ಕಿತ್ತೂರು ಉತ್ಸವ ವೀರಜ್ಯೋತಿಗೆ ಅದ್ಧೂರಿ ಸ್ವಾಗತ

KannadaprabhaNewsNetwork |  
Published : Oct 21, 2023, 12:30 AM IST
ಕಿತ್ತೂರು ಉತ್ಸವದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಯನ್ನು ಬೆಳಗಾವಿಯಲ್ಲಿ ಶಾಸಕ ಆಸೀಪ್‌ ಸೇಠ್‌ ಸ್ವಾಗತಿಸಿಕೊಂಡರು | Kannada Prabha

ಸಾರಾಂಶ

ಕಿತ್ತೂರು ಉತ್ಸವ ವೀರಜ್ಯೋತಿಗೆ ಅದ್ಧೂರಿ ಸ್ವಾಗತ

ಕನ್ನಡಪ್ರಭ ವಾರ್ತೆ ಬೆಳಗಾವಿ ಕಿತ್ತೂರು ಉತ್ಸವ ನಿಮಿತ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ವೀರಜ್ಯೋತಿಗೆ ನಗರದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸೀಪ್ (ರಾಜು) ಸೇಠ್ ವೀರಜ್ಯೋತಿಗೆ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಶಾಸಕ ಬಾಬಾಸಾಹಬ್ ಪಾಟೀಲ, ಮಹಾನಗರ ಪಾಲಿಕೆ ಮೇಯರ್ ಶೋಭಾ ಸೋಮನಾಚೆ,ಉಪಮೇಯರ್ ರೇಷ್ಮಾ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ವಾರ್ತಾ ಇಲಾಖೆ ಉಪ ನಿರ್ದೇಶಕ ಗುರುನಾಥ ಕಡಬೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪಾಲಿಕೆಯ ಸದಸ್ಯರು ಹಾಗೂ ಮತ್ತಿತರ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶಾಸಕ ಆಸೀಫ್ (ರಾಜು) ಸೇಠ್ ಹಾಗೂ ಶಾಸಕ ಬಾಬಾಸಾಹಬ್ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೇರಿದಂತೆ ಎಲ್ಲ ಗಣ್ಯರು ಚೆನ್ನಮ್ಮ ವೃತ್ತದಲ್ಲಿರುವ ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ‌ಮಾಡಿದರು. ಬಳಿಕ ನಗರದ ಪ್ರಮುಖ ಮಾರ್ಗದಲ್ಲಿ ಸಂಚರಿಸಿದ ವೀರಜ್ಯೋತಿಯನ್ನು ಬೆಳಗಾವಿಯಿಂದ ನೇರವಾಗಿ ಚೆನ್ನಮ್ಮನ ಹುಟ್ಟೂರು ಕಾಕತಿ ಗ್ರಾಮಕ್ಕೆ ಬೀಳ್ಕೊಡಲಾಯಿತು.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ