ಕನ್ನಡಪ್ರಭ ವಾರ್ತೆ ಮೂಡಲಗಿ
ತಾಲೂಕಿನ ಗುರ್ಲಾಪೂರದಲ್ಲಿ ನಡೆಯುತ್ತಿರುವ ರೈತರ ಹೋರಾಟದಲ್ಲಿ ಮಾತನಾಡಿದ ಅವರು, ಇಡೀ ಜಗತ್ತಿಗೆ ಅನ್ನ ನೀಡುವ ರೈತನೇ ಸಾಲದ ಸುಳಿಯಲ್ಲಿ ಸಿಲುಕಿದ್ದಾನೆ. ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ರೈತರು ಅನ್ಯಾಯಕ್ಕೆ ಒಳಗಾಗುತ್ತಿದ್ದಾರೆ. ರೈತರ ಶ್ರಮಕ್ಕೆ ತಕ್ಕ ಸ್ಥಾನಮಾನ ಮತ್ತು ಗೌರವವನ್ನು ಆಳುವ ಸರ್ಕಾರಗಳು ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುವ ಸಂದರ್ಭದಲ್ಲಿ ಸಂಘಟನೆಗಳ ನಡುವಿನ ಒಗ್ಗಟ್ಟು ಅತ್ಯಂತ ಮುಖ್ಯವಾಗಿದೆ. ರಾಜ್ಯದಲ್ಲಿ ಹಲವು ರೈತ ಸಂಘಟನೆಗಳು ಕಾರ್ಯನಿರ್ವಹಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ಅವೆಲ್ಲವೂ ಒಂದೇ ವೇದಿಕೆಯಲ್ಲಿ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಚುಕ್ಕಿ ಆಶಿಸಿದರು.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ ನಡೆದ ಸಭೆಯಲ್ಲಿ ರೈತ ಮುಖಂಡ ಚೂನಪ್ಪ ಪೂಜೇರಿ ಮಾತನಾಡುವ ಸಂದರ್ಭದಲ್ಲಿ ಕೆಲವರು ಗಂಭೀರ ಚರ್ಚೆಗೆ ಸಹಕರಿಸದೆ ಕುಚೇಷ್ಟೆ ಮಾಡಿದವರಂತೆ ವರ್ತಿಸಿದರು. ರೈತರ ಸಮಸ್ಯೆಗಳನ್ನು ಬಗೆಹರಿಸುವ ಪ್ರಾಮಾಣಿಕ ಉದ್ದೇಶ ಅವರಲ್ಲಿ ಕಾಣಿಸಲಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಚೂನಪ್ಪ ಪೂಜೇರಿ ಕಾರ್ಯಕ್ಕೆ ಮೆಚ್ಚುಗೆ:
ರೈತ ಸಂಘಟನೆಯ ಶಕ್ತಿಯನ್ನು ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಸಂಘಟನೆಯೊಳಗೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸಿ ಒಗ್ಗಟ್ಟನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಸಂಘಟನೆಯ ಶಕ್ತಿಯನ್ನು ದುರ್ಬಲಗೊಳಿಸುವ ಕುತಂತ್ರಗಳಿಗೆ ಅವಕಾಶ ನೀಡಬಾರದು ಎಂದು ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಅವರಿಗೆ ಸಲಹೆ ನೀಡಿದರು.
ಈ ವೇಳೆ ಮಾಜಿ ಸಚಿವ ಶಶಿಕಾಂತ ನಾಯಿಕ, ಚೂನಪ್ಪ ಪೂಜೇರಿ, ಶಶಿಕಾಂತ ಗುರೂಜಿ ಸೇರಿದಂತೆ ವಿವಿಧ ಜಿಲ್ಲೆ ಮತ್ತು ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ಶ್ರೀಗಳು ಉಪಸ್ಥಿತರಿದ್ದರು.
ಕಬ್ಬು ಬೆಳೆಯಲು ರೈತರು ಮಾಡುವ ಖರ್ಚು, ಶ್ರಮ ಹಾಗೂ ಕೃಷಿ ಚಟುವಟಿಕೆಗಳ ವೆಚ್ಚವನ್ನು ಪರಿಗಣಿಸಿದರೆ ಪ್ರತಿ ಟನ್ ಕಬ್ಬಿಗೆ ₹5,500 ಬೆಲೆ ಕೂಡ ಸಾಕಾಗುವುದಿಲ್ಲ. ವಾಸ್ತವವಾಗಿ ₹10,000 ಬೆಲೆ ಸಿಗಬೇಕು ಎಂಬುದು ರೈತರ ನಿರೀಕ್ಷೆಯಾಗಿದೆ. ಆದರೆ, ₹5,500 ನೀಡಲು ಕೂಡ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಿಂದೇಟು ಹಾಕುತ್ತಿರುವಾಗ, ₹10,000 ಬೆಲೆ ಕೇಳುವುದಾದರೂ ಹೇಗೆ ಎಂಬ ಅಸಹಾಯಕ ಸ್ಥಿತಿ ರೈತರಲ್ಲಿ ನಿರ್ಮಾಣವಾಗಿದೆ. ದೇಶದಲ್ಲಿ ರೈತರ ಆತ್ಮಹತ್ಯೆಗಳು ಮುಂದುವರಿಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ರೈತರ ಸಂಕಷ್ಟಗಳು ಸರ್ಕಾರಗಳಿಗೆ ತಿಳಿದಿದ್ದರೂ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ. ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ, ಅವರಿಗೆ ನ್ಯಾಯ ಒದಗಿಸುವ ಕೆಲಸವಾಗಬೇಕು.