ಗ್ರಾಮ ಪಂಚಾಯಿತಿ ನೌಕರರ ಸಂಘದ ಮುಷ್ಕರ, ಪೂರ್ವಭಾವಿ ಸಭೆ

KannadaprabhaNewsNetwork |  
Published : Sep 30, 2026, 02:15 AM IST
ಸವಣೂರ ಪಟ್ಟಣದ ದೊಡ್ಡಹುಣಸೆ ಕಲ್ಮಠಮಠದ ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳ ಮುಷ್ಕರ ಕುರಿತು ಪೂರ್ವಭಾವಿ ಸಭೆ ನಡೆಯಿತು. | Kannada Prabha

ಸಾರಾಂಶ

ಸವಣೂರು ತಾಲೂಕಿನ ಗ್ರಾಪಂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಕ್ಟೋಬರ್ ೧೨ರಂದು ತುಮಕೂರು ಶ್ರೀ ಸಿದ್ದಗಂಗಾ ಮಠದಿಂದ-ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಪಾದಯಾತ್ರೆ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಫಕ್ಕೀರೇಶ ನೆಲ್ಲೂರ ತಿಳಿಸಿದರು.

ಸವಣೂರು: ತಾಲೂಕಿನ ಗ್ರಾಪಂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅಕ್ಟೋಬರ್ ೧೨ರಂದು ತುಮಕೂರು ಶ್ರೀ ಸಿದ್ದಗಂಗಾ ಮಠದಿಂದ-ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೆ ಪಾದಯಾತ್ರೆ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಫಕ್ಕೀರೇಶ ನೆಲ್ಲೂರ ತಿಳಿಸಿದರು.

ದೊಡ್ಡಹುಣಸೆ ಕಲ್ಮಠಮಠದ ಆವರಣದಲ್ಲಿ ಏರ್ಪಡಿಸಿದ್ದ ತಾಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ಪದಾಧಿಕಾರಿಗಳ ಮುಷ್ಕರ ಕುರಿತು ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಪಂ ನೌಕರರಿಗೆ ಕನಿಷ್ಠ ವೇತನ, ಸೇವಾ ಹಿರೇತನದ, ಡಿಬಿಟಿ ಮುಖಾಂತರ ನೇರವಾಗಿ ಸಿಬ್ಬಂದಿಗಳಿಗೆ ವೇತನ ಪಾವತಿ ಮಾಡುವುದು ಹಾಗೂ ಇಎಸ್‌ಐ ಸೌಲಭ್ಯಗಳನ್ನು ಜಾರಿ ಮಾಡುವುದು, ರಾಜ್ಯಾದ್ಯಂತ ಗ್ರಾಪಂಗಳಲ್ಲಿ ಎಸ್‌ಡಿಎ ಹುದ್ದೆಯನ್ನು ಸೃಷ್ಟಿ ಮಾಡಿ ಪದೊನ್ನತ್ತಿ ನೀಡುವುದು.ವಾಟರ್‌ಮನ್‌ಗಳಿಗೆ ಬೀದಿ ದೀಪವನ್ನು ಅಳವಡಿಸುವ ಕಾರ್ಯವನ್ನು ವಹಿಸದಂತೆ ಕ್ರಮ ಕೈಗೊಳ್ಳಬೇಕು. ನಿವೃತ್ತಿ ಹೊಂದಿದ ನೌಕರರಿಗೆ ಉಪಧನ ಪಾವತಿಸಬೇಕು. ಕರ್ತವ್ಯದಲ್ಲಿರುವಾಗ ಮೃತಪಟ್ಟ ನೌಕರರ ಅವಲಂಬಿತರನ್ನು ನೇಮಕ ಮಾಡಿಕೊಂಡು ಅನುಮೋದನೆ ನೀಡಬೇಕು. ವಾಟರಮನ್ ಹಾಗೂ ಸಿಪಾಯಿ ಅವರನ್ನು ಬಿಲ್ ಕಲೆಕ್ಟರ್ ಹುದ್ದೆಗೆ ಪದೋನ್ನತಿ ನೀಡಬೇಕು ಎಂದು ಒತ್ತಾಯಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲು ಯೋಜನೆ ರೂಪಿಸಲಾಗಿದೆ ಎಂದರು.ಪ್ರಧಾನ ಕಾರ್ಯದರ್ಶಿ ನಾಗರಾಜ ತಳವಾರ, ಮಾತನಾಡಿ, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವ ಮೂಲಕ ನಮ್ಮ ಹಕ್ಕುಗಳನ್ನು ಪಡೆಯೋಣ ಎಂದು ನೌಕರರಿಗೆ ಕರೆನೀಡಿದರು. ಪದಾಧಿಕಾರಿಗಳಾದ ಗುರುಪಾದಪ್ಪ ಬಳ್ಕೊಳ್ಳಿ, ಫಕೀರೇಶ ತಳವಾರ, ಮಂಜುನಾಥ ಓಲೇಕಾರ, ಮಂಜುನಾಥ ಗುಲಗಂಜಿ, ಶ್ರೀಕಾಂತ ಮತ್ತೂರ, ಅಡಿವೆಪ್ಪ ಯಲ್ಲಣ್ಣನವರ, ಗುಡ್ಡಪ್ಪ ಹರಿಜನ, ಹನುಮಂತಪ್ಪ ಪಾಲ್ಗೊಂಡಿದ್ದರು. ಗಿರೀಶಗೌಡ ಪಾಟೀಲ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರ್ಮಿಕತೆ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ: ಸಚಿವ ಕೆ.ಎಸ್. ಬಸವಂತಪ್ಪ
ಮಾಜಿ ಸಂಸದ ಮಂಜುನಾಥ ಕುನ್ನೂರಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ