ಬಸವಣ್ಣನವರ ತತ್ವ ಅಳವಡಿಸಿಕೊಳ್ಳೋಣಅದ್ದೂರಿಯಾಗಿ ಬಸವ ಜಯಂತಿ ಆಚರಣೆ

KannadaprabhaNewsNetwork |  
Published : Jun 04, 2025, 12:27 AM ISTUpdated : Jun 04, 2025, 12:28 AM IST
59 | Kannada Prabha

ಸಾರಾಂಶ

ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಬಡತನ ಇರುವುದಿಲ್ಲ

ಕನ್ನಡಪ್ರಭ ವಾರ್ತೆ ಮಲ್ಕುಂಡಿ

ನಂಜನಗೂಡು ತಾಲೂಕಿನ ಹೆಡಿಯಾಲದಲ್ಲಿ ಅದ್ಧೂರಿ ಬಸವ ಜಯಂತಿ ಆಚರಿಸಲಾಯಿತು.

ಬಸವಣ್ಣ ಹಾಗೂ ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರವನ್ನು ನಂದಿ ಕಂಬ ವೀರಗಾಸೆ, ಡೋಲು ಕುಣಿತದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಗ್ರಾಪಂ ಅಧ್ಯಕ್ಷ ನಾಗೇಶ್ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾತನಾಡಿ, ವಿಶ್ವಗುರು ಬಸವಣ್ಣನವರ ತತ್ವ ಸಿದ್ದಾಂತಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಸಮಾಜದಲ್ಲಿ ಬಡತನ ಇರುವುದಿಲ್ಲ ಎಂದು ಹೇಳಿದರು.

ಬಸವಣ್ಣನವರು ಕಾಯಕವೆ ಕೈಲಾಸ ಎನ್ನುವ ಮೂಲಕ ದುಡಿಮೆಯ ಹಿರಿಮೆಯನ್ನು ಸಾರಿದರು. ದುಡುಮೆಗೆ ಬೆಲೆ ನೀಡಿದರೆ ಬಡತನ ನಿರ್ಮೂಲನೆ ಶತಸಿದ್ದ. ಬುದ್ದ, ಬಸವ, ಅಂಬೇಡ್ಕರ್ ಇವರು ಮೊದಲಾದ ಮಹಾಪುರುಷರು ಯಾವುದೇ ಒಂದು ಜಾತಿಗೆ ಸೀಮಿತವಿರಲಿ ಅವರು ಇಡೀ ಮಾನವ ಕುಲಕ್ಕೆ ಮಾದರಿಯಾಗಿದ್ದಾರೆ. ಇಂತಹ ಮಹನೀಯರ ಜಯಂತಿ ಆಚರಿಸುವ ಮೂಲಕ ಅವರ ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಮಾತ್ರ ಅವರ ಜಯಂತಿಗೆ ಅರ್ಥ ಸಿಗುತ್ತದೆ ಎಂದು ಅವರು ತಿಳಿಸಿದರು.

ದಡದಹಳ್ಳಿ ಮಠಾಧ್ಯಕ್ಷ ಷಡಕ್ಷರಿ ಸ್ವಾಮೀಜಿ ಸೇರಿದಂತೆ ಬಸವ ಬಳಗದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾ.ನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು
ವಜ್ರ, ಚಿನ್ನ ಪತ್ತೆಗೆ 6.71 ಲಕ್ಷ ಹೆಕ್ಟೇರ್‌ ಭೂ ಗುರುತು