ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಮತ್ತು ಸರ್ಕಾರದ ಯೋಜನೆ ತಲುಪಿಸುವಲ್ಲಿ ಗ್ರಾಪಂಗಳ ಪಾತ್ರ ಮಹತ್ವದ್ದಾಗಿದೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಕನ್ನಡಪ್ರಭ ವಾರ್ತೆ ಖಾನಾಪುರ
ಪಂಚಾಯತ್ ರಾಜ್ ವ್ಯವಸ್ಥೆಯಡಿ ಗ್ರಾಮೀಣ ಭಾಗದ ಜನರಿಗೆ ಮೂಲಸೌಕರ್ಯ ಮತ್ತು ಸರ್ಕಾರದ ಯೋಜನೆ ತಲುಪಿಸುವಲ್ಲಿ ಗ್ರಾಪಂಗಳ ಪಾತ್ರ ಮಹತ್ವದ್ದಾಗಿದೆ. ಗೋಲ್ಯಾಳಿ ಗ್ರಾಪಂನ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಯ ಪ್ರಯತ್ನದ ಫಲವಾಗಿ ಅಲ್ಪಾವಧಿಯಲ್ಲಿ ಉತ್ತಮ ಕಟ್ಟಡ ನಿರ್ಮಾಣವಾಗಿದೆ. ಹೊಸ ಕಟ್ಟಡದಲ್ಲಿ ಪಂಚಾಯತಿಯ ಕಾರ್ಯಕಲಾಪಗಳು ಸುಗಮವಾಗಿ ಸಾಗಲು ಅನುಕೂಲವಾಗಲಿದೆ. ಹೊಸ ಕಟ್ಟಡದಲ್ಲಿ ಪಂಚಾಯತಿಯನ್ನು ಆರಂಭಿಸಿ ಸ್ಥಳೀಯ ನಿವಾಸಿಗಳಿಗೆ ಸರ್ಕಾರದ ಯೋಜನೆ ತಲುಪಿಸುವಲ್ಲಿ ಪಂಚಾಯತಿಯ ಜನಪ್ರತಿನಿಧಿಗಳು ಮತ್ತು ಸಿಬ್ಬಂದಿ ಪ್ರಯತ್ನ ಪಡಬೇಕು ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ತಾಲೂಕಿನ ಗೋಲ್ಯಾಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ಗ್ರಾಮ ಪಂಚಾಯತಿ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ನೂತನ ಕಟ್ಟಡದ ವಾಸ್ತುಶಾಂತಿ ಮತ್ತು ಗಣ್ಯರ ಸನ್ಮಾನ ಸಮಾರಂಭ ಜರುಗಿತು. ಗೋಲ್ಯಾಳಿ ಗ್ರಾಪಂ ಅಧ್ಯಕ್ಷ ನಾಮದೇವ ಗುರವ ಅಧ್ಯಕ್ಷತೆ ವಹಿಸಿದ್ದರು. ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ರೂಪಾಲಿ ಬಡಕುಂದ್ರಿ, ವಿಜಯಕುಮಾರ ಕೋತಿನ, ಪಿಡಿಒಗಳ ಸಂಘದ ಅಧ್ಯಕ್ಷ ಪ್ರಭಾಕರ ಭಟ್, ನೌಕರರ ಸಂಘದ ನಿರ್ದೇಶಕ ಬಾಲರಾಜ್ ಭಜಂತ್ರಿ, ನಿವೃತ್ತ ಮುಖ್ಯಶಿಕ್ಷಕಿ ಪ್ರಭಾವತಿ ಕುಲಕರ್ಣಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಪಂ ಪಿಡಿಒಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಆಹ್ವಾನಿತರು, ಗ್ರಾಪಂ ಸಿಬ್ಬಂದಿ ಇದ್ದರು. ಪಿಡಿಒ ಆನಂದ ಭಿಂಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನೀಲ ಚಿಗುಳಕರ ನಿರೂಪಿಸಿದರು. ಪ್ರಶಾಂತ ಕುಲಕರ್ಣಿ ಸ್ವಾಗತಿಸಿದರು, ಶಿವಾಜಿ ಚೌಗುಲೆ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.