ಗ್ರಾಮಭಾರತಿ ವಿದ್ಯಾಸಂಸ್ಥೆ ಕಾರ್ಯದಕ್ಷತೆ ಸಮಾಜಕ್ಕೆ ಮಾದರಿ: ಸಿ.ಎಸ್.ಪುಟ್ಟರಾಜು

KannadaprabhaNewsNetwork |  
Published : Sep 02, 2025, 01:00 AM IST
1ಕೆಎಂಎನ್ ಡಿ19 | Kannada Prabha

ಸಾರಾಂಶ

ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ಸಹಕಾರಿ ಬಂಧು ದಿ.ಎಸ್.ಎಂ.ಲಿಂಗಪ್ಪ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಲು ಗ್ರಾಮ ಭಾರತಿ ವಿದ್ಯಾಸಂಸ್ಥೆ ಸ್ಥಾಪಿಸಿದರು. ಇದರಿಂದ ಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಜ್ಞಾನದ ಬೆಳಕಿನ ಶಕ್ತಿ ನೀಡುವ ಮೂಲಕ ಇಡೀ ನಾಗರಿಕ ಸಮಾಜವೇ ಮೆಚ್ಚುವಂತಹ ಕೆಲಸ ಮಾಡಿದೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸಾವಿರಾರು ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿರುವ ಗ್ರಾಮ ಭಾರತಿ ವಿದ್ಯಾ ಸಂಸ್ಥೆಯ ಕಾರ್ಯದಕ್ಷತೆ ನಾಗರಿಕ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಮೆಚ್ಚುಗೆ ವ್ಯಕ್ತಪಡಿಸಿದರು.

ಪಟ್ಟಣದ ಸಂಸ್ಥೆ ಆವರಣದಲ್ಲಿ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಷನ್ ಟ್ರಸ್ಟ್ ವತಿಯಿಂದ ಅತ್ಯುತ್ತಮ ಶಿಕ್ಷಣ ಸಂಸ್ಥೆಗೆ ನೀಡಲಾಗುತ್ತಿರುವ ನಿತ್ಯ ಸಚಿವ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ಸಹಕಾರಿ ಬಂಧು ದಿ.ಎಸ್.ಎಂ.ಲಿಂಗಪ್ಪ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಲು ಗ್ರಾಮ ಭಾರತಿ ವಿದ್ಯಾಸಂಸ್ಥೆ ಸ್ಥಾಪಿಸಿದರು. ಇದರಿಂದ ಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಜ್ಞಾನದ ಬೆಳಕಿನ ಶಕ್ತಿ ನೀಡುವ ಮೂಲಕ ಇಡೀ ನಾಗರಿಕ ಸಮಾಜವೇ ಮೆಚ್ಚುವಂತಹ ಕೆಲಸ ಮಾಡಿದೆ ಎಂದರು.

ಕೆ.ಆರ್.ಪೇಟೆ ಶಾಸಕರಾಗಿ ರಾಜ್ಯದ ಸಹಕಾರ ಕ್ಷೇತ್ರದ ಹಿರಿಯ ಮುತ್ಸದ್ದಿಯಾಗಿ ಬದ್ಧತೆಯಿಂದ ಕಾರ್ಯ ನಿರ್ವಹಿಸಿರುವ ಎಸ್.ಎಂ.ಲಿಂಗಪ್ಪ ಅವರು ಕಳೆದ 50 ವರ್ಷಗಳ ಹಿಂದೆ 1974ರಲ್ಲಿ ಗ್ರಾಮ ಭಾರತಿ ವಿದ್ಯಾ ಸಂಸ್ಥೆ ಹುಟ್ಟು ಹಾಕಿ ರೈತಾಪಿ ವರ್ಗದ, ಬಡವರ, ಶ್ರೀಸಾಮಾನ್ಯರ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಲು ಲಕ್ಷಾಂತರ ವಿದ್ಯಾರ್ಥಿಗಳು ಬದುಕು ಕಟ್ಟಿಕೊಳ್ಳಲು ಆಸರೆಯಾಗಿದ್ದಾರೆ ಎಂದರು.

ಗ್ರಾಮ ಭಾರತಿ ವಿದ್ಯಾ ಸಂಸ್ಥೆ ಆರಂಭವಾಗಿ 50 ವರ್ಷಗಳು ಪೂರ್ಣಗೊಂಡು ಸುವರ್ಣ ಮಹೋತ್ಸವ ಕಂಡಿದೆ. ಇಲ್ಲಿ ವ್ಯಾಸಂಗ ಮಾಡಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದಲ್ಲಿ ಜವಾಬ್ದಾರಿಯುತ ಪ್ರಜೆಗಳಾಗಿ ಸುಂದರ ಬದುಕು ಕಟ್ಟಿಕೊಂಡಿದ್ದಾರೆ ಎಂದರು.

ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿ ಮಹತ್ವದ ಸೇವೆ ಕೈಗೊಂಡಿರುವ ಸಂಸ್ಥೆ ಸಾರ್ಥಕ ಸೇವೆ ಪರಿಗಣಿಸಿ ನಂಜಮ್ಮ ಮೋಟೆಗೌಡ ಚಾರಿಟಬಲ್ ಮತ್ತು ಎಜುಕೇಶನ್ ಟ್ರಸ್ಟ್ ನಿತ್ಯ ಸಚಿವ ಕೆ.ವಿ.ಶಂಕರಗೌಡರ ಹೆಸರಿನಲ್ಲಿ ಶಿಕ್ಷಣ ಪ್ರಶಸ್ತಿ ನೀಡಿದೆ.

ಎಸ್.ಎಂ.ಲಿಂಗಪ್ಪ ಅವರ ನಿಧನದ ನಂತರ ಮೊಮ್ಮಗ ಎಸ್.ಸಿ.ಕಿರಣ್ ಕುಮಾರ್ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಮಾಜಿ ಶಾಸಕ ಎಸ್.ಎಂ.ಲಿಂಗಪ್ಪರ ಜೀವನ ಸಾಧನೆ ಹಾಗೂ ಸಂಸ್ಥೆ ನಡೆದು ಬಂದ ಹಾದಿ ಕುರಿತು ಮಾತನಾಡಿದರು. ಕರ್ನಾಟಕ ಸಂಘದ ಅಧ್ಯಕ್ಷ ಪ್ರೋ.ಜಯಪ್ರಕಾಶ್‌ಗೌಡ ಕೆ.ವಿ.ಶಂಕರೇಗೌಡರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದರು. ತಾಲೂಕು ಕಸಾಪ ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್ ಸಮಕಾಲೀನ ಶೈಕ್ಷಣಿಕ ಕ್ಷೇತ್ರದ ಸವಾಲುಗಳನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಎಚ್.ಟಿ.ಮಂಜು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆ ಅಧ್ಯಕ್ಷ ಎಸ್.ಸಿ.ಕಿರಣ್ ಕುಮಾರ್ ಹಾಗೂ ಅವರ ಮಾತೃಶ್ರೀ ಪುಟ್ಟ ಲಕ್ಷ್ಮಮ್ಮ ಅವರಿಗೆ ನಂಜಮ್ಮ ಮೋಟೆಗೌಡ ಚಾರಿಟಬಲ್ ಹಾಗೂ ಎಜುಕೇಷನಲ್ ಟ್ರಸ್ಟ್ ವತಿಯಿಂದ ಕೆ.ವಿ.ಶಂಕರಗೌಡ ಶಿಕ್ಷಣ ಪ್ರಶಸ್ತಿ, 25 ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕ ಪ್ರದಾನ ಮಾಡಿ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಟ್ರಸ್ಟ್ ಅಧ್ಯಕ್ಷ ಅಲೈ ಕೆ.ಟಿ.ಹನುಮಂತು, ಲಯನ್ಸ್ ಸಂಸ್ಥೆ 2ನೇ ಉಪರಾಜ್ಯಪಾಲ ಅಲೈ ಕೆ.ಎಸ್.ಚಂದ್ರಶೇಖರ್, ತಾಲೂಕು ಕಸಾಪ ಮಾಜಿ ಅಧ್ಯಕ್ಷರಾದ ಕೆ.ಎಸ್.ಸೋಮಶೇಖರ್, ಪತ್ರಕರ್ತರಾದ ಬಳ್ಳೇಕೆರೆ ಮಂಜುನಾಥ್, ಕೆ.ಆರ್.ನೀಲಕಂಠ, ಸಮಾಜ ಸೇವಕರಾದ ಜಯರಾಮು, ರಾಜಶೇಖರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''