ಅಳ್ನಾವರ: ಜನರಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪೈಕಿ ಶಿಕ್ಷಣ, ನೀರು, ವಸತಿ ಮತ್ತು ಆರೋಗ್ಯ ಬಹು ಮುಖ್ಯವಾದವುಗಳಾಗಿವೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರಾದ ಪ್ರಹ್ಲಾದ್ ಜೋಶಿ ಹೇಳಿದರು. ಸಮೀಪದ ಮುರಕಟ್ಟಿ ಗ್ರಾಮದಲ್ಲಿನ ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿಪೂಜೆ ನೇರವೇರಿಸಿ ನಂತರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲೆಯ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರು ಒದಗಿಸುವ ಜಲ ಜೀವನ ಮೀಷನ್ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು ಮುಂಬರುವ ಒಂದು ವರ್ಷದೊಳಗಡೆ ಪ್ರತಿ ಮನೆಗೂ ನೀರು ತಲುಪಿಸುವ ಗುರಿ ಸಾಕಾರಗೊಳ್ಳಲಿದೆ ಎಂದು ಹೇಳಿದ ಪ್ರಹ್ಲಾದ್ ಜೋಶಿಯವರು ಕ್ಷೇತ್ರದ ಜನರ ಆಶೀರ್ವಾದಿಂದ ಜನ ಸೇವೆ ಮಾಡುವ ಅವಕಾಶ ಸಿಕ್ಕಿದ್ದು ಯಾವತ್ತೂ ಮರೆಯುವುದಿಲ್ಲ. ಜನರು ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಪ್ರಾಮಾಣಿಕ ಮತ್ತು ಭ್ರಷ್ಟಾಚಾರ ರಹಿತವಾದ ಆಡಳಿತ ನೀಡಲು ಬದ್ಧವಿರುವುದಾಗಿ ಭರವಸೆ ನೀಡಿದರು.
ಸರಳತೆ ಮೆರೆದ ಜೋಶಿಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಮನವಿ ಸಲ್ಲಿಸಲು ಮುರಕಟ್ಟಿ ಗ್ರಾಮದಲ್ಲಿ ಜರುಗಿದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಳ್ಳಿಕೇರಿ ಗ್ರಾಮದ ವಿಕಲಚೇತನ ಯುವಕನ ನೋಡಿದ ಸಚಿವರು ಕಾರ್ಯಕ್ರಮದಿಂದ ನೇರವಾಗಿ ಆತನ ಬಳಿಗೆ ಬಂದು ಮನವಿ ಆಲಿಸಿದರು.
ಗ್ಯಾರಂಟಿ ಹೆಸರಿನಲ್ಲಿ ಸರಕಾರದ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು ಅಭಿವೃದ್ದಿಗೆ ಹಣವೇ ಇಲ್ಲದಾಗಿದೆ. ಹದಗೆಟ್ಟಿರುವ ರಸ್ತೆಗಳನ್ನು ದುರಸ್ತಿ ಮಾಡಲು ರಾಜ್ಯ ಸರಕಾರಕ್ಕೆ ಆಗುತ್ತಿಲ್ಲ. ಈಗ ವಿತರಿಸುತ್ತಿರುವ ಐದು ಕೆಜಿ ಅಕ್ಕಿ ಕೇಂದ್ರ ಸರಕಾರದ್ದಾಗಿದೆ. ಬಡ ಕುಟುಂಬಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ವಿತರಿಸುವುದಾಗಿ ಚುನಾವಣೆಯಲ್ಲಿ ಭರವಸೆ ನೀಡಿದ್ದ ಕಾಂಗ್ರೆಸ್ ಅದರ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಿಂದ ಅಕ್ಕಿ ನೀಡಲು ಸಿದ್ಧವಿದ್ದರೂ ರಾಜ್ಯ ಸರ್ಕಾರ ಖರೀದಿಸುತ್ತಿಲ್ಲ
ಪ್ರಹ್ಲಾದ್ ಜೋಶಿ ಕೇಂದ್ರ ಸಚಿವ