ಕನಕಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ 17 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.
ಕನಕಪುರ: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿದ್ದ 17 ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿತ 7 ಅಭ್ಯರ್ಥಿ ಗಳು ಅವಿರೋಧ ಆಯ್ಕೆಯಾಗಿದ್ದರು. ಉಳಿದ 10 ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದಿತ್ತು. ಮಂಗಳವಾರ ಮತ ಎಣಿಕೆ ನಡೆದು ಎಲ್ಲಾ 10 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಆಯ್ಕೆಯಾಗಿದ್ದಾರೆ.
ಫಲಿತಾಂಶದ ಬಳಿಕ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಡಿ.ವಿಜಯದೇವ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ತಾಲೂಕಿಗೆ ನೀಡಿದ ಅಭಿವೃದ್ಧಿ ಕೊಡುಗೆಗಳೇ ಗ್ರಾಪಂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಕಾರಣ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಹಾಗೂ ಸದಸ್ಯರಿಗೆ ಅಭಿನಂದನೆ ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷ ಹೆಚ್.ಬಸಪ್ಪ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕೆ.ಎನ್.ದಿಲೀಪ್, ಗ್ರಾಪಂ ಮಾಜಿ ಅಧ್ಯಕ್ಷ ಏಳಗಳ್ಳಿ ರವಿ, ನಗರ ಯೋಜನಾ ಪ್ರಾಧಿಕಾರದ ನಿರ್ದೇಶಕ ಸಾತನೂರು ನಾಗರಾಜು, ಜಿಪಂ ಮಾಜಿ ಸದಸ್ಯರಾದ ಎಂ.ರಾಜೇಂದ್ರ, ಶಾಂತರಾಜು ಇತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.