ಜನಪದ ಸಾಹಿತ್ಯದಲ್ಲಿ ಗ್ರಾಮೀಣ ಸೊಗಡು ಅಡಕ

KannadaprabhaNewsNetwork |  
Published : Dec 01, 2024, 01:32 AM IST
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕನ್ನಡ ನಾಡು ಹಿತರಕ್ಷಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ರಾಜ್ಯ ಮಟ್ಟದ ಅದ್ದೋರಿ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಮತ್ತು ಬಿರುದುಗಳನ್ನು ನೀಡುವ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಸೇರಿದಂತೆ ಮೊದಲಾದವರು ಇದ್ದಾರೆ | Kannada Prabha

ಸಾರಾಂಶ

ಜನಪದ ಸಾಹಿತ್ಯದಲ್ಲಿ ಗ್ರಾಮೀಣ ಸೊಗಡಿನ ಮನಮುಟ್ಟುವಂತಹ ಸಾಹಿತ್ಯ ಅಡಕವಾಗಿದೆ. ಮಾತೃಭಾಷೆ ಕನ್ನಡಕ್ಕಿರುವ ಗಟ್ಟಿತನ ಬೇರೆ ಯಾವ ಭಾಷೆಗಳಲ್ಲಿ ಸಿಗಲಾರದು ಎಂದು ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಹೇಳಿದ್ದಾರೆ.

- ಚನ್ನಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ - - - ಕನ್ನಡಪ್ರಭ ವಾರ್ತೆ ಚನ್ನಗಿರಿ

ಜನಪದ ಸಾಹಿತ್ಯದಲ್ಲಿ ಗ್ರಾಮೀಣ ಸೊಗಡಿನ ಮನಮುಟ್ಟುವಂತಹ ಸಾಹಿತ್ಯ ಅಡಕವಾಗಿದೆ. ಮಾತೃಭಾಷೆ ಕನ್ನಡಕ್ಕಿರುವ ಗಟ್ಟಿತನ ಬೇರೆ ಯಾವ ಭಾಷೆಗಳಲ್ಲಿ ಸಿಗಲಾರದು ಎಂದು ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಕನ್ನಡ ನಾಡು ಹಿತರಕ್ಷಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ರಾಜ್ಯಮಟ್ಟದ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಮತ್ತು ಬಿರುದುಗಳ ವಿತರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯವು ಸೌಹಾರ್ದಕ್ಕೆ ಹೆಸರಾಗಿದೆ. ದೇಶದ ಹಲವಾರು ರಾಜ್ಯಗಳಿಂದ ಬರುವಂತಹ ಅನ್ಯರಾಜ್ಯಗಳ ಜನರಿಗೆ ಆಶ್ರಯ ನೀಡುತ್ತಿದೆ. ಇಂಥ ಕನ್ನಡ ನಾಡನ್ನು ಪ್ರೀತಿಯಿಂದ ಉಳಿಸಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದರು.

ಕನ್ನಡನಾಡು ಅನೇಕ ಸಂಸ್ಕೃತಿ ಸಂಪ್ರದಾಯಗಳಿಂದ ಕೂಡಿದೆ. ಮಕ್ಕಳನ್ನು ಉತ್ತಮವಾದ ಸಂಸ್ಕಾರವಂತರನ್ನಾಗಿ ಮಾಡಬೇಕಾಗಿದೆ. ಇಂದಿನ ದಿನಗಳಲ್ಲಿ ಕೆಲ ವಿದ್ಯಾರ್ಥಿಗಳು ಸಣ್ಣಪುಟ್ಟ ವಿಷಯಗಳಿಗೆಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಪೋಷಕರಾದವರರು ತಮ್ಮ ಮಕ್ಕಳಿಗೆ ಜೀವನದ ಮೌಲ್ಯಗಳನ್ನು ತಿಳಿಸುತ್ತಾ ಬೆಳೆಸಬೇಕು. ಕೈ, ಬಾಯಿ, ಕಚ್ಚೆ ಈ ಮೂರು ಶುದ್ಧ ಇದ್ದಂತವರು ಎಲ್ಲ ಕ್ಷೇತ್ರಗಳಲ್ಲಿಯೂ ಯಶಸ್ವಿ ಆಗುತ್ತಾರೆ. ಸಾಮಾಜಿಕ ಕ್ಷೇತ್ರಗಳಲ್ಲಿ ಕೆಲಸ ಮಾಡುವಂತವರು ತೆರೆದ ಪುಸ್ತಕದಂತಿರಬೇಕು ಎಂದರು.

ಸಮಾರಂಭ ಉದ್ಘಾಟಿಸಿದ ನಿವೃತ್ತ ಐ.ಎ.ಎಸ್ ಅಧಿಕಾರಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಸಿ.ಸೋಮಶೇಖರ್ ಮಾತನಾಡಿ, ಸರ್ಕಾರಿ ಅಧಿಕಾರಿಗಳಾದವರು, ರಾಜಕಾರಣಿಗಳು ರಾಜ್ಯದ ಆಡಳಿತ ಭಾಷೆಯಾದ ಕನ್ನಡಕ್ಕೆ ಪ್ರಾಶಸ್ತ್ಯ ನೀಡಬೇಕು. ತುಮಕೂರಿನಲ್ಲಿ ಜಿಲ್ಲಾಧಿಕಾರಿ ಆಗಿದ್ದಾಗ ಪ್ರತಿಯೊಂದು ಕಡತಗಳನ್ನು ಕನ್ನಡದಲ್ಲಿಯೇ ವ್ಯವಹರಿಸುತ್ತಿದ್ದೆ. ಕರ್ನಾಟಕದಲ್ಲಿ ಅಧಿಕಾರಿಗಳು, ರಾಜಕಾರಣಿಗಳು ಆಂಗ್ಲಭಾಷೆ ವ್ಯಾಮೋಹಕ್ಕೆ ಒಳಗಾಗಬಾರದು ಎಂದು ಕನ್ನಡ ಭಾಷೆ ಅಭಿಮಾನದ ಬಗ್ಗೆ ತಿಳಿಸಿದರು.

ಕನ್ನಡ ನಾಡು ಹಿತರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಿತಿಯ ಸೇವಾ ಕಾರ್ಯ ಕನ್ನಡನಾಡು, ನುಡಿಗೆ ಶ್ರಮಿಸುತ್ತಿರುವ ಬಗ್ಗೆ ವಿವರವಾಗಿ ತಿಳಿಸಿದರು.

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಪುತ್ರ ರಾಹುಲ್ ಜಾರಕಿಹೊಳಿ, ಸಮಿತಿಯ ರಾಜ್ಯ ಮಹಿಳಾ ಘಟಕ ಅಧ್ಯಕ್ಷೆ ಗೀತಾಗಿರಿಜ, ಪತ್ರಕರ್ತ ಚಂದ್ರಹಾಸ ಹಿರೇಮಳಲಿ, ಜಿಪಂ ಮಾಜಿ ಸದಸ್ಯ ಹೊದಿಗೆರೆ ರಮೇಶ್, ನಿವೃತ್ತ ವಲಯ ಅರಣ್ಯಾಧಿಕಾರಿ ವೀರೇಶ್ ನಾಯ್ಕ್, ಚನ್ನಗಿರಿ ವಲಯ ಅರಣ್ಯಾಧಿಕಾರಿ ಶ್ವೇತಾ, ತಾಪಂ ಮಾಜಿ ಅಧ್ಯಕ್ಷ ಸಿ.ನಾಗರಾಜ್, ಮೋನಿಕ, ಜಯಣ್ಣ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಮಾಧ್ಯಮ ಕ್ಷೇತ್ರ, ವೈದ್ಯಕೀಯ ಕ್ಷೇತ್ರ, ಶಿಕ್ಷಣ ಕ್ಷೇತ್ರ, ಕ್ರೀಡಾಕ್ಷೇತ್ರ, ಸಾಮಾಜಿಕ ಸೇವೆ ಈ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಕರ್ನಾಟಕ ಪ್ರಜಾಭೂಷಣ, ಕರ್ನಾಟಕ ಸೇವಾ ರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು, ವಿದ್ಯಾರ್ಥಿನಿ ಇಂಚರ ಈ ಬಾಲಕಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಯಿತು. ಅನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

- - -

-30ಕೆಸಿಎನ್‌ಜಿ1.ಜೆಪಿಜಿ:

ಚನ್ನಗಿರಿಯಲ್ಲಿ ಕನ್ನಡನಾಡು ಹಿತರಕ್ಷಣಾ ಸಮಿತಿ ಏರ್ಪಡಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮವನ್ನು ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಸಿ.ಸೋಮಶೇಖರ್ ಉದ್ಘಾಟಿಸಿದರು. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಇನ್ನಿತರ ಗಣ್ಯರು ಇದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ