ಪುತ್ತೂರು: ಮುಂದಿನ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸಮುದಾಯದಲ್ಲಿ ಸಾಮಾಜಿಕ ಪರಿವರ್ತನೆ ಅಗತ್ಯವಾಗಿದ್ದು, ವೇಗವಾಗಿ ಬೆಳೆಯುತ್ತಿರುವ ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಮತ್ತು ಯುವಕರಲ್ಲಿ ಪರಿವರ್ತನೆ ತರುವ ಪ್ರಯತ್ನಗಳಾಗಬೇಕು. ಮನೆಯಲ್ಲಿ ಪರಿವರ್ತನೆಯಲ್ಲ, ಮನಸ್ಸಿನಲ್ಲಿ ಪರಿವರ್ತನೆಯಾಗಬೇಕು ಎಂದು ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.
ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಯುವ ಸಮುದಾಯ ದೇಶದ ಶಕ್ತಿ ಮಾತ್ರವಲ್ಲದೆ ಗೌಡ ಸಮುದಾಯಕ್ಕೂ ಶಕ್ತಿಯಾಗಿದ್ದಾರೆ. ಸಂಘಟನೆಗಳು ಹೊಸ ಮುಖಗಳಿಗೆ ಅವಕಾಶ ಮಾಡಿಕೊಡುತ್ತಿದೆ. ವಿದ್ಯಾರ್ಥಿ ಸಮೂಹವನ್ನು ಸಮಾಜದ ಮುಖ್ಯ ವಾಹಿನಿಗೆ ತರಬೇಕು. ನಮ್ಮ ಸಂಘ ಇನ್ನೊಂದು ಸಮಾಜದಿಂದ ಗೌರವ ಸಿಗುವ ಕೆಲಸ ಮಾಡಬೇಕು ಎಂದರು.ಒಕ್ಕಲಿಗ ಗೌಡ ಸೇವಾ ಸಂಘದ ನಿರ್ಗಮನ ಅಧ್ಯಕ್ಷ ರವಿ ಮುಂಗ್ಲಿಮನೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಗೌಡ ನಡುಬೈಲು ಅವರಿಗೆ ಪದಪ್ರದಾನ ಮಾಡಲಾಯಿತು. ಒಕ್ಕಲಿಗ ಗೌಡ ಮಹಿಳಾ ಸಂಘದ ನಿರ್ಗಮನ ಅಧ್ಯಕ್ಷೆ ವಾರಿಜ ಬೆಳಿಯಪ್ಪ ಗೌಡ, ನೂತನ ಕಾರ್ಯದರ್ಶಿ ಡಾ. ಶ್ರೀಧರ್ ಗೌಡ ಪಾಣತ್ತಿಲ ಮಾತನಾಡಿದರು. ಈ ಸಂದರ್ಭ ವಿವಿಧ ಕ್ಷೇತ್ರದಲ್ಲಿನ ೧೦ ಮಂದಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಏಷ್ಯನ್ ಬುಕ್ ಆಫ್ ರೆಕಾರ್ಡ್ ಮಾಡಿದ ಗಾಂಧಾರಿ ವಿದ್ಯೆ ಪ್ರವೀಣೆ ಶಮಿಕಾ ಅವರು ವೇದಿಕೆಯಲ್ಲಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಚಿತ್ರ ಬಿಡಿಸಿ ಪ್ರದರ್ಶಿಸಿದರು. ವೇದಿಕೆಯಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ನಿರ್ಗಮನ ಅದ್ಯಕ್ಷ ಅಮರನಾಥ ಗೌಡ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಮನೋಹರ್ ಡಿ.ವಿ., ಕಾರ್ಯದರ್ಶಿ ದಿವ್ಯಪ್ರಸಾದ್, ಒಕ್ಕಲಿಗ ಗೌಡ ಸೇವಾ ಸಂಘದ ನಿರ್ಗಮಿತಿ ಪ್ರಧಾನ ಕಾರ್ಯದರ್ಶಿ ದಯಾನಂದ ಕೆ.ಎಸ್, ಕಾರ್ಯಕ್ರಮ ಸಂಚಾಲಕಿ ಮೀನಾಕ್ಷಿ ಡಿ. ಗೌಡ, ಶ್ರೀಧರ ಗೌಡ ಕಣಜಾಲು, ಲಿಂಗಪ್ಪ ಗೌಡ ತೆಂಕಿಲ, ಪುರುಷೋತ್ತಮ ಮುಂಗ್ಲಿಮನೆ, ಕಾರ್ಯಕ್ರಮದ ಆರ್ಥಿಕ ಸಮಿತಿ ಸಂಚಾಲಕ ಶಿವರಾಮ ಮತಾವು, ಸುರೇಶ್ ಗೌಡ, ಬಂಟ್ವಾಳ ತಾಲೂಕು ಗೌಡ ಸಂಘದ ಅಧ್ಯಕ್ಷ ಸಿ. ಟಿ ಗೌಡ ಉಪಸ್ಥಿತರಿದ್ದರು. ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಸಂತ ವೀರಮಂಗಲ, ಉದಯ ಕರ್ಮಲ, ಮಲ್ಲಿಕಾ ಎಮ್ ಕಾರ್ಯಕ್ರಮ ನಿರೂಪಿಸಿದರು.