-ಕಾಂಗ್ರೆಸ್ ಸಮಾವೇಶ
ಕನ್ನಡಪ್ರಭ ವಾರ್ತೆ ರಾಮನಗರ
ರಾಜ್ಯದಲ್ಲಿ ಅಧಿಕಾರದಲ್ಲಿರುವ ಪ್ರಜಾಪ್ರಭುತ್ವ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರ ಮೂಲಕ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು.ಬಿಡದಿ ಪಟ್ಟಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಹಾಗೂ ಬಿಜಿಪಿಯ 21 ಭ್ರಷ್ಟ ಹಗರಣಗಳ ವಿರುದ್ಧ ಜನಾಂದೋಲನದಲ್ಲಿ ಮಾತನಾಡಿದ ಅವರು, ರಾಜ್ಯದ ಜನರು ಕಾಂಗ್ರೆಸ್ ಪಕ್ಷದ 136 ಮಂದಿ ಶಾಸಕರನ್ನು ಚುನಾಯಿಸಿ ಕಳುಹಿಸಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಷಡ್ಯಂತ್ರ ನಡೆಸುತ್ತಿದ್ದಾರೆ. ಭ್ರಷ್ಟ ಬಿಜೆಪಿ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಒಪ್ಪುವುದಿಲ್ಲ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮುಂದಿನ ನಾಲ್ಕು ವರ್ಷವೂ ಸ್ವಚ್ಛ, ಜನಪರ ಆಡಳಿತ ನೀಡಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೀಡಿರುವ ನೋಟಿಸ್ ಅಸಂವಿಧಾನಿಕವಾಗಿದ್ದು, ಮುಡಾ ಹಗರಣದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಒಂದೇ ಒಂದು ಸಾಕ್ಷಿ ಇದ್ದರೆ ಕೊಡಿ ಎಂದು ಜಿ.ಪರಮೇಶ್ವರ್ ಸವಾಲು ಹಾಕಿದರು.
ಕೂಡಿಕೆ ಮದುವೆಗೆ ಆಯಸ್ಸಿಲ್ಲ:
ಗೌಡರ ಕುಟುಂಬ 48 ಸೈಟು ಪಡೆದಿದೆ:
ಮುಖ್ಯಮಂತ್ರಿಗಳ ಪಾತ್ರ ಇಲ್ಲ:
ಜನಾಂದೋಲನಕ್ಕೂ ಮುನ್ನಾ ಬೈಕ್ ರ್ಯಾಲಿ
- ಡಾ.ಜಿ.ಪರಮೇಶ್ವರ್, ಗೃಹ ಸಚಿವ
ನಾಲಕ್ಕಾಣಿ ಕುಂಕುಮವನ್ನು ನಾನೂರು ಜನರಿಗೆ ಹಂಚಿಕೊಂಡು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೆಸರಿಗೆ ಮಸಿ ಬಳಿಯಲು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಮುಡಾದಲ್ಲಿ ಅತಿಹೆಚ್ಚು ನಿವೇಶನಗಳನ್ನು ಕುಮಾರಸ್ವಾಮಿ ಮತ್ತವರ ಕುಟುಂಬದವರೇ ಹೊಂದಿದ್ದಾರೆ. ಇದೇ ಕಾರಣಕ್ಕೆ ಪಾದಯಾತ್ರೆಗೆ ಕುಮಾರಸ್ವಾಮಿ ಮೊದಲು ವಿರೋಧಿಸಿದ್ದರು. ಇವರನ್ನು ಸಮಾಧಾನ ಪಡಿಸಿ ಬಿಜೆಪಿಯವರು ಪಾದಯಾತ್ರೆಗೆ ಕರೆತರುತ್ತಿದ್ದಾರೆ.
-ಎಚ್.ಎಂ.ರೇವಣ್ಣ, ರಾಜ್ಯಾಧ್ಯಕ್ಷ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಮುಡಾ ಹಗರಣವನ್ನು ಸಿಎಂ ಸಿದ್ದರಾಮಯ್ಯ ಅವರ ತಲೆಗೆ ಕಟ್ಟಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪಾದಯಾತ್ರೆ ನಡೆಸುತ್ತಿದ್ದಾರೆ. ಹಿಂದೆ ಐಟಿ, ಇಡಿ ಬಳಸಿಕೊಂಡು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. 40 ಪರ್ಸೆಂಟ್ ಕಮಿಷನ್ ಲೂಟಿ ಮಾಡಿದ, ಜಾತಿ ಧರ್ಮದ ನಡುವೆ ಕಂದಕ ಸೃಷ್ಟಿಸಿದ ಬಿಜೆಪಿಯವರು ಬುದ್ಧಿ ಹೇಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ಮನೆ ಹಾಳು ಐಡಿಯಾ ಮಾಡುತ್ತಿದೆ. ಸಿದ್ದರಾಮಯ್ಯನವರ ಪತ್ನಿ ಮನೆಯಿಂದಲೇ ಹೊರಗೆ ಬಂದವರಲ್ಲ, ಯಾವುದೇ ರಾಜಕೀಯ ಹಸ್ತಕ್ಷೇಪ ಮಾಡಿದವರಲ್ಲ. ಅವರಿಗೆ ಬಂದ ಉಡುಗೊರೆಯ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.
-ಎಸ್.ರವಿ, ವಿಧಾನಪರಿಷತ್ ಸದಸ್ಯರು
ಬಿಜೆಪಿ ಅಧಿಕಾರದಲ್ಲಿದ್ದಾಗ ಸಾಕಷ್ಟು ಹಗರಣಗಳನ್ನು ಮಾಡಿದೆ. ಅಭಿವೃದ್ಧಿ ಕೆಲಸಗಳಿಗೆ ರಾಜ್ಯದೊಂದಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಇದೀಗ ಮುಡಾ ಹೆಸರನ್ನು ಮುಂದು ಮಾಡಿಕೊಂಡು ಪಾದಯಾತ್ರೆ ನಡೆಸಿ ತಮ್ಮ ಹುಳುಕು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಸಕರ್ಾರದ ಅವಧಿಯಲ್ಲಿ 21 ಹಗರಣಗಳು ನಡೆದಿದ್ದು ಅವುಗಳಿಗೆ ಉತ್ತರ ನೀಡಲಿ.
-ನಜೀರ್ ಅಹಮ್ಮದ್, ಸಿಎಂ ರಾಜಕೀಯ ಕಾರ್ಯದರ್ಶಿರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯಾವೊಂದು ಕೊಡುಗೆಯನ್ನೂ ನೀಡದ ಕೇಂದ್ರ ಸರ್ಕಾರ ಕರ್ನಾಟಕದ ಜನರ ಬಗ್ಗೆ ತಾರತಮ್ಯ ಮಾಡುತ್ತಿದೆ. ಕೇಂದ್ರದ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ಪಾದಯಾತ್ರೆ ನಡೆಸುತ್ತಿದ್ದಾರೆ. ವಾರಕ್ಕೊಮ್ಮೆ ರಾಜ್ಯಕ್ಕೆ ಬಂದು ಹೋಗುವ ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಮಾತನಾಡುವುದನ್ನು ಬಿಟ್ಟು ಬೇರೇನೂ ಮಾಡಿಲ್ಲ.
-ಎಚ್.ಸಿ.ಬಾಲಕೃಷ್ಣ, ಶಾಸಕರು, ಮಾಗಡಿ ವಿಧಾನಸಭಾ ಕ್ಷೇತ್ರ
5,6.ಜನಾಂದೋಲನಕ್ಕೂ ಮುನ್ನ ನಡೆದ ಬೈಕ್ ರ್ಯಾಲಿಯಲ್ಲಿ ಶಾಸಕ ಬಾಲಕೃಷ್ಣರವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಹಿಂಬದಿ ಕೂರಿಸಿಕೊಂಡು ಬೈಕ್ ರೈಡ್ ಮಾಡಿದರು.