153 ಶಾಲೆಗಳಲ್ಲಿ ಅದ್ಧೂರಿ ಶಾಲಾ ಪ್ರಾರಂಭೋತ್ಸವ

KannadaprabhaNewsNetwork |  
Published : May 31, 2025, 01:43 AM IST
ಪೋಟೊ ಕ್ಯಾಪ್ಸನ್:ಡಂಬಳ ಗ್ರಾಮದಲ್ಲಿ ಮಕ್ಕಳನ್ನು ಬರಮಾಡಿಕೊಳ್ಳುವುದಕ್ಕಾಗಿ ಸರಕಾರಿ ಹೆಣ್ಣು ಮಕ್ಕಳ ಶಾಲೆಗೆ ತಳಿರು ತೋರಣ ಕಟ್ಟಿರುವುದು.ಪೋಟೊ ಕ್ಯಾಪ್ಸನ್:ಡಂಬಳ ಹೋಬಳಿಯ ಚುರ್ಚಿಹಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳನ್ನು ಬರಮಾಡಿಕೊಂಡು‌ ಶಾಲಾ ಪುಸ್ತಕಗಳನ್ನು ವಿತರಣೆ ಮಾಡಲಾಯಿತು. | Kannada Prabha

ಸಾರಾಂಶ

ರಜೆಯಲ್ಲಿದ್ದ ಶಾಲಾ ಮಕ್ಕಳನ್ನು ಶೈಕ್ಷಣಿಕ ವರ್ಷಾರಂಭಕ್ಕೆ ಸ್ವಾಗತಿಸಲು ಶಿಕ್ಷಣ ಇಲಾಖೆ ಸಂಪೂರ್ಣ ಸಜ್ಜಾಗಿ ಮಕ್ಕಳನ್ನು ಹೊಸ ಉತ್ಸಾಹದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಡಂಬಳ: ರಜೆಯಲ್ಲಿದ್ದ ಶಾಲಾ ಮಕ್ಕಳನ್ನು ಶೈಕ್ಷಣಿಕ ವರ್ಷಾರಂಭಕ್ಕೆ ಸ್ವಾಗತಿಸಲು ಶಿಕ್ಷಣ ಇಲಾಖೆ ಸಂಪೂರ್ಣ ಸಜ್ಜಾಗಿ ಮಕ್ಕಳನ್ನು ಹೊಸ ಉತ್ಸಾಹದೊಂದಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನಾರಂಭಗೊಂಡಿದ್ದು ಬೇಸಿಗೆ ರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಗಳತ್ತ ಹೆಜ್ಜೆ ಹಾಕಿದರು. ಬೇಸಿಗೆ ರಜೆ ಬಳಿಕ ಆರಂಭವಾಗುತ್ತಿರುವ ಸರ್ಕಾರಿ ಶಾಲೆಗಳನ್ನು ವಿವಿಧ ಹೂವುಗಳಿಂದ ಅಲಂಕರಿಸಿ ಹಬ್ಬದ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಸಿ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಸ್ವಾಗತಿಸಲಾಯಿತು.

2025-26ನೇ ಶೈಕ್ಷಣಿಕ ವರ್ಷದ ಮೊದಲ ದಿನವಾದ ಶುಕ್ರವಾರ ಶಾಲೆಗಳಲ್ಲಿ ಸಿಹಿಯೂಟ ಸಿದ್ಧಪಡಿಸಿದ್ದು ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಬಡಿಸಲಾಯಿತು. ಕಳೆದ ಒಂದೂವರೆ ತಿಂಗಳಿನಿಂದ ರಜೆ ಇದ್ದ ಕಾರಣ ಶಾಲೆಗಳನ್ನು ಸ್ವಚ್ಛಗೊಳಿಸಿ ತಳಿರು ತೋರಣಗಳಿಂದ ಸಿಂಗರಿಸಿ ಹಬ್ಬದ ವಾತಾವರಣ ನಿರ್ಮಿಸಲಾಗಿತ್ತು. ಶಾಲೆಗಳು ಸರ್ವಾಲಂಕೃತಗೊಂಡಿರುವುದನ್ನು ಮಕ್ಕಳು ನೋಡಿ ಖುಷಿಯಿಂದಲೇ ಶಾಲಾ ಕೊಠಡಿಗಳಿಗೆ ತೆರಳಿದರು. ಕೆಲ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಸಿಹಿ ಹಂಚಿ, ಗುಲಾಬಿ ಹೂ ನೀಡುವ ಮೂಲಕ ಶಾಲೆಗೆ ಬರಮಾಡಿಕೊಂಡಿದ್ದು ವಿಶೇಷವಾಗಿತ್ತು.

ತಾಲೂಕಿನಾದ್ಯಂತ ಇರುವ 153 ಶಾಲೆಗಳು ಇಂದು ಪುನಾರಂಭಗೊಂಡಿದ್ದು. ಈಗಾಗಲೇ ಶಾಲೆಗೆ ಆಗಮಿಸುವ ಮಕ್ಕಳಿಗೆ ಪಠ್ಯ ಪುಸ್ತಕ ಸೇರಿದಂತೆ ಇತರೆ ಸೌಲಭ್ಯವನ್ನು ಶಾಲೆ ಆರಂಭದಲ್ಲೇ ಸಂಪೂರ್ಣ ದೊರಕಿಸಲು ಮುಂದಾಯಿತು.

ದಾಖಲಾತಿಯ ಆಂದೋಲನ: ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು ಎಂದು ಇಲಾಖೆಯು ತಾಲೂಕು ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕುರಿತು ಜಾಗೃತಿ ಕಾರ್ಯಕ್ರಮ, ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ 1ನೇ ತರಗತಿಗೆ ದಾಖಲಾತಿ ಮಾಡಿಸಲು ಶಿಕ್ಷಕರು ಮನೆ ಮನೆಗೆ ತೆರಳಿ ಪಾಲಕರಿಗೆ ಸೌಲಭ್ಯಗಳ ಕುರಿತು ಮನವರಿಕೆ ಮಾಡಿಕೊಡಲು ಮುಂದಾಗಿದ್ದಾರೆ.

ಹೆಚ್ಚಿನ ಮಕ್ಕಳು ತರಗತಿಗೆ ಹಾಜರಾಗುವಂತೆ ಮತ್ತು ಶಾಲಾ ದಾಖಲಾತಿ ಹೆಚ್ಚಿಸುವುದಕ್ಕಾಗಿ ಮುಖ್ಯ ಶಿಕ್ಷಕರು, ಗುರುವೃಂದ ಹಾಗೂ ಸಿಆರ್‌ಪಿ, ಬಿಆರ್‌ಪಿಗಳು ವಾಟ್ಸಪ್, ಫೇಸ್ಬುಕ್ ಇನಸ್ಟಾಗ್ರಾಮ್ ಮೂಲಕ ಕನ್ನಡ ಶಾಲೆಗಳ‌ ವಿಷಯವಾಗಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದರ ಮೂಲಕ ಕನ್ನಡ ಶಾಲೆಗಳತ್ತ ದಾಖಲಾತಿ ಹೆಚ್ಚಿಸಲು ಹೋಸ ಪ್ರಯತ್ನಗಳು ಕೂಡ ತಾಲೂಕಿನ ಮತ್ತು ಡಂಬಳ ಹೋಬಳಿಯಾದ್ಯಂತ ಕಂಡುಬಂದಿತು.

ಪಠ್ಯ ಪುಸ್ತಕ ಪೂರೈಕೆ: ತಾಲೂಕಿನಲ್ಲಿ 1ರಿಂದ10ನೇ ತರಗತಿ ಮಕ್ಕಳಿಗೆ 3 ಲಕ್ಷದ 48 ಸಾವಿರ ಪಠ್ಯ -ಪುಸ್ತಕಗಳ ಬೇಡಿಕೆಯಿದ್ದು, 2 ಲಕ್ಷದ 86 ಸಾವಿರದ 500 ಪುಸ್ತಕಗಳ ಸರಬರಾಜಾಗಿದೆ. ಉಳಿದ ಪುಸ್ತಕಗಳು ಶೀಘ್ರದಲ್ಲಿಯೇ ಬರಲಿವೆ. ಬಂದಿರುವ ಪುಸ್ತಕಗಳನ್ನು ಆಯಾ ಶಾಲೆಗೆ ವಿತರಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಹೊಸ ಹೊಸ ಶೈಕ್ಷಣಿಕ ಆಯಾಮಗಳ ಮೂಲಕ ಮಕ್ಕಳ ಪ್ರಗತಿಯ ಸಂಕಲ್ಪದೊಂದಿಗೆ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿ, ಸಿಹಿ ವಿತರಿಸುವ ಮೂಲಕ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು ಎಂದು ಮುಂಡರಗಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹನಮಂತಪ್ಪ ಪಡ್ನೆಸ ತಿಳಿಸಿದ್ದಾರೆ.

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು