ಸರ್ಕಾರಿ ಶಾಲೆ ಮಕ್ಕಳು ಉನ್ನತ ಶಿಕ್ಷಣ ಪಡೆಯಿರಿ

KannadaprabhaNewsNetwork |  
Published : Aug 14, 2024, 12:54 AM IST
ಪೊಟೊ-13ಕೆಎನ್‌ಎಲ್‌ಎಮ್‌1-ನೆಲಮಂಗಲ  ನಗರದ   ಸಾರ್ವಜನಿಕ  ಆಸ್ಪತ್ರೆಯ ಹತ್ತಿರದ ಸರ್ಕಾರಿ ಹಿರಿಯ ಮಾದರಿ ಶಾಲೆಯಲ್ಲಿ  ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಟ್ರಸ್ಟ್ ಗಂಗಾ ನಗರ ಬೆಂಗಳೂರುವತಿಯಿಂದ ಹಮ್ಮಿಕೊಂಡಿದ್ದ  ಸುಮಾರು 300 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಉಚಿತವಾಗಿ ಸಮವಸ್ತ್ರವನ್ನುಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿವಿ ಮಲ್ಲಿಕಾರ್ಜುನಯ್ಯ, ಟ್ರಸ್ಟ್  ಅಧ್ಯಕ್ಷ ಎನ್ ನರಸಿಂಹಮೂರ್ತಿವಿತರಿಸಿದರು.  | Kannada Prabha

ಸಾರಾಂಶ

ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.

ನೆಲಮಂಗಲ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಆಧುನಿಕ ಜಗತ್ತಿನಲ್ಲಿ ಕ್ರಿಯಾಶೀಲರಾಗಿ ಕಲಿಯುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಸ್ಥಾನ ಗಳಿಸಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆ ಸಮೀಪವಿರುವ ಸರ್ಕಾರಿ ಹಿರಿಯ ಮಾದರಿ ಶಾಲೆಯಲ್ಲಿ ಬೆಂಗಳೂರಿನ ಗಂಗಾನಗರದ ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಹಮ್ಮಿಕೊಂಡಿದ್ದ 300ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಇಂತಹ ಕೆಲಸಗಳು ಪ್ರಶಂಸನೀಯ. ಸಾಮಾಜಿಕ ಕಳಕಳಿಯಿಂದ ಬೆಂಗಳೂರಿನ ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಗ್ರಾಮೀನ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವ ಮೂಲಕ ಸಹಾಯ ಹಸ್ತ ಚಾಚುತ್ತಿರುವ ಉತ್ತಮ ಬೆಳವಣಿಗೆ ಎಂದು ಹೇಳಿದರು.

ಸಂಸ್ಥೆಯ ಉಳಿತಾಯದ ಹಣದಲ್ಲಿ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುತ್ತಿರುವುದು ಉತ್ತಮ ಕೆಲಸ. ಅದೇ ರೀತಿ ವಿದ್ಯಾರ್ಥಿಗಳು ಸಹ ವಿದ್ಯಾವಂತರಾಗಿ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಟ್ರಸ್ಟ್ ಅಧ್ಯಕ್ಷ ಎನ್ ನರಸಿಂಹಮೂರ್ತಿ ಹೇಳಿದರು.

ಸಂಸ್ಥೆಯು ಬಡ ಹಾಗೂ ಮಧ್ಯಮ ಕುಟುಂಬದ ಮಕ್ಕಳು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಾರೆ. ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಗಳು ಉತ್ತಮವಾಗಿದೆ. ಸರ್ಕಾರಿ ಶಾಲೆ ಎಂಬ ಅಸಡ್ಡೆ ಮಾಡದೇ ಶಾಲಾ ವಿದ್ಯಾರ್ಥಿಗಳನ್ನ ಪ್ರೋತ್ಸಾಹಿಸುತ್ತಿರುವ ತಮ್ಮ ಟ್ರಸ್ಟ್‌ಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಂ.ನಾರಾಯಣಗೌಡ ಹೇಳಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಎಂ.ಮಲ್ಲಿಕಾ, ನಿರ್ದೇಶಕರಾದ ಸತ್ಯಮೂರ್ತಿ, ನಾಗರತ್ನ, ಜಯಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

ಪೊಟೊ-13ಕೆಎನ್‌ಎಲ್‌ಎಮ್‌1-

ನೆಲಮಂಗಲದ ಸರ್ಕಾರಿ ಹಿರಿಯ ಮಾದರಿ ಶಾಲೆಯಲ್ಲಿ ಬೆಂಗಳೂರಿನ ಗಂಗಾನಗರದ ಟೆಲಿಕಾಂ ಎಂಪ್ಲಾಯಿಸ್ ಅಂಡ್ ಅದರ್ಸ್ ಹೌಸಿಂಗ್ ವೆಲ್ಫೇರ್ ಟ್ರಸ್ಟ್ ಹಮ್ಮಿಕೊಂಡಿದ್ದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರಗಳನ್ನು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಟ್ರಸ್ಟ್ ಅಧ್ಯಕ್ಷ ನರಸಿಂಹಮೂರ್ತಿ ವಿತರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರ ಕ್ಷೇತ್ರಕ್ಕೆ ಆರ್ಥಿಕ ಶಿಸ್ತು ಅಗತ್ಯ
ಅಧಿಕಾರಿಗಳು ಜಾತ್ಯತೀತವಾಗಿ ಕೆಲಸ ಮಾಡಿ : ಸಿಎಂ ಸಿದ್ದರಾಮಯ್ಯ