ಮಹಾನಗರದ 209 ಗಣಪನಿಗೆ ಅದ್ಧೂರಿ ಬೀಳ್ಕೊಡುಗೆ!

KannadaprabhaNewsNetwork |  
Published : Sep 23, 2026, 02:15 AM IST
ಹುಬ್ಬಳ್ಳಿ ನಗರದ ವಿವಿಧೆಡೆ ಮಂಗಳವಾರ 9ನೇ ದಿನದ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. | Kannada Prabha

ಸಾರಾಂಶ

ಒಂಬತ್ತು ದಿನಗಳ ಕಾಲ ಶ್ರದ್ಧೆ- ಭಕ್ತಿಯಿಂದ ಪೂಜಿಸಲ್ಪಟ್ಟ ವಿಘ್ನವಿನಾಶಕನಿಗೆ ಮಂಗಳವಾರ ಅದ್ಧೂರಿ ಮೆರವಣಿಗೆ ಮೂಲಕ ವಿದಾಯ ಹೇಳಲಾಯಿತು.

ಹುಬ್ಬಳ್ಳಿ:

ಒಂಬತ್ತು ದಿನಗಳ ಕಾಲ ಶ್ರದ್ಧೆ- ಭಕ್ತಿಯಿಂದ ಪೂಜಿಸಲ್ಪಟ್ಟ ವಿಘ್ನವಿನಾಶಕನಿಗೆ ಮಂಗಳವಾರ ಅದ್ಧೂರಿ ಮೆರವಣಿಗೆ ಮೂಲಕ ವಿದಾಯ ಹೇಳಲಾಯಿತು. ಹುಬ್ಬಳ್ಳಿ- ಧಾರವಾಡ ಮಹಾನಗರ ವ್ಯಾಪ್ತಿಯ ವಿವಿಧೆಡೆ ಪ್ರತಿಷ್ಠಾಪಿಸಿದ್ದ 209 ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಸಂಭ್ರಮದಿಂದ ನಡೆಯಿತು.

ಹಳೇಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್‌ನಲ್ಲಿ ಪ್ರತಿಷ್ಠಾಪಿಸಲಾಗಿದ್ದ "ಹಳೇ ಹುಬ್ಬಳ್ಳಿಯ ಮಹಾರಾಜ " ಸೇರಿದಂತೆ ವಿವಿಧ ಬಡಾವಣೆಗಳ ಗಣೇಶ ಮೂರ್ತಿಗಳ ಮೆರವಣಿಗೆ ವಿಶೇಷ ಗಮನ ಸೆಳೆಯಿತು.

ವಿಸರ್ಜನಾ ಮೆರವಣಿಗೆಗೆ ಚಾಲನೆ:

ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿಗಳ ಮಹಾಮಂಡಳ ವತಿಯಿಂದ ಇಲ್ಲಿಯ ಹಳೇ ಹುಬ್ಬಳ್ಳಿಯ ದುರ್ಗದಬೈಲ್‌ನಲ್ಲಿ ಮಂಗಳವಾರ 9ನೇ ದಿನದ ಗಣಪತಿ ವಿಗ್ರಹಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆಗೆ ಮಾಜಿ ಶಾಸಕ ಅಶೋಕ ಕಾಟವೆ ಸೇರಿದಂತೆ ಮಹಾಮಂಡಳದ ಪದಾಧಿಕಾರಿಗಳು ಚಾಲನೆ ನೀಡಿದರು. ಬಳಿಕ ನಡೆದ ಮೆರವಣಿಗೆಯಲ್ಲಿ ಡಿಜೆ ಸೌಂಡ್ ಹಾಗೂ ಸಂಪ್ರದಾಯಿಕ ವಾದ್ಯಮೇಳದ ಸದ್ದು ಮೊಳಗಿತು.

ಈ ಸಂದರ್ಭದಲ್ಲಿ ಮಾಜಿ ಮೇಯರ್ ರಾಧಾಬಾಯಿ ಸಫಾರೆ, ಮಹಾನಗರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸದಾನಂದ ಡಂಗನವರ, ಗಣೇಶೋತ್ಸವ ಸಮಿತಿ ಅಧ್ಯಕ್ಣ ಎಸ್.ಎಸ್. ಸಾಲಿಮಠ, ಮಹಾಮಂಡಳದ ಉಪಾಧ್ಯಕ್ಷರಾದ ಅಲ್ತಾಫ್ ಕಿತ್ತೂರ, ಕಾರ್ಯದರ್ಶಿ ಗಳಾದ ಅಮರೇಶ ಹಿಪ್ಪರಗಿ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ ವಿವಿಗೆ ಸಮರ್ಪಕ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
ವಿಜೃಂಭಣೆಯಿಂದ ಕೃಷ್ಣಮೃಗ ಅಭಯಾರಣ್ಯ ಸುವರ್ಣ ಮಹೋತ್ಸವಕ್ಕೆ ನಿರ್ಧಾರ