ಬದುಕು ರೂಪಿಸಿಕೊಳ್ಳಲು ಪದವಿ ಶಿಕ್ಷಣ ಸೂಕ್ತ

KannadaprabhaNewsNetwork |  
Published : May 23, 2026, 03:00 AM IST
ಖಾನಾಪುರ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಖಾನಾಪುರ ವಿದ್ಯಾರ್ಥಿಗಳಿಗೆ ತಮ್ಮ ಬದುಕು ರೂಪಿಸಿಕೊಳ್ಳುವ ಪದವಿ ಶಿಕ್ಷಣ ಸೂಕ್ತ ವೇದಿಕೆಯಾಗಿದೆ. ಇದನ್ನು ಯಶಸ್ವಿಯಾಗಿ ಮುಗಿಸಿದಾಗ ವಿದ್ಯಾರ್ಥಿಗಳ ಭವಿಷ್ಯ ಪರಿಪೂರ್ಣವಾಗಲಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಕನ್ನಡಪ್ರಭ ವಾರ್ತೆ ಖಾನಾಪುರ

ವಿದ್ಯಾರ್ಥಿಗಳಿಗೆ ತಮ್ಮ ಬದುಕು ರೂಪಿಸಿಕೊಳ್ಳುವ ಪದವಿ ಶಿಕ್ಷಣ ಸೂಕ್ತ ವೇದಿಕೆಯಾಗಿದೆ. ಇದನ್ನು ಯಶಸ್ವಿಯಾಗಿ ಮುಗಿಸಿದಾಗ ವಿದ್ಯಾರ್ಥಿಗಳ ಭವಿಷ್ಯ ಪರಿಪೂರ್ಣವಾಗಲಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಕಾಲೇಜಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್ ಮತ್ತು ಸ್ಕೌಟ್ಸ್, ಗೈಡ್ಸ್ ಚಟುವಟಿಕೆಗಳಲ್ಲಿ ಸಾಧಕರ ಸತ್ಕಾರ ಸಮಾರಂಭ ಗುರುವಾರ ಪಟ್ಟಣದ ಹೊರವಲಯದ ಶನಾಯಾ ಪಾಮ್ಸ್ ಸಭಾಗೃಹದಲ್ಲಿ ಜರುಗಿತು. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ, ಕ್ರೀಡೆ, ಎನ್‌ಎಸ್‌ಎಸ್, ರೆಡ್‌ ಕ್ರಾಸ್‌ ಮತ್ತಿತರ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶೇಷ ಸಾಧನೆಗಳನ್ನು ಮಾಡಿರುವುದನ್ನು ಗಮನಿಸಿದಾಗ ಈ ಕಾಲೇಜಿನಲ್ಲಿ ಪರಿಪೂರ್ಣತೆ ಇರುವುದು ಗೋಚರಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಕೆಎಲ್‌ಇ ಸಂಸ್ಥೆಯ ತರಬೇತಿ ಮತ್ತು ಅಭಿವೃದ್ಧಿ ಅಧಿಕಾರಿ ಸಮೀರ ಮಜಲಿ ಉಪನ್ಯಾಸ ನೀಡಿದರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಡಾ.ಡಿ.ಎಂ.ಜವಳಕರ ವಹಿಸಿದ್ದರು. ಇದೇ ವೇಳೆ ಕಾಲೇಜಿನ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರನ್ನು, ರಕ್ತದಾನ ನೀಡಿದ ದಾನಿಗಳನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಪ್ಪಯ್ಯ ಕೊಡೊಳಿ, ಜಾರ್ಡನ್ ಗೋನ್ಸಾಲ್ವಿಸ್, ವಿಠ್ಠಲ ಹೊಸೂರ, ಮಲ್ಲನಗೌಡ ಪಾಟೀಲ, ಎಸ್.ವಿ.ಪತಂಗೆ, ಎಸ್.ಬಿ.ಮೊರಬ, ರಾಜೇಂದ್ರ ರಾಯ್ಕಾ, ರವಿ ಪಾಟೀಲ ಸೇರಿದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು. ಡಾ.ರೇಷ್ಮಾ ಸದಲಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಅಂಬರೀಶ್‌ ರೇವತಗಾಂವ ಸ್ವಾಗತಿಸಿದರು. ಡಾ.ಸಿ.ಬಿ.ತಾಬೋಜಿ ಅತಿಥಿಗಳನ್ನು ಪರಿಚಯಿಸಿದರು. ಡಾ.ಪ್ರಶಾಂತ ಸಿದ್ನಾಳ, ಭಾಗ್ಯಶ್ರೀ ಪಾಟೀಲ ಮತ್ತು ಚಿತ್ರಾ ಬಡಿಗೇರ ನಿರೂಪಿಸಿದರು. ಡಾ.ಗೀತಾಂಜಲಿ ಕುರಡಗಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಗತ್ತಿನ ಕಲ್ಯಾಣ ಬಯಸುವ ಭಾರತೀಯ ಚಿಂತನೆಗಳು: ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ
ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಿ