ಪಕ್ಷದ ಕಾರ್ಯವೈಖರಿಗೆ ಪದವೀಧರರ ಒಲವು: ಡಾ.ಧನಂಜಯ ಸರ್ಜಿ

KannadaprabhaNewsNetwork |  
Published : May 15, 2024, 01:30 AM IST
ಬಿಜೆಪಿ | Kannada Prabha

ಸಾರಾಂಶ

ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 14 ವೈದ್ಯಕೀಯ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಉನ್ನತ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ 82 ಸಾವಿರ ಮಂದಿ ಪದವೀಧರರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಪಕ್ಷದ ಕಾರ್ಯವೈಖರಿಯನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಡಾ.ಧನಂಜಯ ಸರ್ಜಿ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ವೃತ್ತಿಯಲ್ಲಿ ವೈದ್ಯನಾಗಿ ಜನರ ನೋವು ಸಂಕಟಗಳನ್ನು ತಿಳಿದುಕೊಂಡು ಸೇವೆ ಮಾಡಿದ್ದೇನೆ. ಈಗ ಸಮಾಜದ ಕೆಲಸ ಮಾಡುವುದಕ್ಕೆ ಪಕ್ಷದ ಹಿರಿಯರು ಅವಕಾಶ ನೀಡಿದ್ದಾರೆ. ಮೇ 16ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹೇಳಿದರು.

ಅವರು ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ 14 ವೈದ್ಯಕೀಯ ಕಾಲೇಜು, 30 ಎಂಜಿನಿಯರಿಂಗ್ ಕಾಲೇಜು, 100 ಉನ್ನತ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಈಗಾಗಲೇ 82 ಸಾವಿರ ಮಂದಿ ಪದವೀಧರರು ಮತದಾರರಾಗಿ ನೋಂದಾಯಿಸಿಕೊಂಡಿದ್ದಾರೆ. ಪಕ್ಷದ ಕಾರ್ಯವೈಖರಿಯನ್ನು ಅರ್ಥಮಾಡಿಕೊಂಡಿದ್ದಾರೆ. ಆದ್ದರಿಂದ ತಾವು ಗೆಲ್ಲುವ ವಿಶ್ವಾಸ ಇದೆ ಎಂದರು.

* 22,000 ಶಿಕ್ಷಕರ ನೋಂದಣಿ

ಈ ಸಂದರ್ಭದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಮಾತನಾಡಿ, ಬಿಜೆಪಿ - ಜೆಡಿಎಸ್ ಹೊಂದಾಣಿಕೆ ಲೋಕಸಭಾ ಚುನಾವಣೆ ಬಳಿಕ ವಿಧಾನ ಪರಿಷತ್ ಚುನಾವಣೆಯಲ್ಲೂ ಮುಂದುವರಿದಿದೆ. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬಿಜೆಪಿ ಬಲಾಢ್ಯವಾಗಿದ್ದು, ಜೆಡಿಎಸ್ ಗೆಲುವಿಗೆ ಪೂರಕ ವಾತಾವರಣವಿದೆ. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ 22,000 ಮಂದಿ ಶಿಕ್ಷಕರು ನೋಂದಾಯಿಸಿಕೊಂಡಿದ್ದಾರೆ, ಗೆಲ್ಲುವ ವಾತಾವರಣ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಸುರೇಶ್ ನಾಯಕ್ ಕುಯಿಲಾಡಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಉಪಸ್ಥಿತರಿದ್ದರು.ಭಟ್ಟರ ಬೆಂಬಲದ ವಿಶ್ವಾಸ ಇದೆ

ಬಂಡಾಯವಾಗಿ ಸ್ಪರ್ಧೆ ಘೋಷಿಸಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರು ಪಕ್ಷದ ಹಿರಿಯ ಮುಖಂಡರಾಗಿದ್ದು, ಪಕ್ಷ ನಿಷ್ಠೆಗೆ ಹೆಸರಾಗಿದ್ದಾರೆ. ಪಕ್ಷ ಹಿರಿಯರು ಅವರೊಂದಿಗೆ ಮಾತನಾಡಿ ಅವರ ಎಲ್ಲ ಅಸಮಾಧಾನ ಬಗೆಹರಿಸಲಿದ್ದಾರೆ. ಅವರು ಸಂಘಟನೆ ಪರ ಕೆಲಸ ಮಾಡುವ ವಿಶ್ವಾಸವಿದೆ ಎಂದು ಧನಂಜಯ ಸರ್ಜಿ ವಿಶ್ವಾಸ ವ್ಯಕ್ತಪಡಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ