ಸಂಭ್ರಮದ ಗಾಳಿ ದುರ್ಗಮ್ಮ ಜಾತ್ರಾ ಮಹೋತ್ಸವ

KannadaprabhaNewsNetwork |  
Published : Aug 05, 2026, 02:00 AM IST
ಹುಬ್ಬಳ್ಳಿ ಹೊಸೂರು ಕ್ರಾಸ್‌ ಬಳಿಯ ಶ್ರೀ ಗಾಳಿ ದುರ್ಗಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ದೇವಿಯ ಪಲ್ಲಕ್ಕಿ ಉತ್ಸವ ಜರುಗಿತು. | Kannada Prabha

ಸಾರಾಂಶ

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ದೇವಿಗೆ ವಿಶೇಷ ಪೂಜೆ ಹಾಗೂ ಭಂಡಾರ ಅರ್ಪಿಸುವ ಮೂಲಕ ಭಕ್ತಿ ಮೆರೆದರು.

ಹುಬ್ಬಳ್ಳಿ:

ಇಲ್ಲಿನ ಹೊಸೂರು ಶ್ರೀಗಾಳಿ ದುರ್ಗಮ್ಮ ದೇವಸ್ಥಾನದ ಜಾತ್ರೆಯೂ ಮಂಗಳವಾರ ಶ್ರದ್ಧಾ-ಭಕ್ತಿಯಿಂದ ಅದ್ಧೂರಿಯಾಗಿ ನಡೆಯಿತು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ದೇವಿಗೆ ವಿಶೇಷ ಪೂಜೆ ಹಾಗೂ ಭಂಡಾರ ಅರ್ಪಿಸುವ ಮೂಲಕ ಭಕ್ತಿ ಮೆರೆದರು. ಜಾತ್ರೆಯ ಅಂಗವಾಗಿ ದೇವಿಗೆ ವಿಶೇಷ ಅಲಂಕಾರ ಪೂಜೆ, ನೈವೇದ್ಯ ಹಾಗೂ ಭಂಡಾರ ಅರ್ಪಿಸಲಾಯಿತು. ಮೆರವಣಿಗೆಯುದ್ಧಕ್ಕೂ ಭಂಡಾರ ಎರಚುತ್ತಾ ಭಕ್ತಿ ಭಾವ ಮೆರೆದರು.

ಬೆಳಗ್ಗೆ ದೇವಸ್ಥಾನದ ಆಡಳಿತ ಮಂಡಳಿ, ಹಿರಿಯ ಭಕ್ತ ವೃಂದದಿಂದ ಹಾಗೂ ಅಪಾರ ಭಕ್ತರೊಂದಿಗೆ ವಾಣಿವಿಲಾಸ ಸರ್ಕಲ್‌ ಆಂಜನೇಯ ದೇವಸ್ಥಾನದಿಂದ ಆರಂಭವಾದ ಪಲ್ಲಕ್ಕಿ ಉತ್ಸವ ಮುಖ್ಯರಸ್ತೆಯ ಮೂಲಕ ಗಾಳಿ ದುರ್ಗಮ್ಮ ದೇವಸ್ಥಾನಕ್ಕೆ ಆಗಮಿಸಿ ಸಮಾವೇಶಗೊಂಡಿತು.

ಬೆಳಗ್ಗೆಯಿಂದ ತಡರಾತ್ರಿ ವರೆಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು. ವಿಶೇಷ ಪೂಜೆ, ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ, ಮಿರಜ್‌, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರಗಿ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಾಸಕ ಹಿಟ್ನಾಳಗೆ ಸಚಿವ ಸ್ಥಾನ ತಪ್ಪಿದ್ಯಾಕೆ ?
ಟಗರು, ಕುರಿ ಕಳ್ಳತನ, ಇಬ್ಬರು ಯುವಕರ ಬಂಧನ