ಲಕ್ಕುಂಡಿ ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಭರತ್ ಭೇಟಿ

KannadaprabhaNewsNetwork |  
Published : Apr 06, 2025, 01:45 AM IST
ನರೇಗಾ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಓ ಭರತ್‌.ಎಸ್‌ ಬೇಟಿ ನೀಡಿ, ಪರಿಶೀಲಸಿದರು. | Kannada Prabha

ಸಾರಾಂಶ

ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಭೇಟಿ ನೀಡಿ ಕಾಮಗಾರಿ ಗುಣಮಟ್ಟ, ಅಳತೆ, ಯೋಜನೆ ಉದ್ದೇಶ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿದರು.

ಗದಗ: ತಾಲೂಕಿನ ಲಕ್ಕುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ 2025-26ನೇ ಸಾಲಿನ ಸಮುದಾಯ ಕಾಮಗಾರಿ ಸ್ಥಳಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್. ಭೇಟಿ ನೀಡಿ ಕಾಮಗಾರಿ ಗುಣಮಟ್ಟ, ಅಳತೆ, ಯೋಜನೆ ಉದ್ದೇಶ ಕುರಿತು ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿದರು.

ಆನಂತರ ಕಾಮಗಾರಿ ಕಡತ, ನ್ಯಾಶನಲ್ ಮೊಬೈಲ್ ಮಾನಿಟರಿಂಗ್ ಸಿಸ್ಟಮ್ (NMMS) ಹಾಜರಾತಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಕಾಯಕ ಬಂಧುಗಳಿಗೆ ಹಾಗೂ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಿಸಿದರು.ಮನರೇಗಾ ಯೋಜನೆಯ ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ವಿಶೇಷ ಅಭಿಯಾನದಡಿ ಪ್ರಗತಿಯಲ್ಲಿದ್ದ ಸಮುದಾಯ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

ಆನಂತರ ಮಾತನಾಡಿದ ಅವರು, ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಜಾಬ್ ಕಾರ್ಡ್ ಗೆ 100 ದಿನ ಅಕುಶಲ ಕೂಲಿ ಕೆಲಸ ನೀಡಲಾಗುವುದು. ಕಾಮಗಾರಿಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಒಂದು ಕೆಲಸ ಮುಗಿದ ಮೇಲೆ ಇನ್ನೊಂದು ಕೆಲಸಕ್ಕಾಗಿ ಯೋಚನೆ ಮಾಡುವಂತಿಲ್ಲ. ಕೂಲಿಕಾರರು ನಿರಂತರವಾಗಿ ಕೆಲಸ ಮಾಡಲು ಈಗಾಗಲೇ ನರೇಗಾ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೊದನೆ ನೀಡಿದ್ದು ಒಂದು ಕುಟುಂಬಕ್ಕೆ 100 ದಿನ ಕೂಲಿ ಕೆಲಸ ನೀಡಲು ಕಾಮಗಾರಿಗಳನ್ನು ಸಿದ್ಧಪಡಿಸಲಾಗಿದೆ ಮತ್ತು ಇದರ ಬಗ್ಗೆ ತಾಲೂಕು ಮತ್ತು ಗ್ರಾಮ ಪಂಚಾಯತಿಗಳ ಹಂತದ ಅಧಿಕಾರಿಗಳಿಗೆ ಈಗಾಗಲೆ ನಿರ್ದೇಶನ ನೀಡಲಾಗಿದೆ ಎಂದರು.ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರವನವರ ಮಾತನಾಡಿ, ಏ.1ರಿಂದ ನರೇಗಾ ಯೋಜನೆಯಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿಯೊಬ್ಬ ನೋಂದಾಯಿತ ಕೂಲಿಕಾರರಿಗೆ ನಿರಂತರವಾಗಿ 100 ದಿನಗಳ ಕೆಲಸ ಪಡೆಯುವ ಅವಕಾಶ ಹೊಂದಿದ್ದು ನಮೂನೆ - 6ರಲ್ಲಿ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿ ಕೆಲಸ ಪಡೆಯಬಹುದು ಹಾಗೂ ಪ್ರಸ್ತುತ ಆರ್ಥಿಕ ವರ್ಷ ಕೂಲಿ ಮೊತ್ತದಲ್ಲಿ ಭಾರಿ ಏರಿಕೆ ಕಂಡಿದ್ದು 349 ರು. ಗಳಿದ್ದ ಕೂಲಿ ಮೊತ್ತ 370ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ಗ್ರಾಪಂ ಅಧ್ಯಕ್ಷ ಕೆಂಚಪ್ಪ ಪೂಜಾರ ಮಾತನಾಡಿ, ಯೋಜನೆಯಡಿ ಪ್ರತಿ ಕೂಲಿಕಾರ್ಮಿಕರಿಗೆ ಜಾಬ್ ಕಾರ್ಡ್ ವಿತರಿಸಿ ವಾರ್ಷಿಕ 100 ಮಾನವ ದಿನಗಳ ಕೂಲಿ ಕೆಲಸ ನೀಡಲಾಗುತ್ತದೆ. ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಾಲೂಕು ವೈದ್ಯಾಧಿಕಾರಿ ಡಾ. ಪ್ರೀತ್‌ ಕೋನಾ ಮಾತನಾಡಿ, ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮುದಾಯ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ನರೇಗಾ ಕೂಲಿಕಾರರಿಗೆ ಉತ್ತಮ ಆರೋಗ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾಮಗಾರಿ ಸ್ಥಳದಲ್ಲಿಯೇ ಬಿಪಿ, ಶುಗರ್, ಮಧುಮೇಹ, ಅತಿ ರಕ್ತದೊತ್ತಡದಂತಹ ಪ್ರಾಥಮಿಕ ಅಸಾಂಕ್ರಾಮಿಕ ಗುಣಲಕ್ಷಣಗಳನ್ನು ಪತ್ತೆ ಹಚ್ಚಿ ಸೂಕ್ತ ಸಮಾಲೋಚನೆ ನೀಡಲಾಗುವುದು ಎಂದು ತಿಳಿಸಿದರು.

ಸಹಾಯಕ ನಿರ್ದೇಶಕ ಕುಮಾರ ಪೂಜಾರ, ಪಂಚಾಯತ ಅಭಿವೃದ್ದಿ ಅಧಿಕಾರಿ ಅಮೀರ ನಾಯಕ ಮಾತನಾಡಿದರು.

ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ, ತಾಲೂಕು ಐ.ಇ.ಸಿ. ಸಂಯೋಜಕ ವೀರೇಶ, ತಾಂತ್ರಿಕ ಸಹಾಯಕ ಅಜಯ ಅಬ್ಬಿಗೇರಿ, ನರೇಗಾ ಸಿಬ್ಬಂದಿಗಳು, ಕಾಯಕ ಬಂಧುಗಳು, ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ