ಕನ್ನಡಪ್ರಭ ವಾರ್ತೆ, ಉಡುಪಿ
ಮುಖ್ಯ ಅತಿಥಿಗಳಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್, ಫೀಬಾ ಏಷ್ಯಾ ಮತ್ತು ಕರ್ನಾಟಕ ಒಲಂಪಿಕ್ ಸಂಸ್ಥೆಯ ಅಧ್ಯಕ್ಷ ಡಾ.ಕೆ ಗೋವಿಂದರಾಜ್, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಉಡುಪಿ - ದಕ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ.ಸಮಾರೋಪ ಸಮಾರಂಭಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ಮತ್ತಿತರ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ. ಸಭಾ ಕಾರ್ಯಕ್ರಮದ ನಂತರ ‘ಧ್ವನಿ ಬೆಳಕು’ ಕಾರ್ಯಕ್ರಮ, ‘ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳಿಂದ ವಿರಾಸತ್ ಸಾಂಸ್ಕೃತಿಕ’ ಕಾರ್ಯಕ್ರಮಗಳು ಹಾಗೂ ‘ಸುಡುಮದ್ದು’ ಪ್ರದರ್ಶನಗಳು ನಡೆಯಲಿವೆ.