ಸರ್ಕಾರದ ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಬಸನಗೌಡ

KannadaprabhaNewsNetwork |  
Published : Mar 05, 2024, 01:34 AM IST
03-ಎಂಎಸ್ಕೆ-02: | Kannada Prabha

ಸಾರಾಂಶ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ

ಮಸ್ಕಿ: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.

ಪಟ್ಟಣದ ಬಸವೇಶ್ವರ ನಗರದಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಐದು ಗ್ಯಾರೆಂಟಿಗಳನ್ನು ಜಾರಿಗೆ ತರುವ ಮೂಲಕ ಶೋಷಿತ ಬಡಜನರ ಏಳಿಗಾಗಿ ಶ್ರಮಿಸುತ್ತಿದೆ. ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಜನರು ರೋಸಿಹೋಗಿದ್ದಾರೆ. ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕಪಾಠ ಕಲಿಸಿ ಅಧಿಕಾರದಿಂದ ಕೇಳಗಿಳಿಸಲಿದ್ದಾರೆ. ಆದ್ದರಿಂದ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಸರ್ಪಕವಾಗಿ ಪ್ರತಿಯೊಬ್ಬರಿಗೂ ತಲುಪಿಸುವ ಜವಬ್ದಾರಿ ಕಾರ್ಯಕರ್ತರು ಮಾಡಬೇಕು ಇದರಿಂದ ಎಲ್ಲರಿಗೂ ಅನೂಕೂಲವಾಗಲಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರು, ಉಪಾದ್ಯಕ್ಷ ವೆಂಕಟರಡ್ಡಿ ಹಾಲಾಪೂರು, ನೀರುಪಾದೇಪ್ಪ ವಕೀಲರು, ಸೇರಿ ವಿವಿಧ ಗ್ರಾಪಂ ಸದಸ್ಯರು, ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ