ವಿಜಯ ದುರ್ಗಾದೇವಿ ಜಾತ್ರಾ ಮಹೋತ್ಸವ ಅದ್ಧೂರಿ

KannadaprabhaNewsNetwork |  
Published : Oct 28, 2026, 02:00 AM IST
೨೭ ವೈಎಲ್‌ಬಿ ೦೧ಯಲಬುರ್ಗಾದಲ್ಲಿ ವಿಜಯದುರ್ಗಾದೇವಿ ಜಾತ್ರಾ ಮಹೋತ್ಸವ ನಿಮಿತ್ತ ದೇವಿ ಮೂರ್ತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. | Kannada Prabha

ಸಾರಾಂಶ

ಸಾವಿರಾರು ಭಕ್ತರ ಸಮ್ಮುಖದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ

ಯಲಬುರ್ಗಾ: ಪಟ್ಟಣದ ಆರಾಧ್ಯದೈವ ಶ್ರೀ ವಿಜಯ ದುರ್ಗಾದೇವಿ ದೇವಸ್ಥಾನದಲ್ಲಿ ದಸರಾ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಶ್ರೀದೇವಿ ಪುರಾಣದ ಮಹಾಮಂಗಲೋತ್ಸವದ ಅಂಗವಾಗಿ ಮಂಗಳವಾರ ಜಾತ್ರಾ ಮಹೋತ್ಸವ ಜರುಗಿತು.

ಅಂಬಾರಿ ಮೇಲೆ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಮೆರವಣಿಗೆ ನಡೆಸಲಾಯಿತು.

ದೇವಸ್ಥಾನದಿಂದ ಆರಂಭಗೊಂಡ ಅಂಬಾರಿ ಮೆರವಣಿಗೆಯಲ್ಲಿ ಮಹಿಳೆಯರು ಕುಂಭಕಳಸ ಹೊತ್ತು ಪಾಲ್ಗೊಂಡರು. ವೇದಘೋಷ, ವಾದ್ಯಮೇಳ, ಕರಡಿ ಮಜಲು, ಬಾಜಾ-ಭಜಂತ್ರಿ ಹಾಗೂ ವೀರಗಾಸೆ ಕುಣಿತ ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಮೆರವಣಿಗೆ ಸಂಜೆ ವೇಳೆಗೆ ದೇವಸ್ಥಾನಕ್ಕೆ ತಲುಪಿತು.

ಇದಕ್ಕೂ ಮುನ್ನ ದೇವಸ್ಥಾನದಲ್ಲಿ ದೇವಿಯ ಮೂರ್ತಿಗೆ ವಿಶೇಷ ಧಾರ್ಮಿಕ ಪೂಜೆ ಹಾಗೂ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ದೇವಸ್ಥಾನವನ್ನು ಹೂವಿನ ಅಲಂಕಾರ ಮತ್ತು ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ದೇವಿಯ ದರ್ಶನ ಪಡೆದು ಭಕ್ತಿಭಾವ ಮೆರೆದರು.

ಹೋಳಿಗೆ ಮಹಾಪ್ರಸಾದ: ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ಹೋಳಿಗೆ ಸೇರಿದಂತೆ ವಿವಿಧ ಬಗೆಯ ಖಾದ್ಯಗಳ ಮಹಾಪ್ರಸಾದ ವಿತರಿಸಲಾಯಿತು. ಹೋಳಿಗೆ, ಕಡುಬು, ಸಂಡಿಗೆ, ಹಪ್ಪಳ, ಬದನೆಕಾಯಿಪಲ್ಯ, ತುಪ್ಪ, ಅನ್ನ ಮತ್ತು ಸಾಂಬಾರು ಸೇರಿದಂತೆ ವಿವಿಧ ಖಾದ್ಯಗಳನ್ನು ಸಾವಿರಾರು ಭಕ್ತರು ಸ್ವೀಕರಿಸಿದರು. ಭಕ್ತವೃಂದದ ಸಹಕಾರದಲ್ಲಿ ಬೃಹತ್ ಪ್ರಮಾಣದಲ್ಲಿ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಜನಸಾಗರದಲ್ಲಿ ಭಕ್ತರು ಪ್ರಸಾದವನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷರು, ಸರ್ವ ಪದಾಧಿಕಾರಿಗಳು, ಗಣ್ಯರು, ಮುಖಂಡರು ಹಾಗೂ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡಿಗರ ನೌಕರಿಗಾಗಿ ಮಹಿಷಿ ವರದಿ ಮಂಡಿಸುವಂತೆ ಒತ್ತಾಯ
ಮಹಿಳೆ, ಮಕ್ಕಳ ಸುರಕ್ಷತೇಲಿ ಬೆಂಗ್ಳೂರು 1ನೇ ಸ್ಥಾನ: ಸೀಮಂತ್‌