ಕೃಷಿ ವಿವಿ ವಿಧೇಯಕಕ್ಕೆ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅಂಕಿತ

KannadaprabhaNewsNetwork |  
Published : Apr 24, 2025, 11:47 PM IST
೨೪ಕೆಎಂಎನ್‌ಡಿ-೪ಕೃಷಿ ವಿಧೇಯಕಕ್ಕೆ ಅನುಮೋದನೆ ನೀಡಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನುಔಋಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿನಂದಿಸಿದರು. | Kannada Prabha

ಸಾರಾಂಶ

ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದನೆ ನೀಡಿದರು. ವಿಧೇಯಕ ಅಂಗೀಕರಿಸಿದ್ದಕ್ಕಾಗಿ ಕೃಷಿ ಸಚಿವರು ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ವಿಧೇಯಕ ಅನುಮೋದನೆಗೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ರಾಜ ಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು.

ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ನೂತನ ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ಉಭಯ ಸದನಗಳಲ್ಲಿ ವಿಧೇಯಕವನ್ನು ಅಂಗೀಕರಿಸಿ ರಾಜ್ಯಪಾಲರ ಸಹಮತಿಗೆ ಕಳುಹಿಸಲಾಗಿತ್ತು.

ಮಂಡ್ಯ ಕೃಷಿ ವಿಶ್ವವಿದ್ಯಾಲಯ ವಿಧೇಯಕದ ಬಗ್ಗೆ ಚರ್ಚಿಸಿ ರಾಜ್ಯಪಾಲರಿಗೆ ಸಹಮತಿ ನೀಡುವಂತೆ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ರಾಜ್ಯಪಾಲರು ನೂತನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯ ವಿಧೇಯಕಕ್ಕೆ ಸಹಮತಿ ನೀಡಿ ಅನುಮೋದನೆ ನೀಡಿದರು. ವಿಧೇಯಕ ಅಂಗೀಕರಿಸಿದ್ದಕ್ಕಾಗಿ ಕೃಷಿ ಸಚಿವರು ರಾಜ್ಯಪಾಲರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೃಷಿ ಸಚಿವರೊಂದಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಗೋವಿಂದರಾಜು, ಕೃಷಿ ಇಲಾಖೆ ಕಾರ್ಯದರ್ಶಿ ಅನ್ಬುಕುಮಾರ್, ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಎಚ್.ಜಿ.ಪ್ರಭಾಕರ್, ಮಂಡ್ಯ ಕೃಷಿ ವಿಶ್ವ ವಿದ್ಯಾಲಯ ವಿಶೇಷಾಧಿಕಾರಿ ಹರಿಣಿಕುಮಾರ್, ಹಾಗೂ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಎ.ಬಿ.ಪಾಟೀಲ್ ಹಾಜರಿದ್ದರು.

ಕಾವೇರಿ ಆರತಿಗೆ 92 ಕೋಟಿ ರು.ಅನುದಾನ: ಅಭಿನಂದನೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನೆರವೇರಿಸಲು 92 ಕೋಟಿ ರು.ಅನುದಾನ ಮೀಸಲಿಡಲು ಗುರುವಾರ ನಡೆದ ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕ ದಿನೇಶ್‌ಗೂಳಿಗೌಡ ಸ್ವಾಗತಿಸಿದ್ದಾರೆ.

ಗುರುವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾವೇರಿ ಆರತಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಮೂಲಸೌಕರ್ಯ ಒದಗಿಸಲು ಅನುಕೂಲವಾಗುವಂತೆ 92 ಕೋಟಿ ರು.ಅನುದಾನವನ್ನು ರಾಜ್ಯ ಸರ್ಕಾರ ಮೀಸಲು ಇಟ್ಟಿದೆ. ಇದಕ್ಕೆ ಕಾರಣೀಕರ್ತರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಚಲವರಾಯಸ್ವಾಮಿ ಅವರನ್ನು ಹಾಗೂ ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರನ್ನು ಕಾವೇರಿ ಪ್ರಾಂತ್ಯದ ಜನರ ಪರವಾಗಿ ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಗಂಗಾರತಿ ಮಾದರಿಯಲ್ಲಿ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡುವಂತೆ ಈ ಹಿಂದೆ ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ ಮತ್ತು ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದನ್ನು ಸ್ಮರಿಸಬಹುದು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ