ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಅಗರಲಿಂಗನದೊಡ್ಡಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ನೂತನ ಕಟ್ಟಡ ನಿರ್ಮಾಣವನ್ನು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿದ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದರು.
ಗ್ರಾಮದಲ್ಲಿ ನಡೆಯುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಸೋಮವಾರ ವೀಕ್ಷಿಸಿ ಕಾಮಗಾರಿ ವಿಳಂಬದ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.
ಶಾಲಾ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಿ ವಿದ್ಯಾರ್ಥಿಗಳ ಅನುಕೂಲಕ್ಕೆ ಅನುವು ಮಾಡಿಕೊಡಬೇಕೆಂದು ಉಚ್ಚ ನ್ಯಾಯಾಲಯ ಆದೇಶ ಹೊರಡಿಸಿದ್ದರೂ ಸಹ ಗುತ್ತಿಗೆದಾರರು ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡರು.
ಕಟ್ಟಡ ಕಾಮಗಾರಿಗೆ ಜ.31ರಂದು ಭೂಮಿ ಪೂಜೆ ಮಾಡಲಾಗಿತ್ತು. ಜು.31ರಂದು ಕಾಮಗಾರಿ ಮುಗಿಸಿ ಉದ್ಘಾಟನೆಗೊಳ್ಳಬೇಕಿತ್ತು. ಆದರೆ, ಅಧಿಕಾರಿಗಳ ಬೇಜವಾಬ್ದಾರಿತನದಿಂದ ವಿಳಂಬವಾಗುತ್ತಿದೆ ಎಂದರು.
ಈ ಸಂಬಂಧ ಉಚ್ಚ ನ್ಯಾಯಾಲಯ ವಿಳಂಬಕ್ಕೆ ಕಾರಣಗಳೆನು ಏನು ಎಂಬುವುದರ ಬಗ್ಗೆ ಜಿಲ್ಲಾಡಳಿತಕ್ಕೆ ನೋಟಿಸ್ ಜಾರಿ ಮಾಡಿದ್ದು, ಸೆ.14ರಂದು ಮತ್ತೆ ನ್ಯಾಯಾಲಯದಲ್ಲಿ ಪ್ರಕರಣ ಇರುವುದರಿಂದ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಆ.7ರಂದು ಕಟ್ಟಡ ಉದ್ಘಾಟನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ತಾಕೀತು ಮಾಡಿದರು.
ಶಾಲಾ ಕಟ್ಟಡ ಉದ್ಘಾಟನೆಗೊಂಡ ಎರಡು ತಿಂಗಳೊಳಗೆ ಕಾಂಪೌಂಡ್, ರಸ್ತೆ ಹಾಗೂ ಆಟದ ಮೈದಾನವನ್ನು ನರೇಗಾ ಯೋಜನೆಯಡಿ ಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ಶಾಸಕ ಕೆ.ಎಂ.ಉದಯ್, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಎಸಿಎಂ.ಶಿವಮೂರ್ತಿ, ಇಒ ರಾಮಲಿಂಗಯ್ಯ, ಬಿಇಒ ಕಾಳೀರಯ್ಯ, ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ದಿವ್ಯಾ, ಸಹಾಯಕ ನಿರ್ದೇಶಕ (ನರೇಗಾ) ಮಂಜುನಾಥ್, ಎಸ್.ಡಿ.ಎಂ.ಸಿ ಅಧ್ಯಕ್ಷ ಸಂತೋಷ್, ಗ್ರಾಪಂ ಸದಸ್ಯರಾದ ಶಂಕರ್, ಹನುಮೇಗೌಡ, ಸುಜಾತ ಮುಖಂಡರಾದ ಮಹೇಶ್, ಪುಟ್ಟಪ್ಪ, ಬೋಮ್ಮಯ್ಯ, ತಿಮ್ಮಪ್ಪ, ಸತೀಶ್ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.