ಕಾಂಗ್ರೆಸ್‌ ಸರ್ಕಾರಕ್ಕೆ ಪದವೀಧರರು ತಕ್ಕ ಪಾಠ ಕಲಿಸಿ: ಯಡಿಯೂರಪ್ಪ

KannadaprabhaNewsNetwork |  
Published : Oct 19, 2026, 02:00 AM IST
೧೮ಕೆಎಂಎನ್‌ಡಿ-೨ಮಂಡ್ಯದ ಶಿವನಂಜಪ್ಪ ಉದ್ಯಾನವನದಲ್ಲಿ ಪರಿಚಯ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಸಂಡೇ ಲೈಬ್ರರಿ ಕಾರ್ಯಕ್ರಮದಲ್ಲಿ ಚಿತ್ರನಟ ತಬಲಾ ನಾಣಿ ಅವರು ಪೋಷಕರು, ಮಕ್ಕಳೊಂದಿಗೆ ಸಂವಾದ ನಡೆಸಿದರು. | Kannada Prabha

ಸಾರಾಂಶ

ಗ್ಯಾರಂಟಿಗಳ ಪ್ರಚಾರಕ್ಕೆ ಕೋಟಿ ಕೋಟಿ ರು. ಖರ್ಚು ಮಾಡುತ್ತಿರುವ ಸರ್ಕಾರ, ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಬಸ್‌ಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದೇ, ಬಸ್‌ಗಳು ನಿಂತುಹೋಗಿರುವ ಉದಾಹರಣೆ ಎಲ್ಲೂ ಇರಲಿಲ್ಲ. ಇದು ಸರ್ಕಾರ ದಿವಾಳಿ ಆಗಿರುವುದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

- ಆಗ್ನೇಯ ಪದವೀಧರರ ಕ್ಷೇತ್ರದ ವಿಪ ಚುನಾವಣಾ ಪ್ರಚಾರ ಸಭೆ । ಜನರ ಹಣ ವ್ಯಯಿಸಿದ ಬಗ್ಗೆ ಉತ್ತರ ನೀಡಲು ತಾಕೀತು

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಗ್ಯಾರಂಟಿಗಳ ಪ್ರಚಾರಕ್ಕೆ ಕೋಟಿ ಕೋಟಿ ರು. ಖರ್ಚು ಮಾಡುತ್ತಿರುವ ಸರ್ಕಾರ, ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿಯನ್ನು ಹದಗೆಡಿಸಿದೆ. ಸ್ವತಂತ್ರ ಭಾರತದ ಇತಿಹಾಸದಲ್ಲೇ ಬಸ್‌ಗಳಿಗೆ ಡೀಸೆಲ್ ಹಾಕಿಸಲೂ ಹಣವಿಲ್ಲದೇ, ಬಸ್‌ಗಳು ನಿಂತುಹೋಗಿರುವ ಉದಾಹರಣೆ ಎಲ್ಲೂ ಇರಲಿಲ್ಲ. ಇದು ಸರ್ಕಾರ ದಿವಾಳಿ ಆಗಿರುವುದಕ್ಕೆ ಸಾಕ್ಷಿ ಎಂದು ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ಬಿಜೆಪಿ ಮತ್ತು ಜೆಡಿಎಸ್ ಘಟಕಗಳ ವತಿಯಿಂದ ಆಯೋಜಿಸಿದ್ದ ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ವಿಧಾನಸೌಧದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ, ಮುಡಾ ಹಗರಣ ಹಾಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮಗಳಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಬಗ್ಗೆ ಸಾರ್ವಜನಿಕ ಹಣದ ಪ್ರತಿಯೊಂದು ರುಪಾಯಿಗೂ ಕಾಂಗ್ರೆಸ್ ಸರ್ಕಾರ ಉತ್ತರ ನೀಡಬೇಕು. ಪದವೀಧರರು ಕೇವಲ ಪದವಿ ಪಡೆದವರಲ್ಲ, ಅವರು ಕರ್ನಾಟಕದ ಭವಿಷ್ಯವನ್ನು ರೂಪಿಸುವ ಶಕ್ತಿ. ಆದರೆ, ಪ್ರಸ್ತುತ ನೇಮಕಾತಿ ಪ್ರಕ್ರಿಯೆಗಳಲ್ಲಿನ ವಿಳಂಬ ಹಾಗೂ ಅಕ್ರಮಗಳು ಯುವಜನರ ಆತ್ಮವಿಶ್ವಾಸವನ್ನು ಕುಗ್ಗಿಸಿವೆ. ಯುವಕರಿಗೆ ಸುಳ್ಳು ಭರವಸೆ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಪದವೀಧರರು ತಕ್ಕ ಪಾಠ ಕಲಿಸಬೇಕು. ಆಗ್ನೇಯ ಪದವೀಧರರ ಧ್ವನಿ ವಿಧಾನ ಪರಿಷತ್ತಿನಲ್ಲಿ ಪ್ರಬಲವಾಗಿ ಧ್ವನಿಸಬೇಕಾದರೆ ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಅವರನ್ನು ಬೃಹತ್ ಅಂತರದಲ್ಲಿ ಗೆಲ್ಲಿಸಿ ಕಳುಹಿಸಬೇಕು ಎಂದರು.

ಗಾಂಧಿ ಹೆಸರಿನಲ್ಲಿ ಕೈ ರಾಜಕೀಯ:

ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಗಾಂಧೀಜಿಯವರ ಹೆಸರನ್ನು ಬಳಸಿಕೊಂಡು ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದೆ. ರಾಹುಲ್ ಗಾಂಧಿ ಅವರಿಗೆ ಮಾತ್ರ ಎಸ್‌ಐಆರ್ ಹಾಗೂ ಪೌರತ್ವದ ವಿಚಾರದಲ್ಲಿ ಭಯವಿದೆ. ರಾಗಾ 1994ರಲ್ಲಿ ಬ್ರಿಟಿಷ್ ಪೌರತ್ವ ಪಡೆದಿದ್ದರು. ಭಾರತೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಭಾರತೀಯ ನಾಗರಿಕರಾಗಿ ಇರುವುದು ಕಡ್ಡಾಯ ಎಂಬ ಕಾನೂನಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಕಾನೂನಿನ ವಿಚಾರ ಮರೆಮಾಚಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ಆರೋಪದ ಹಿನ್ನೆಲೆ ರಾಹುಲ್ ಗಾಂಧಿ ಅವರಿಗೆ ಅನರ್ಹತೆಯ ಭೀತಿ ಎದುರಾಗಿದೆ ಎಂದು ಆರೋಪಿಸಿದರು.

ಹರಿಹರ ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸಬೇಕು. ಎನ್‌ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರನ್ನು ಗೆಲ್ಲಿಸಬೇಕು ಎಂದರು.

ಕೆ.ಎಂ. ಸುರೇಶ್ ಅವರಿಗೆ ಹೆಚ್ಚಿನ ಮತಗಳನ್ನು ನೀಡಿ ಗೆಲ್ಲಿಸುವಂತೆ ಹಾಗೂ ಕಾಗನೂರು ಮಂಜಣ್ಣ ಸೇರಿದಂತೆ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಬೆಂಬಲಿಸಬೇಕೆಂದು ಕೋರಿದರು. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ವೈ.ಎ. ನಾರಾಯಣ ಸ್ವಾಮಿ, ರುದ್ರೇಗೌಡ, ಮೇಘರಾಜ್, ಚೌಡರೆಡ್ಡಿ ತೂಪಲ್ಲಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಮೆಳ್ಳೆಕಟ್ಟೆ ನಾಗರಾಜ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಮಾಜಿ ಎಂಎಲ್‌ಸಿ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಚಂದ್ರಶೇಖರ ಪೂಜಾರ್, ಕಲ್ಲೇರುದ್ರೇಶ್, ಕೊಳ್ಳೆನಹಳ್ಳಿ ಸತೀಶ್, ಲೋಕಿಕೆರೆ ನಾಗರಾಜ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

- - -

(ಕೋಟ್‌) ದಾವಣಗೆರೆ ಜಿಲ್ಲೆಯಲ್ಲಿ 12-13 ವರ್ಷಗಳ ನಂತರ ಬಿಜೆಪಿ ಪಕ್ಷದಿಂದ ಸಾಮಾನ್ಯ ಕಾರ್ಯಕರ್ತನಿಗೆ ಸ್ಪರ್ಧಿಸಲು ಅವಕಾಶ ಸಿಕ್ಕಿದೆ. ಮೇ 23ರಂದು ನಡೆಯಲಿರುವ ಚುನಾವಣೆಯಲ್ಲಿ ಮತಪತ್ರದಲ್ಲಿ ಎರಡನೇ ಹೆಸರು ಇರುವುದರಿಂದ, ಒಂದು ಗುರುತು ಹಾಕುವ ಮೂಲಕ ಜಯಗಳಿಸಲು ಎಲ್ಲರೂ ಸಹಕರಿಸಬೇಕು.

- ಕೆ.ಎಂ.ಸುರೇಶ್, ಅಭ್ಯರ್ಥಿ.

- - -

-(ಫೋಟೋಗಳಿವೆ)

18ಕೆಡಿವಿಜಿ43, 44, 45, 46.:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾರ್ಕೆಟ್‌ಗಳಲ್ಲಿ ದಸರಾ ಖರೀದಿ ಭರಾಟೆ ಜೋರು
ಮನೆಯ ಸಮೀಪ ಹೈಟೆನ್ಷನ್‌ ವೈಯರ್‌ ತಗುಲಿ ಅಕ್ಕ-ತಮ್ಮನಿಗೆ ಗಂಭೀರ ಗಾಯ