ಹಾಸ್ಟೆಲ್‌, ಶಾಲೆ, ಆಸ್ಪತ್ರೆಗಳಿಗೆ ಜಿಪಂ ಸಿಇಒ ಭೇಟಿ

KannadaprabhaNewsNetwork |  
Published : Dec 03, 2024, 12:30 AM IST
ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ.ಬಾಗೇವಾಡಿ ತಾಪಂ ಮತ್ತು ನರಸಲಗಿ ಗ್ರಾಪಂಗೆ ದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ, ತಾಪಂ ಕಚೇರಿ ಸಿಬ್ಬಂದಿ ಹಾಜರಾತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ಆಚರಣೆ ಮಾಡುವಂತೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಬಸವನಬಾಗೇವಾಡಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬ.ಬಾಗೇವಾಡಿ ತಾಪಂ ಮತ್ತು ನರಸಲಗಿ ಗ್ರಾಪಂಗೆ ದಿಢೀರ್ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ, ತಾಪಂ ಕಚೇರಿ ಸಿಬ್ಬಂದಿ ಹಾಜರಾತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಪ್ರತಿ ತಿಂಗಳ ಮೊದಲ ಶನಿವಾರ ಸ್ವಚ್ಛ ಶನಿವಾರ ಆಚರಣೆ ಮಾಡುವಂತೆ ಸೂಚನೆ ನೀಡಿದರು.

ನರಸಲಗಿ ಗ್ರಾಪಂ ವ್ಯಾಪ್ತಿಯ ಹಂಚಿನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ, ಬಿಸಿಯೂಟ ಕೋಣೆ ಮತ್ತು ದಾಸ್ತಾನುಗಳನ್ನು ಪರಿಶೀಲಿಸಿದರು. ಕೇಂದ್ರದಲ್ಲಿ ಪ್ರತಿನಿತ್ಯ ಸ್ವಚ್ಛತೆ ಕಾಪಾಡಿಕೊಳ್ಳುವ ಜೊತೆಗೆ ಮಕ್ಕಳಿಗೆ ಶಿಸ್ತು ಪಾಲನೆ ಹಾಗೂ ಕಲಿಕೆಗೆ ಆದ್ಯತೆ ನೀಡಬೇಕು. ಪ್ರತಿ ತಿಂಗಳು ಕಡ್ಡಾಯವಾಗಿ ಮಕ್ಕಳು, ಬಾಣಂತಿಯರಿಗೆ ಪೂರಕ ಪೌಷ್ಟಿಕ ಆಹಾರದ ಸಮರ್ಪಕ ವಿತರಣೆ ಮಾಡಬೇಕು. ಪ್ರತಿ ತಿಂಗಳು ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳುವಂತೆ ಸೂಚನೆ ನೀಡಿದರು.

ಪ್ರತಿ ವಾರ ಶ್ರಮದಾನ ಹಮ್ಮಿಕೊಳ್ಳಬೇಕು. ಸರ್ಕಾರಿ ಶಾಲೆಯಲ್ಲಿಯೂ ಮಕ್ಕಳಿಗೆ ಉತ್ತಮ ಗುಣಮಟ್ಟದ ಬಿಸಿಯೂಟ ತಯಾರಿಸಿ ವಿತರಿಸಬೇಕು ಎಂದು ಮುಖ್ಯೋಪಾಧ್ಯಾಯರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಿದರು.

ನರಸಲಗಿ ಗ್ರಾಮದ ಪ್ರೌಢಶಾಲೆಗೆ ಭೇಟಿ ನೀಡಿ, 10ನೇ ತರಗತಿ ಕೊಠಡಿಗೆ ತೆರಳಿ ಮಕ್ಕಳ ಕಲಿಕಾ ಮಟ್ಟ ಪರಿಶೀಲಿಸಿದರು. ೧೦ನೇ ತರಗತಿ ಮಕ್ಕಳಿಗೆ ಗಣಿತ ವಿಷಯವನ್ನು ಬೋಧನೆ ಮಾಡಿದ ಅವರು, ಹತ್ತನೇ ತರಗತಿಯ ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಹೆಚ್ಚಿನ ಗಮನವಿಟ್ಟು ಓದಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಬಳಿಕ ನರಸಲಗಿ ಹಿಂದುಳಿದ ವರ್ಗದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಸತಿ ನಿಲಯದ ಆವರಣ, ಆಹಾರ ಕೋಣೆ, ಶುದ್ಧ ಕುಡಿಯುವ ನೀರು, ಅಡುಗೆ ಕೋಣೆ, ಗ್ರಂಥಾಲಯ ಪರಿಶೀಲಿಸಿ, ಅಡುಗೆ ಕೋಣೆ, ವಸತಿ ಕೋಣೆ, ಶೌಚಾಲಯ ಮತ್ತು ಆವರಣವನ್ನು ಪರಿಶೀಲಿಸಿದರು. ನಿಲಯದ ಆವರಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪೌಷ್ಟಿಕ ಕೈತೋಟವನ್ನು ನಿರ್ಮಿಸಿಕೊಳ್ಳಲು ಅಲ್ಲಿನ ಸಿಬ್ಬಂದಿಗೆ ಸಲಹೆ ನೀಡಿದರು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಕೊಠಡಿ ವ್ಯವಸ್ಥೆ ಬೆಡ್ ವ್ಯವಸ್ಥೆಗಳು ಕಡಿಮೆ ಇದ್ದಲ್ಲಿ ಜಿಲ್ಲಾ ಪಂಚಾಯಿತಿಗೆ ಅರ್ಜಿ ಸಲ್ಲಿಸಲು ವಾರ್ಡನ್‌ಗೆ ಸೂಚನೆ ನೀಡಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಸಿಬ್ಬಂದಿ ಹಾಜರಾತಿ ಪರಿಶೀಲಿಸಿದ ಅವರು, ಆಸ್ಪತ್ರೆಯಲ್ಲಿ ನಿರಂತರ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ನರಸಲಗಿ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪ.ಪಂಗಡ ವಸತಿ ನಿಲಯಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ವಸತಿ ನಿಲಯದ ಸ್ವಚ್ಛತೆ ಮತ್ತು ಶಿಸ್ತು ಪಾಲನೆ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಎ.ಎಂ ನರಸರಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ನಿಲಯಪಾಲಕ ರಸೂಲಸಾಬ, ಅಂಗನವಾಡಿ ಕಾರ್ಯಕರ್ತೆ ಗೀತಾ ಚಿಂಚೂಳ್ಳಿ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!