ದೀನ್, ನವಗ್ರಾಮದ ದೇವೇಂದ್ರ ಅ‍ವರ ಮನೆಗೆ ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಬೇಟಿ ನೀಡಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರ, ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಭರವಸೆ ನೀಡಿದರು.

ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತಿವೃಷ್ಠಿ ಪ್ರದೇಶಗಳಿಗೆ ಭೇಟಿ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್‌.ಸದಾಶಿವ ಭರವಸೆ ನೀಡಿದರು.

ಭಾನುವಾರ ಮಳೆಯಿಂದ ಮನೆ ಹಾನಿಯಾಗಿದ್ದ ಕಡಹಿನಬೈಲು ಗ್ರಾಪಂ ಶೆಟ್ಟಿಕೊಪ್ಪ ಸಮೀಪದ ಭದ್ರಾ ಕಾಲೋನಿ ಬದ್ರುದ್ದೀನ್‌, ನವ ಗ್ರಾಮದ ದೇವೇಂದ್ರ ಹಾಗೂ ಸುಗ್ಗಪ್ಪನ ಮಠದ ಮಂಜುನಾಥ್‌ ಅ‍ವರ ಮನೆಗಳಿಗೆ ಭೇಟಿ ನೀಡಿ ತುರ್ತು ಕಾರ್ಯ ಕೈಗೊಳ್ಳಲು ವೈಯ್ಯಕ್ತಿಕವಾಗಿ ಆರ್ಥಿಕ ಸಹಾಯ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಸಬಾ ಹೋಬಳಿಯಲ್ಲಿ ಗಾಳಿಗೆ ಮರಗಳು ವಿದ್ಯುತ್‌ ಲೈನ್‌ ಬಿದ್ದು ವಿದ್ಯುತ್‌ ಇಲ್ಲದೆ ಹಲವು ಗ್ರಾಮಗಳು ಕತ್ತಲೆ ಯಲ್ಲಿದೆ. ನರಸಿಂಹರಾಜಪುರ ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದ ಆದ ಅನಾಹುತಗಳಿಗೆ ಸರ್ಕಾರಿಂದ ನೆರವು ಕೊಡಿಸಲು ಪ್ರಯತ್ನ ನಡೆಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್‌.ಡಿ.ರಾಜೇಂದ್ರ, ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯದರ್ಶಿ ಈಚಿಕೆರೆ ಸುಂದರೇಶ್‌, ಕಡಹಿನಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿ ಕಾಂಗ್ರೆಸ್‌ ಅಧ್ಯಕ್ಷ ನಂದೀಶ್‌, ನಾಗಲಾಪುರ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ, ಮುಖಂಡರಾದ ಅಬ್ದುಲ್‌ ರೆಹಮಾನ್‌, ಮೋಣು, ಸುಲೇಮಾನ್‌, ಹಮೀದ್, ಕುಮಾರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’