ಅಣ್ಣಿಗೇರಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಯಾತ್ರೆ ಅಣ್ಣಿಗೇರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಾಯಿ ಭುವನೇಶ್ವರಿ ಮೂರ್ತಿಗೆ ನಮಿಸುವ ಮೂಲಕ ಸ್ವಾಗತಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಕನ್ನಡ ನಮ್ಮ ಹೆಮ್ಮೆಯ ಭಾಷೆ. ನೆಲ-ಜಲ ಉಳಿವಿಗಾಗಿ ಶ್ರಮಿಸೋಣ. ಕನ್ನಡ ನುಡಿ ಹೆತ್ತ ತಾಯಿ ಇದ್ದಂತೆ ಎಂದರು.
ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥಯಾತ್ರೆ ಪ್ರತಿಯೊಬ್ಬ ನಾಗರಿಕನ ಹಿರಿಮೆಗೆ ಸಾಕ್ಷಿಯಾಗಿದೆ ಎಂದರು.ಕಸಾಪ ಜಿಲ್ಲಾಧ್ಯಕ್ಷ ಲಿಂಗರಾಜ ಅಂಗಡಿ ಮಾತನಾಡಿ, ಜಿಲ್ಲೆ, ತಾಲೂಕಿನಾದ್ಯಂತ ಸಾಗುತ್ತಿರುವ ಕನ್ನಡ ರಥಯಾತ್ರೆಯನ್ನು ಸ್ವಾಗತಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅವರ ಕರ್ತವ್ಯ ನಿಭಾಯಿಸಿದ್ದಾರೆ. ಸಮಸ್ತ ಕನ್ನಡಾಭಿಮಾನಿಗಳ ಪರವಾಗಿ ಧನ್ಯವಾದಗಳು ಎಂದು ತಿಳಿಸಿದರು.
ಕಲಘಟಗಿ:
ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷರಾ ಡಾ. ಲಿಂಗರಾಜ ಅಂಗಡಿ, ತಹಸೀಲ್ದಾರ್ ವೀರೇಶ ಮುಳಗುಂದಮಠ, ಸಿಪಿಐ ಶ್ರೀಶೈಲ ಕೌಜಲಗಿ, ತಾಲೂಕು ಕಸಾಪ ಅಧ್ಯಕ್ಷ ರಮೇಶ ಸೋಲಾರಗೊಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥಗೌಡ ಮುರಳ್ಳಿ, ಹರೀಶ ಮಠದ, ಸೋಮು ಬೆನ್ನೂರ, ಐ.ಸಿ. ಗೋಕುಲ, ಗಂಗಪ್ಪ ಗೌಳಿ, ಎಸ್.ಎಸ್. ತಡಸಮಠ, ಕೃಷ್ಣಾ ತಹಸೀಲ್ದಾರ್, ಪ್ರಮೋದ ಪಾಲ್ಕರ, ಈಶ್ವರ ಜವಳಿ, ವೈ.ಜಿ. ಭಗವತಿ, ಶ್ರೀಧರ ಪಾಟೀಲ ಕುಲಕರ್ಣಿ, ಸೋಮಲಿಂಗ ಒಡೆಯರ, ಶಂಕರಗೌಡ ಭಾವಿಕಟ್ಟಿ, ಪಪಂ ಸದಸ್ಯರು ಸೇರಿದಂತೆ ತಾಲೂಕು ಕಸಾಪ ಸದಸ್ಯರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ವಿವಿಧ ಶಾಲೆಗಳ ಸಿಬ್ಬಂದಿ ಮತ್ತು ಮಕ್ಕಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ಕನ್ನಡ ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.