ಮಾಗಡಿ: ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ವೈಕುಂಠ ದ್ವಾರ ನಿರ್ಮಿಸಿ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ವೈಕುಂಠ ಏಕಾದಶಿ ಪ್ರಯುಕ್ತ ಪಟ್ಟಣದ ತಿರುಮಲೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಮುಂಜಾನೆ 3.30ರಿಂದ ಪೂಜಾ ಕೈಂಕರ್ಯಗಳು ಆರಂಭವಾಗಿ, ಮುಂಜಾನೆ 5.30ಕ್ಕೆ ವೈಕುಂಠ ದ್ವಾರದ ಮೂಲಕ ಭಕ್ತರು ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ತಾಲೂಕಷ್ಟೇ ಅಲ್ಲದೆ, ನೆರೆಹೊರೆಯ ಜಿಲ್ಲೆಗಳಿಂದಲೂ ಆಗಮಿಸಿ ಶ್ರೀರಂಗನ ದರ್ಶನ ಪಡೆದರು. ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಅಲಂಕಾರ ಮಾಡಲಾಗಿತ್ತು. ಭಕ್ತರಿಗೆ ಲಾಡು ಪ್ರಸಾದ ನೀಡಲಾಯಿತು.ಒಳಗೆರೆ ವೆಂಕಟರಮಣ ದೇಗುಲ: ಪಟ್ಟಣದ ಗೌರಮ್ಮನ ಕೆರೆ ಬಳಿ ಇರುವ ಒಳಗೆರೆ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಎರಡನೇ ವರ್ಷದ ವೈಕುಂಠ ಏಕಾದಶಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟರಮಣ ಸ್ವಾಮಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ ಏರ್ಪಡಿಸಲಾಗಿತ್ತು. ಭಕ್ತರಿಗೆ ಅನ್ನ ಸಂತರ್ಪಣೆ ಹಾಗೂ ಲಾಡು ಪ್ರಸಾದ ವಿನಿಯೋಗ ಮಾಡಲಾಯಿತು.
ಪಟ್ಟಣದ ಗದ್ದೆ ಬಯಲಿನ ಬಳಿ ಇರುವ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿತ್ತು. ವಿಶೇಷ ಪೂಜೆ ಏರ್ಪಡಿಸಿ ಬಂದಿದ್ದ ಭಕ್ತರಿಗೆ ಲಾಡು ಪ್ರಸಾದ ವಿನಿಯೋಗ ಮಾಡಲಾಯಿತು.ಪಟ್ಟಣದ ಕಲ್ಯಾಗೇಟ್ ನ ವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿತ್ತು. ಸಾಕಷ್ಟು ಭಕ್ತರು ವೈಕುಂಠ ದ್ವಾರ ಪ್ರವೇಶ ಮಾಡಿ ವೈಕುಂಠ ಏಕಾದಶಿಯನ್ನು ಭಕ್ತಿಯಿಂದ ಆಚರಿಸಿದರು. ತಾಲೂಕಿನ ಅತ್ಯಂತ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ಫೋಟೋ 23ಮಾಗಡಿ2:ಮಾಗಡಿಯ ಗೌರಮ್ಮನ ಕೆರೆ ಬಳಿ ಇರುವ ಒಳಗೆರೆ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.