ತೊರೆಕೆಂಪೋಹಳ್ಳಿಯಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವಕ್ಕೆ ಚಾಲನೆ

KannadaprabhaNewsNetwork |  
Published : Nov 23, 2026, 02:00 AM IST
ಪೋಟೋ 11 : ತೊರೆಕೆಂಪೋಹಳ್ಳಿ ಗ್ರಾಮದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಗ್ರಾಮಸ್ಥರು ಬಸವೇಶ್ವರ ದೇವರಿಗೆ ವಿಶೇಷ ಪೂಜಾ ಸಲ್ಲಿಸಿದರು | Kannada Prabha

ಸಾರಾಂಶ

ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಗ್ರಾಮದೇವತೆ ಹಾಗೂ ಶ್ರೀ ಗೋಪಾಲಸ್ವಾಮಿ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಹಾಗೂ ಆಕರ್ಷಕ ಹೂವಿನ ಅಲಂಕಾರ ಮಾಡಲಾಗಿತ್ತು. ಸಂಜೆ ದೇವಾಲಯಗಳ ಆವರಣದಲ್ಲಿ ಭಕ್ತಾದಿಗಳು ಸಾಲಾಗಿ ಹಣತೆಗಳನ್ನು ಬೆಳಗುವ ಮೂಲಕ ಕಾರ್ತಿಕ ದೀಪೋತ್ಸವವನ್ನು ಸಂಭ್ರಮದಿಂದ ಆಚರಿಸಿದರು.

ದಾಬಸ್‍ಪೇಟೆ: ಕಾರ್ತಿಕ ಮಾಸದ ಪ್ರಯುಕ್ತ ತೊರೆಕೆಂಪೋಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರ ವತಿಯಿಂದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿದವು. ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ, ಶ್ರೀ ಗ್ರಾಮದೇವತೆ ಹಾಗೂ ಶ್ರೀ ಗೋಪಾಲಸ್ವಾಮಿ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ದೇವರಿಗೆ ವಿಶೇಷ ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಹಾಗೂ ಆಕರ್ಷಕ ಹೂವಿನ ಅಲಂಕಾರ ಮಾಡಲಾಗಿತ್ತು. ಸಂಜೆ ದೇವಾಲಯಗಳ ಆವರಣದಲ್ಲಿ ಭಕ್ತಾದಿಗಳು ಸಾಲಾಗಿ ಹಣತೆಗಳನ್ನು ಬೆಳಗುವ ಮೂಲಕ ಕಾರ್ತಿಕ ದೀಪೋತ್ಸವವನ್ನು ಸಂಭ್ರಮದಿಂದ ಆಚರಿಸಿದರು. ಈ ವೇಳೆ ಮಾತನಾಡಿದ ಅರ್ಚಕ ನವೀನ್ ಕುಮಾರ್ ಅವರು, ಕಾರ್ತಿಕ ಮಾಸದಲ್ಲಿ ದೀಪ ಹಚ್ಚಿ ದೇವರನ್ನು ಆರಾಧಿಸುವುದರಿಂದ ಗ್ರಾಮದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ನೆಲೆಸುತ್ತದೆ. ಗ್ರಾಮಸ್ಥರೆಲ್ಲರೂ ಒಗ್ಗೂಡಿ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಆಚರಿಸುತ್ತಿರುವುದು ಸಂತಸದ ವಿಷಯ ಎಂದು ತಿಳಿಸಿದರು.

ಗ್ರಾಮದ ಹಿರಿಯರು, ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಸಮ್ಮೇಳನ ಯಶಸ್ವಿ
ಸರ್ಕಾರದ ಅನುದಾನದ ಜೊತೆಗೆ ದಾನಿಗಳ ನೆರವು ಪಡೆಯಿರಿ: ವಿಜಯ ಮಾನೆ