ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಬೆಂಗಳೂರಿನ ಆರ್‌ವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಎನ್.ಸುಬ್ರಹ್ಮಣ್ಯ ಅವರು ಹೊಸ ತಂತ್ರಜ್ಞಾನದೊಂದಿಗೆ ನವೀಕರಿಸಿಕೊಳ್ಳುವುದು ಹಾಗೂ ತಮ್ಮ ಕೌಶಲ್ಯವನ್ನು ಸದಾ ಮೆರುಗು ಪಡಿಸಿಕೊಳ್ಳುವುದು ಅತ್ಯಗತ್ಯ. ಜೊತೆಯಲ್ಲಿ ಪಾಲಕರ ತ್ಯಾಗವನ್ನು ಸದಾ ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಸಿ.ಪಿ.ಬೆಳ್ಳಿಯಪ್ಪ ಹಾಗೂ ನಿರ್ದೇಶಕ ಡಾ.ಪೊನ್ನಮ್ಮ ಮಾಚಯ್ಯ ಅವರು ವಿದ್ಯಾರ್ಥಿಗಳು ಜೀವನಪೂರ್ತಿ ಕಲಿಕೆಯ ಮಹತ್ವವನ್ನು ಅರಿತುಕೊಳ್ಳಬೇಕು ಮತ್ತು ಬದಲಾಗುತ್ತಿರುವ ಜಗತ್ತಿಗೆ ತಕ್ಕಂತೆ ಬದುಕನ್ನು ಬದಲಾಯಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕೊಡವ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಕೆ.ಎ.ಚಿಣ್ಣಪ್ಪ, ಸಂಸ್ಥೆಯು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಹಾಗೂ ಕೌಶಲ್ಯ ನೀಡುತ್ತಿರುವುದನ್ನು ಪ್ರಶಂಸಿಸಿದರು.
ಕೂರ್ಗ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಪದವಿ ದೊರಕಿದಕ್ಕಾಗಿ ಅಭಿನಂದನೆ ಸಲ್ಲಿಸಿದರು ಮತ್ತು ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಪ್ರೇರಣೆಯ ಮಾತುಗಳನ್ನು ಹೇಳಿದರು.
ಕಾರ್ಯಕ್ರಮದ ಸಂಯೋಜಕ ಡಾ.ರಾಮಕೃಷ್ಣ ಬಿ.ಬಿ ಅವರು ಸ್ವಾಗತ ಭಾಷಣ ಮಾಡಿದರು. ಪ್ರೊ.ದೀಪಿಕಾ ನಿರೂಪಿಸಿ, ಪ್ರೊ.ಕಾವೇರಿ ಚಂಗಪ್ಪ ನಿರ್ವಹಿಸಿದರು.