ಸಿಎಂ ವಿರುದ್ಧ ರಾಜ್ಯಪಾಲರ ನಡೆ ಖಂಡನೀಯ : ಸಂಜೀವ್ ಐರೆಡ್ಡಿ

KannadaprabhaNewsNetwork |  
Published : Aug 19, 2024, 12:57 AM IST
ಸಂಜೀವ್ ರೆಡ್ಡಿ ಐರೆಡ್ಡಿ, ಕಾಂಗ್ರೆಸ್ ಯುವ ಮುಖಂಡರು. | Kannada Prabha

ಸಾರಾಂಶ

ಸಾಂವಿಧಾನಿಕ ಹುದ್ದೆಯಲ್ಲಿರುವ ಕರ್ನಾಟಕದ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ‌ ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ರಾಜ್ಯಪಾಲರು ನಡೆಯನ್ನು ಖಂಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ವಡಗೇರಾ

ಸಾಂವಿಧಾನಿಕ ಹುದ್ದೆಯಲ್ಲಿರುವ ಕರ್ನಾಟಕದ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ‌ ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ರಾಜ್ಯಪಾಲರು ನಡೆಯನ್ನು ಖಂಡಿಸಿದ್ದಾರೆ. ರಾಜ್ಯಪಾಲರು ಇಷ್ಟೊಂದು ಕೀಳುಮಟ್ಟಕ್ಕೆ ಇಳಿಯುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ. ರಾಜಕೀಯ ದ್ವೇಷ ಮತ್ತು ಒತ್ತಡಕ್ಕೆ ಮಣಿದು ರಾಜ್ಯಪಾಲರು ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ. ಇದು ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆದಿದೆ. ಕಾಂಗ್ರೆಸ್ ಪಕ್ಷವು ಇದರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದರು.ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲದ ಬಿಜೆಪಿ, ಚುನಾಯಿತ ಸರ್ಕಾರಗಳನ್ನು ಬೀಳಿಸುವ ಕೆಲಸ ಮಾಡುತ್ತಿದೆ. ಸಾಮಾಜಿಕ ನ್ಯಾಯಕ್ಕೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪ್ರಿಯತೆಯನ್ನು ಕುಗ್ಗಿಸಲು ಮತ್ತು ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಪಾಲರ ಮೂಲಕ ಷಡ್ಯಂತ್ರ ರೂಪಿಸಿದ್ದಾರೆ ಎಂದು ಆರೋಪಿಸಿದರು.

ಇತ್ತೀಚೆಗೆ ದೆಹಲಿಗೆ ರಾಜ್ಯಪಾಲರನ್ನು ಕರೆಸಿಕೊಂಡು ಅವರಿಗೆ ಸ್ಪಷ್ಟ ಸೂಚನೆ ನೀಡಿ ಕಳುಹಿಸಿದ್ದಾರೆ ಎಂಬುದು ಗೊತ್ತಾಗುತ್ತಿದೆ. ರಾಜ್ಯದ ಜನತೆ ಇದನ್ನು ಸಹಿಸುವುದಿಲ್ಲ ಕಾಂಗ್ರೆಸ್ ಪಕ್ಷ ರಾಜ್ಯಪಾಲರ ಪಕ್ಷಪಾತ ಧೋರಣೆಯ ವಿರುದ್ಧ ರಾಜ್ಯಾದ್ಯಂತ ಹೋರಾಟ ಮಾಡಲಿದೆ ಎಂದರು.ರಾಜ್ಯಪಾಲರು ಅನುಸರಿಸಿರುವ ಪಕ್ಷಪಾತ ಧೋರಣೆಗೆ ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು. ಇಲ್ಲವೇ ಅವರನ್ನು ರಾಷ್ಟ್ರಪತಿಗಳು ವಜಾ ಮಾಡಬೇಕೆಂದು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಡಿಗೇಡಿತನಕ್ಕೆ ಕ್ಷಮೆ ಇಲ್ಲ: ಹೈಕೋರ್ಟ್‌ ಕಿಡಿ
ಮಳೆಗೆ 7 ಜನ ಮರಣಕ್ಕೆ ಕಾಂಗ್ರೆಸ್‌ ಸರ್ಕಾರವೇ ಹೊಣೆ ಹೊರಬೇಕು: ಅಶೋಕ್‌