ಸರ್ಕಾರದ ಪ್ರಜಾಸೇವೆ ಅಭಿಯಾನ 5ರಂದು

KannadaprabhaNewsNetwork |  
Published : Sep 02, 2026, 02:15 AM IST
ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 5 ರಂದು ಹಮ್ಮಿಕೊಳ್ಳುವುದಾಗಿ ತಿಳಿಸಿ, | Kannada Prabha

ಸಾರಾಂಶ

ಗುಬ್ಬಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾ ಸೇವೆ ಅಭಿಯಾನಕ್ಕೆ ದಿ.5 ರಂದು ಅಧಿಕೃತ ಚಾಲನೆ ಸಿಗಲಿದ್ದು, ಇದರ ಯಶಸ್ವಿ ಅನುಷ್ಠಾನಕ್ಕಾಗಿ ಗುಬ್ಬಿ ತಾಲೂಕಿನಲ್ಲಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.

ಗುಬ್ಬಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾ ಸೇವೆ ಅಭಿಯಾನಕ್ಕೆ ದಿ.5 ರಂದು ಅಧಿಕೃತ ಚಾಲನೆ ಸಿಗಲಿದ್ದು, ಇದರ ಯಶಸ್ವಿ ಅನುಷ್ಠಾನಕ್ಕಾಗಿ ಗುಬ್ಬಿ ತಾಲೂಕಿನಲ್ಲಿ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಅವರ ನೇತೃತ್ವದ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಕಳೆದ ಬಾರಿ ನಡೆಸಿದ್ದ ಜನ ಸಂಪರ್ಕ ಸಭೆಗಳಲ್ಲಿ ಬಂದಿರುವ ಅರ್ಜಿಗಳ ಆಗುಹೋಗುಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. 5ರಂದು ನಡೆಯುವ ಅಭಿಯಾನ ಕಾರ್ಯಕ್ರಮದಲ್ಲಿ ಆಯೋಜಿಸುವ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಪಂಚ ಗ್ಯಾರೆಂಟಿ ಯೋಜನಾ ಕುರಿತು ಸ್ಟಾಲ್ ಹಾಕುವುದು, ಕಂದಾಯ ಇಲಾಖೆ , ತಾಲೂಕು ಪಂಚಾಯತ್ ಗಳ ಸ್ಟಾಲ್ ತೆರೆಯಲು ಸೂಚನೆ ನೀಡಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 5 ರಂದು ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಹಮ್ಮಿಕೊಳ್ಳುವುದಾಗಿ ತಿಳಿಸಿ, ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಂತಿಮಗೊಳಿಸಲಿದ್ದು, ಪ್ರತಿ ಶನಿವಾರ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಸಭೆಗಳು ಜರುಗಲಿದೆ ಎಂದರು.ಪ್ರತಿ ಬುಧವಾರದಂದು ಮೂರು ಹಂತದ ಪರಿಶೀಲನಾ ವ್ಯವಸ್ಥೆಯ ಮೂಲಕ ಅರ್ಜಿಗಳ ಪ್ರಗತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ ಎಂದ ಅವರು ಸಾರ್ವಜನಿಕರು ಸಣ್ಣಪುಟ್ಟ ಸಮಸ್ಯೆಗಳಿಗಾಗಿ ಜಿಲ್ಲಾ ಕೇಂದ್ರಗಳ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ ಜನರ ಮನೆ ಬಾಗಿಲಿಗೆ ಆಡಳಿತ " ತಲುಪಿಸುವುದೇ ಈ ಅಭಿಯಾನದ ಮೂಲ ಆಶಯವಾಗಿದೆ ಎಂದರು. ಈ ಸಭೆಯಲ್ಲಿ ಉಪ ವಿಭಾಗಾಧಿಕಾರಿ ನಹೀದಾ ಜಂಜಂ, ಡಿಡಿಎಲ್ಆರ್ ಭಾವನ, ಜಿಲ್ಲಾ ಪಂಚಾಯತ್ ಡಿಎಸ್ ಸಂಜೀವಪ್ಪ, ಆರ್ ಡಿ ಪಿಆರ್ ಈಶ್ವರಪ್ಪ, ತಹಶೀಲ್ದಾರ್ ಆರತಿ.ಬಿ, ತಾಪಂ ಇಓ ರಂಗನಾಥ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಲಾ ಮಕ್ಕಳ ಜನ್ಮದಿನಕ್ಕೆ ಇನ್ನು ಖುದ್ದು ಡಿಕೆ ಶುಭಾಶಯ
ಗೃಹಲಕ್ಷ್ಮಿ ಆಧಾರ್‌- ವೋಟರ್‌ ಐಡಿ ಲಿಂಕ್‌ ಆಗಿದ್ದರಷ್ಟೇ ಹಣ