ಕನ್ನಡಪ್ರಭ ವಾರ್ತೆ ಪುತ್ತೂರು
ಅವರು ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಇದರ ದಶಮಾನೋತ್ಸವ ಸಂಭ್ರಮದ ಅಂಗವಾಗಿ ಸ್ವ ಸಹಾಯ ಸಂಘಗಳಿರುವ ಎಲ್ಲ ಗ್ರಾಮಗಳಲ್ಲಿನ ದಾಂಪತ್ಯ ಜೀವನವನ್ನು ೫೦ ವರ್ಷ ಪೂರೈಸಿದ ಮಾದರಿ ದಂಪತಿಗಳ ಸನ್ಮಾನ ಕಾರ್ಯಕ್ರಮಕ್ಕೆ ಗುರುವಾರ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕಾಂತಿಲ ಮನೆಯಲ್ಲಿ ಚಾಲನೆ ನೀಡಿ ಮಾತನಾಡಿದರು.
ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ದಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಗೌಡ ಚಾರ್ವಾಕ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಅಧ್ಯಕ್ಷ ಮನೋಹರ್ ಗೌಡ ಡಿ.ವಿ., ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಮಾತನಾಡಿದರು. ನಾಲ್ವರು ದಂಪತಿಗಳಿಗೆ ಸನ್ಮಾನ: ದಾಂಪತ್ಯ ಜೀವನದಲ್ಲಿ ೫೦ ವರ್ಷ ಮೇಲ್ಪಟ್ಟ ಹಿರಿಯರಾದ ಮಾದರಿ ದಂಪತಿಗಳಾದ ಬಲ್ನಾಡು ಗ್ರಾಮದ ಕಾಂತಿಲ ಮುತ್ತಪ್ಪ ಗೌಡ ಮತ್ತು ದಮಯಂತಿ ದಂಪತಿ, ಕೆಲ್ಲಾಡಿ ಮಾಂಕು ಗೌಡ ಮತ್ತು ಪದ್ಮಾವತಿ ದಂಪತಿ, ಬ್ರಹ್ಮರಕೋಡಿ ಬಾಬು ಗೌಡ ಮತ್ತು ಚಂದ್ರಾವತಿ ದಂಪತಿ, ಮುದಲಾಜೆ ಶೇಷಪ್ಪ ಗೌಡ ಮತ್ತು ಯಮುನಾ ದಂಪತಿಗಳನ್ನು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಸನ್ಮಾನಿಸಿ ಗೌರವಿಸಿದರು. ಸನ್ಮಾನಿತರ ಪರವಾಗಿ ಮುತ್ತಪ ಗೌಡ ಕಾಂತಿಲ ಅನಿಸಿಕೆ ವ್ಯಕ್ತಪಡಿಸಿದರು.ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ನ ಅಧ್ಯಕ್ಷ ಡಿ.ವಿ. ಮನೋಹರ್ ಅಧ್ಯಕ್ಷತೆ ವಹಿಸಿದ್ದರು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಸಲಹಾ ಸಮಿತಿ ಸದಸ್ಯ ಜಿನ್ನಪ್ಪ ಗೌಡ, ದಶಮಾನೋತ್ಸವ ಸಮಿತಿ ಗೌರವಧ್ಯಕ್ಷ ಎ.ವಿ. ನಾರಾಯಣ, ದಶಮಾನೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಮತ್ತಿತರರು ಉಪಸ್ಥಿತರಿದ್ದರು.