ಆನೆ ಮೇಲೆ ಅಂಬಾರಿಯ ಅದ್ಧೂರಿ ಮೆರವಣಿಗೆ

KannadaprabhaNewsNetwork |  
Published : Mar 12, 2024, 02:01 AM IST
11ಜಿಎನ್‌ಜಿ1 | Kannada Prabha

ಸಾರಾಂಶ

ಗಂಗಾವತಿ ತಾಲೂಕಿನ ಐತಿಹಾಸಿಕ ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವದ ಅಂಗವಾಗಿ ಆನೆ ಮೇಲೆ ಅಂಬಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.

ಆನೆಗೊಂದಿ ಉತ್ಸವದ ಮೆರವಣಿಗೆಗೆ ಶಾಸಕ ಜನಾರ್ದನ ರೆಡ್ಡಿ ಚಾಲನೆ

ಅಂಬಾರಿ ಮೇಲೆ ಮೆರವಣಿಗೆ, ಆಕರ್ಷಕ ಕಲಾತಂಡಗಳ ನೃತ್ಯಕನ್ನಡಪ್ರಭ ವಾರ್ತೆ ಆನೆಗೊಂದಿ

ಗಂಗಾವತಿ ತಾಲೂಕಿನ ಐತಿಹಾಸಿಕ ಇತಿಹಾಸ ಪ್ರಸಿದ್ಧ ಆನೆಗೊಂದಿ ಉತ್ಸವದ ಅಂಗವಾಗಿ ಆನೆ ಮೇಲೆ ಅಂಬಾರಿ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.

ಶ್ರೀ ಆದಿಶಕ್ತಿ ದುರ್ಗಾದೇವಿ ದೇವಸ್ಥಾನದಿಂದ ಗಗನ್ ಮಹಲ್‌ವರೆಗೆ ಭವ್ಯ ಮೆರವಣಿಗೆ ಜರುಗಿತು. ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಂಬಾರಿಯಲ್ಲಿನ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಗೆ ಪುಷ್ಪ ಗುಚ್ಚ ಸಮರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ಮೆರವಣಿಗೆಯು ಆನೆಗೊಂದಿಯ ಗತಕಾಲದ ಸಂಸ್ಕೃತಿ, ಪರಂಪರೆಯ ಮೆಲುಕು ಹಾಕುವ ರೀತಿಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಮುಖ್ಯ ಸಿಇಒ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಉತ್ಸವದ ಮೆರವಣಿಗೆ ಸಮಿತಿ ಅಧ್ಯಕ್ಷ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಹಳ್ಳಿ, ಗಂಗಾವತಿ ತಹಸೀಲ್ದಾರ ಯು.ನಾಗರಾಜ, ತಾಪಂ ಇಒ ಲಕ್ಷ್ಮೀ ದೇವಿ ಸೇರಿದಂತೆ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಗಮನ ಸೆಳೆದ ಕೋಲಾಟ ಪ್ರದರ್ಶನ:

ಆನೆಗೊಂದಿ ಉತ್ಸವದ ಮೆರವಣಿಗೆಯಲ್ಲಿ ಆಕರ್ಷಕ ಕೋಲಾಟ ಪ್ರದರ್ಶನಗೊಂಡಿತು. ಶಾಸಕರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಹಾಗೂ ಇತರ ಅಧಿಕಾರಿಗಳು ಕೋಲಾಟ ಆಡುವುದರ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಮೆರವಣಿಗೆಯ ಮೆರಗು ಹೆಚ್ಚಿಸಿದ ಆನೆ ಅಂಬಾರಿ:

ಆನೆಗೊಂದಿ ಉತ್ಸವದ ಮೆರವಣಿಗೆಯಲ್ಲಿ ಶ್ರೀ ಆದಿಶಕ್ತಿ ದುರ್ಗಾದೇವಿ ಮೂರ್ತಿಯನ್ನು ಹೊತ್ತ ಅಂಬಾರಿಯು ಮೆರವಣಿಗೆಯ ಮೆರಗನ್ನು ಹೆಚ್ಚಿಸಿತು. ಅಂಬಾರಿಯನ್ನು ಹೊತ್ತ ಆನೆಯ ಹೆಸರು ಲಕ್ಷ್ಮೀ. ಈ ಆನೆಯು ಪಕ್ಕದ ವಿಜಯನಗರ ಜಿಲ್ಲೆಯ ಹಂಪಿ ವಿರೂಪಾಕ್ಷೇಶ್ವರ ಸನ್ನಿಧಿಗೆ ಸೇರಿದ್ದು, ಇತ್ತೀಚೆಗೆ ನಡೆದ ಕನಕಗಿರಿ ಉತ್ಸವದಲ್ಲಿಯೂ ಪಾಲ್ಗೊಂಡು ಗಮನ ಸೆಳೆದಿತ್ತು. ಈಗ ಮತ್ತೆ ಆನೆಗೊಂದಿ ಉತ್ಸವಕ್ಕಾಗಿ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು ವಿಶೇಷವಾಗಿದೆ.

ವಿವಿಧ ಕಲಾ ತಂಡಗಳ ಆಕರ್ಷಣೆ:

ಆನೆಗೊಂದಿಯ ಉತ್ಸವದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ನಂದಿ ಧ್ವಜ ಸಮಾಳ ವಾದನ, ಕಹಳೆ ವಾದನ, ಕರಡಿ ಮಜಲು, ಹಲಗೆ ವಾದನ, ಮಹಿಳಾ ವೀರಗಾಸೆ, ಗೊರವರ ಕುಣಿತ, ಪೂಜಾ ಕುಣಿತ, ಜಗ್ಗಲಿಗೆ, ಮಹಿಳಾ ಡೊಳ್ಳು ಕುಣಿತ, ಹಗಲುವೇಷ, ಮೋಜಿನಗೊಂಬೆ, ಮಹಿಳಾ ತಮಟೆ ವಾದನ, ಕೀಲುಕುದುರೆ, ನಾಸಿಕ್ ಡೊಲ್, ನಗಾರಿ, ಗಾರುಡಿ ಗೊಂಬೆ, ಸೋಮನ ಕುಣಿತ, ಕಂಸಾಳೆ, ಲಂಬಾಣಿ ನೃತ್ಯ, ಹುಲಿವೇಷ, ಕೋಳಿ ನೃತ್ಯ, ಬೇಡರ ಪಡೆ, ಡ್ರಮ್ ವಾದನ, ಮಹಿಳಾ ಡೊಳ್ಳು, ಮಹಿಳಾ ಕೋಲಾಟ, ಮರಗಾಲು, ಹಗಲುವೇಷ, ಚಿಲಿಪಿಲಿಗೊಂಬೆ, ಪಟ ಕುಣಿತ, ವೀರಗಾಸೆ, ಚಂಡೆ ವಾದನ, ಕರಡಿ ಮಜಲು, ಯಕ್ಷಗಾನ ಕುಣಿತ, ಮೋಜಿನ ಗೊಂಬೆ, ಲೇಜಿಮ್ ನೃತ್ಯ ಹಾಗೂ ಇತರ ಕಲಾ ತಂಡಗಳು ಆಕರ್ಷಣೆಯಾಗಿದ್ದವು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ