ಗೃಹಲಕ್ಷ್ಮಿ ಹಣದಾಸೆಗೆ ಅಜ್ಜಿ ಕೊಂದ ಮೊಮ್ಮಗ

KannadaprabhaNewsNetwork |  
Published : Nov 20, 2026, 02:45 AM IST
ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕೊಂದ ಮೊಮ್ಮಗ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ತನ್ನ ಸ್ವಂತ ಅಜ್ಜಿಯನ್ನೇ ಮೊಮ್ಮಗ ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.ಅರಳಿಕಟ್ಟಿ ಗ್ರಾಮದ ಹಮ್ಮವ್ವಾ ಬಾಲಪ್ಪ ಸನದಿ (78) ಕೊಲೆಯಾದ ವೃದ್ಧೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಕೆಯ ಮೊಮ್ಮಗ ಭೀಮಪ್ಪ ರಾಮಪ್ಪ ಸನದಿ (20) ಹಾಗೂ ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಮೃತಳ ಪುತ್ರ ರಾಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗೃಹಲಕ್ಷ್ಮಿ ಯೋಜನೆ ಹಣಕ್ಕಾಗಿ ತನ್ನ ಸ್ವಂತ ಅಜ್ಜಿಯನ್ನೇ ಮೊಮ್ಮಗ ಬರ್ಬರವಾಗಿ ಕೊಲೆ ಮಾಡಿರುವ ಅಮಾನವೀಯ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ.ಅರಳಿಕಟ್ಟಿ ಗ್ರಾಮದ ಹಮ್ಮವ್ವಾ ಬಾಲಪ್ಪ ಸನದಿ (78) ಕೊಲೆಯಾದ ವೃದ್ಧೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಕೆಯ ಮೊಮ್ಮಗ ಭೀಮಪ್ಪ ರಾಮಪ್ಪ ಸನದಿ (20) ಹಾಗೂ ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ ಮೃತಳ ಪುತ್ರ ರಾಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಹಮ್ಮವ್ವಾ ಅವರು ನ.10ರಂದು ಪಾಶ್ಚಾಪುರ ಸಂತೆಗೆ ಹೋಗಿ ಬರುವುದಾಗಿ ಮನೆಯಿಂದ ತೆರಳಿದ್ದರು. ಆದರೆ, ಮರಳಿ ಬಾರದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿದ್ದರು. ನ.15ರಂದು ಜಿನರಾಳ ಗ್ರಾಮದ ಬಳಿಯ ಘಟಪ್ರಭಾ ನದಿ ಡ್ಯಾಂ ಹಿನ್ನೀರಿನಲ್ಲಿ ಎರಡು ಗೋಣಿ ಚೀಲಗಳಲ್ಲಿ ಕಲ್ಲುಗಳನ್ನು ಕಟ್ಟಿ ಎಸೆದಿದ್ದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿತ್ತು. ಮೃತಳ ಪುತ್ರಿ ನೀಡಿದ ದೂರಿನ ಮೇರೆಗೆ ಯಮಕನಮರಡಿ ಪೊಲೀಸರು ತನಿಖೆ ಆರಂಭಿಸಿದ್ದರು.

ಗೃಹಲಕ್ಷ್ಮಿ ಹಣವೇ ಕೊಲೆಗೆ ಕಾರಣ:

ವೃದ್ಧೆ ಹಮ್ಮವ್ವಾಳಿಗೆ ಗೃಹಲಕ್ಷ್ಮಿ ಹಣ ಬರುತ್ತಿತ್ತು. ತಾನೊಂದು ವ್ಯಾಪಾರ ಆರಂಭಿಸಬೇಕು. ಈ ಹಣದಲ್ಲಿ ತನಗೂ ಪಾಲು ಕೊಡು ಎಂದು ಬಂಧಿತ ಆರೋಪಿ, ಮೊಮ್ಮಗ ಭೀಮಪ್ಪ ಕೇಳುತ್ತಲೇ ಇದ್ದನಂತೆ. ಇದು ಕಳೆದ ಮೂರುವರೆ ವರ್ಷಗಳಿಂದ ಪೀಡಿಸುತ್ತಿದ್ದ ಎಂಬುವುದು ತನಿಖೆಯಿಂದ ತಿಳಿದುಬಂದಿದೆ. ನಂತರ ನ.10ರಂದು ಅಜ್ಜಿಯನ್ನು ಬೈಕ್‌ನಲ್ಲಿ ಭೀಮಪ್ಪ ಕರೆದುಕೊಂಡು ಹೋಗಿದ್ದ. ತಾಲೂಕಿನ ಗವಿಸಿದ್ದೇಶ್ವರ ಗುಡ್ಡದ ಬಳಿ ಹೋಗಿ ಮತ್ತೆ ಅಜ್ಜಿಯೊಂದಿಗೆ ಹಣದ ವಿಚಾರವಾಗಿ ಜಗಳ ತೆಗೆದಿದ್ದಾನೆ. ಆದರೆ, ಅಜ್ಜಿ ಹಣ ನೀಡಲು ನಿರಾಕರಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಭೀಮಪ್ಪ, ಆಕೆಯನ್ನು ಕೆಳಕ್ಕೆ ನೂಕಿ, ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಂತರ ಅಜ್ಜಿ ಬಳಿಯಿದ್ದ ₹2300 ನಗದು, ಬಂಗಾರದ ಸರಗಳನ್ನು ಕಿತ್ತುಕೊಂಡು, ಚೀಲದಲ್ಲಿ ಶವ ತುಂಬಿಕೊಂಡು ಬೈಕ್‌ನಲ್ಲಿ ಸಾಗಿಸಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಗೋಣಿ ಚೀಲಗಳಿಗೆ ಎರಡು ದೊಡ್ಡ ಕಲ್ಲುಗಳನ್ನು ಕಟ್ಟಿ ನೀರಿಗೆ ಎಸೆದಿದ್ದಾನೆ ಎಂದು ವಿಚಾರಣೆ ವೇಳೆ ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದರು.

ಕೊಲೆ ಮಾಡಿದ ಬಳಿಕ ಮನೆಗೆ ಮರಳಿದ ಭೀಮಪ್ಪ, ತನ್ನ ತಂದೆ ರಾಮಪ್ಪನಿಗೆ ಅಜ್ಜಿಯನ್ನು ಕೊಲೆ ಮಾಡಿರುವುದಾಗಿ ತಿಳಿಸಿದ್ದಾನೆ. ಸ್ವಂತ ತಾಯಿಯನ್ನೇ ಮಗ ಕೊಲೆ ಮಾಡಿದ್ದರೂ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪದ ಮೇಲೆ ರಾಮಪ್ಪನನ್ನೂ ಪೊಲೀಸರು ಬಂಧಿಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ತ್ವರಿತವಾಗಿ ಭೇದಿಸಿದ ಯಮಕನಮರಡಿ ಪೊಲೀಸ್ ಠಾಣೆಯ ಪಿಐ ಜಾವೀದ್ ಎಫ್.ಮುಶಾಪುರಿ ನೇತೃತ್ವದ ಪೊಲೀಸ್ ತಂಡವನ್ನು ಎಸ್ಪಿ ಕೆ. ರಾಮರಾಜನ್ ಅಭಿನಂದಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ಯಾಂಕ್ ಸೌಲಭ್ಯ ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಿ: ಸದಾಶಿವ ಮೇತ್ರಿ
ಕಲಾ ಜಗತ್ತಿನಲ್ಲಿ ಪ್ರತಿಭೆ ಗುರುತಿಸಿಕೊಳ್ಳಿ