ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ

KannadaprabhaNewsNetwork |  
Published : Jun 09, 2026, 03:00 AM IST
ಕುಶಾಲನಗರದ ಮಹಾತ್ಮಾಗಾಂಧಿ ಪದವಿ ಕಾಲೇಜಿನಲ್ಲಿ ತೃತೀಯ ಬಿ.ಕಾಂ ಹಾಗೂ ಬಿ.ಸಿ.ಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ | Kannada Prabha

ಸಾರಾಂಶ

ಕುಶಾಲನಗರದ ಮಹಾತ್ಮಾ ಗಾಂಧಿ ಪದವಿ ಕಾಲೇಜಿನಲ್ಲಿ ತೃತೀಯ ಬಿಕಾಂ ಹಾಗೂ ಬಿಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಜರುಗಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರದ ಮಹಾತ್ಮಾ ಗಾಂಧಿ ಪದವಿ ಕಾಲೇಜಿನಲ್ಲಿ ತೃತೀಯ ಬಿಕಾಂ ಹಾಗೂ ಬಿಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಜರುಗಿತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸ್ ಇನ್‌ಸ್ಪೆಕ್ಟರ್ ದಿನೇಶ್ ಕುಮಾರ್ ಬಿ.ಎಸ್. ಅವರು ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ವಿವೇಕಾನಂದ ವಿದ್ಯಾಸಂಸ್ಥೆ ಅಧ್ಯಕ್ಷ ಎನ್.ಎನ್. ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಂಜಿಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಲಿಖಿತಾ ಟಿ.ಎ., ವಿವೇಕಾನಂದ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ, ವಾಣಿಜ್ಯ ವಿಭಾಗದ ಉಪನ್ಯಾಸಕ ಸ್ವಾಮಿ ಗೌಡ ಹಾಗೂ ಕಚೇರಿ ಅಧೀಕ್ಷಕ ಮಹೇಶ್ ಆಮೀನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತೃತೀಯ ಬಿಕಾಂ ಹಾಗೂ ಬಿಸಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಶೈಕ್ಷಣಿಕ ಸಾಧನೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಾದ ತೃತೀಯ ಬಿಕಾಂ ವಿಭಾಗದ ಮನೀಷ್ ಹಾಗೂ ತೃತೀಯ ಬಿಸಿಎ ವಿಭಾಗದ ತೃಪ್ತಿ ಅವರಿಗೆ ವಿಶೇಷ ಬಹುಮಾನ ನೀಡಿ ಗೌರವಿಸಲಾಯಿತು.

ದೀಪ್ತಿ ಡಿಸೋಜ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಗರಬೆಟ್ಟ ಏತ ನೀರಾವರಿ ಪೂರ್ಣಗೊಳಿಸಲು ಆಗ್ರಹ
ಸಚಿವ ಸ್ಥಾನ ನೀಡದಿದ್ರೆ ಇಂಡಿ ಬಂದ್ ಗೆ ಕರೆ