ಮಹಾತ್ಮ ಗಾಂಧೀಜಿ ಜಯಂತಿ ಅದ್ಧೂರಿ ಆಚರಣೆ: ರಾಯಪ್ಪ ಹುಣಸಗಿ

KannadaprabhaNewsNetwork |  
Published : Sep 30, 2024, 01:23 AM IST
ಕಲಬುರಗಿ: ಜಿಲ್ಲಾಡಳಿತದಿಂದ ಅಕ್ಟೋಬರ್ 2 ರಂದು ಮಹಾತ್ಮಾಗಾಂಧೀಜಿ ಜಯಂತಿಯನ್ನು ಅದ್ದೂರಿಯಾಗಿ ಅಚರಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ರಂದು ಜರುಗಿದ ಸಭೆಯಲ್ಲಿ ನಿರ್ಧರಿಸಲಾಯಿತು. | Kannada Prabha

ಸಾರಾಂಶ

ಅಪರ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ. ಜಯಂತಿಗೆ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೂಚನೆ ನೀಡಿದರು.ಅ.2ರಂದು ಬೆಳಗ್ಗೆ 9 ಗಂಟೆಗೆ ಟೌನ್ ಹಾಲಿನಲ್ಲಿರುವ ಗಾಂಧೀಜಿ ಪ್ರತಿಮೆ ಮೊದಲು ಮಾಲಾರ್ಪಣೆ ಮಾಡಿ ಡಾ. ಎಸ್. ಪಂಡಿತ ರಂಗಮಂದಿರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಕಲಬುರಗಿ

ಅ.2 ರಂದು ಜಿಲ್ಲಾಡಳಿತದಿಂದ ಮಹಾತ್ಮಾಗಾಂಧೀಜಿ ಜಯಂತಿಯನ್ನು ಅದ್ಧೂರಿಯಾಗಿ ಅಚರಿಸುವ ಬಗ್ಗೆ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜರುಗಿದ ಸಭೆಯಲ್ಲಿ ಅವರು ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಲಬುರಗಿ ಮಹಾನಗರ ಪಾಲಿಕೆ, ಭಾರತ ಸೇವಾದಳ ಜಿಲ್ಲಾ ಸಮಿತಿ ಕಲಬುರಗಿ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

ಅ.2ರಂದು ಬೆಳಗ್ಗೆ 9 ಗಂಟೆಗೆ ಟೌನ್ ಹಾಲಿನಲ್ಲಿರುವ ಗಾಂಧೀಜಿ ಪ್ರತಿಮೆ ಮೊದಲು ಗಣ್ಯವ್ಯಕ್ತಿಗಳಿಂದ ಮಾಲಾರ್ಪಣೆ ಮಾಡಿ ಡಾ. ಎಸ್. ಪಂಡಿತ ರಂಗಮಂದಿರದಲ್ಲಿ 9.15 ಗಂಟೆಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಭೆಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ, ಅಪರ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು, ಶಾಲಾಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಅಂದು ನಡೆಯುವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆ ತರುವ ವ್ಯವಸ್ಥೆ ಮಾಡಲು ಸೂಚಿಸಿದರು.

ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ ಇರುವುದರಿಂದ ಎಲ್ಲಾ ಧರ್ಮದ ಗುರುಗಳನ್ನು ಆಹ್ವಾನಿಸಬೇಕು. ಮಹಾತ್ಮ ಗಾಂಧೀಜಿಯವರ ತತ್ವ ಸಂದೇಶ ಕುರಿತು ಉಪನ್ಯಾಸ ನೀಡಲು ಓರ್ವ ವಿಷಯ ತಜ್ಞರ ಹೆಸರು ಅಂತಿಮಗೊಳಿಸಲಾಯಿತು.

ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳನ್ನು ಆಮಂತ್ರಣ ಪತ್ತಿಕೆಯನ್ನು ಸಿದ್ಧಪಡಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿಗಳಿಂದ ಚರಕ ನೂಲುವ ಪ್ರಾತ್ಯಕ್ಷಿಕೆ ಜರುಗುವುದು. ಸರ್ವಧರ್ಮ ಪ್ರಾರ್ಥನೆ, ಸಂಗೀತ ಕಲಾವಿದರಿಂದ ಗಾಂಧಿ ಪ್ರಿಯ ಮತ್ತು ಸದ್ಭಾವನೆ ಗೀತೆ ಗಾಯನ, ಇದೇ ಸಂದರ್ಭದಲ್ಲಿ ವಾರ್ತಾ ಇಲಾಖೆಯು ಆಯೋಜಿಸಿದ ಬಾಪೂಜಿ ಕುರಿತು ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು.

ಜಿಲ್ಲೆಯ ಎಲ್ಲಾ ಸರ್ಕಾರಿ -ಅರೇ ಸರ್ಕಾರಿ ಶಾಲಾ ಕಾಲೇಜು ಆವರಣಗಳಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಅ.1 ರಂದು ಬೆಳಗ್ಗೆ 7 ಗಂಟೆಗೆ ಸ್ವಚ್ಫತೆಯ ಶ್ರಮದಾನ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಎಲ್ಲ ಅಧಿಕಾರಿಗಳು ತಮಗೆ ಸೂಚಿಸಿದ ಕಾರ್ಯಗಳನ್ನು ತಪ್ಪದೇ ನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಎಸಿಪಿ ಕಲಬುರಗಿ ನಗರ ಸಂತೋಷ ಬನ್ನಹಟ್ಟಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೇವ ಬಿ. ಮಹಾನಗರ ಪಾಲಿಕೆ ಅಭಿಯಂತರರಾದ ಪುರುಷೋತ್ತಮ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಿವಶರಣಪ್ಪ ಮೂಳೇಗಾಂವ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೂರ್ಯಕಾಂತ ಮದಾನೆ, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿ ಲಕ್ಷ್ಮೀಕಾಂತ, ಭಾರತ ಸೇವಾದಳ ಜಿಲ್ಲಾ ಸಮಿತಿ ಚಂದ್ರಶೇಖರ ಜಮಾದಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕ ಡಿ.ಕೆ.ರಾಜರತ್ನ. ಮತ್ತು ಪ್ರಥಮ ದರ್ಜೆ ಸಹಾಯಕ ರವಿ ಮಿರಸ್ಕರ್ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

PREV

Recommended Stories

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಠಲಗೌಡ ತಲೆಬುರುಡೆ ತಂದ ಬಂಗ್ಲೆಗುಡ್ಡೆಯಲ್ಲಿ ಇಂದು ಮಹಜರು?